ಮುಂಬೈ: ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 58ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ಷಣೆ ಮತ್ತು ಬೆಂಕಿ ನಂದಿಸುವ ಕಾರ್ಯ ಸತತವಾಗಿ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಧುಲೆ ಜಿಲ್ಲೆಯ ಶಿರ್ಪುರ್ ತಾಲೂಕಿನ ವಾಘಡಿ ಎಂಬ ಗ್ರಾಮದಲ್ಲಿ ಈ ರಾಸಾಯಿನಿಕ ಕಾರ್ಖಾನೆ ಇದ್ದು, ಬೆಳಗ್ಗೆ ಸುಮಾರು 9.45 ರ ವೇಳೆಗೆ ಕಾರ್ಖಾನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ ಕಾರಣ ಬೆಂಕಿ ಅವಘಡ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
Advertisement
#UPDATE SP Dhule, Vishwas Pandhare: 12 dead & 58 injured in the incident. #Maharashtra https://t.co/2qT9Hfv0cN
— ANI (@ANI) August 31, 2019
Advertisement
ಸಿಲಿಂಡರ್ ಸ್ಫೋಟಗೊಂಡ ವೇಳೆ ಕಾರ್ಖಾನೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಿದ್ದರು. ಈಗಾಗಲೇ 8 ಜನರ ಮೃತ ದೇಹಗಳು ಸಿಕ್ಕಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ, ವಿಪತ್ತು ನಿರ್ವಹಣ ದಳ ಬಂದು ಬೆಂಕಿ ನಂದಿಸುವ ಕೆಲಸ ಮಾಡುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
Advertisement
ಈ ವಿಚಾರವಾಗಿ ಮಾತನಾಡಿರುವ ಶಿರ್‍ಪುರ್ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು, ಪ್ರೈಮಾ ಫೇಸಿ ಎಂಬ ಕಾರ್ಖಾನೆಯಲ್ಲಿ ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಇದರಿಂದ ಬೆಂಕಿ ಹೊತ್ತಿಗೊಂಡು ಈವರೆಗೆ ಕನಿಷ್ಠ ಎಂಟು ಜನರು ಮೃತ ಪಟ್ಟಿದ್ದು ಮೃತದೇಹಗಳನ್ನು ಪೊಲೀಸ್ ಮತ್ತು ರಕ್ಷಣಾ ತಂಡಗಳು ವಶಪಡಿಸಿಕೊಂಡಿವೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.