Maharashtra Bus Accident – ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ

Public TV
1 Min Read
MAHARASTRA BUS

ಮುಂಬೈ: ಮಹಾರಾಷ್ಟ್ರದ ಬುಲ್ದಾನಾದ ಬಳಿ ಬಸ್ ದುರಂತ (Bus Accident in Maharastra) ಪ್ರಕರಣ ಬೆಚ್ಚಿಬೀಳಿಸಿದೆ. ಇದೀಗ ದುರಂತದಲ್ಲಿ ಸಾವಿಗೀಡಾದವರಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.

ಸಾವಿಗೀಡಾದವರ ಪ್ರತಿ ಕುಟುಂಬಕ್ಕೆ 5 ಲಕ್ಷ ಪರಿಹಾರವನ್ನು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shindhe) ಘೋಷಣೆ ಮಾಡಿದ್ದಾರೆ. ಜೊತೆಗೆ ಗಾಯಗೊಂಡವರ ಚಿಕಿತ್ಸೆಯನ್ನು ಸರ್ಕಾರವೇ ಭರಿಸಲಿದೆ. ಇಲ್ಲಿಯವರೆಗೆ ಮೂರು ಮಕ್ಕಳು ಸೇರಿ ಒಟ್ಟು 26 ಜನ ಸಾವಿಗೀಡಾಗಿದ್ದಾರೆ. ಬಸ್‍ನಲ್ಲಿ ಒಟ್ಟು 33 ಜನ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರಿಂದ ಮಾಹಿತಿ ನೀಡಿದ್ದಾರೆ.

ದುರಂತಕ್ಕೆ ಪ್ರಧಾನಿ ಮೋದಿಯೂ (Narendra Modi) ಸಂತಾಪ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 50,000 ರೂ. ಆರ್ಥಿಕ ನೆರವು ಘೋಷಣೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ಘಟನೆಗೆ ಸಂತಾಪ ಸೂಚಿಸಿದ್ದಾರೆ. ದೇವರು ಮೃತರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಅನ್ಯ ಜಾತಿ ಹುಡ್ಗನನ್ನ ಪ್ರೀತಿಸಿ ಮದ್ವೆಯಾಗಿದ್ದಕ್ಕೆ ಬದುಕಿದ್ದಾಗಲೇ ಮಗಳ ಅಂತ್ಯಸಂಸ್ಕಾರ ಮಾಡಿದ ತಂದೆ

ನಡೆದಿದ್ದೇನು..?: ಸಮೃದ್ಧಿ-ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬೆಳಗ್ಗಿನ ಜಾವ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಬುಲ್ಧಾನಾ ಬಳಿ ಟೈರ್ ಬ್ಲಾಸ್ಟ್ ಆಗಿ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತು. ಅವಘಡದಲ್ಲಿ 26 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಈ ಅವಘಢದಲ್ಲಿ ಬಸ್ ಚಾಲಕ ಸೇರಿದಂತೆ 8 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Web Stories

Share This Article