LatestMain PostNational

ಪ್ರಧಾನಿಯನ್ನು ಭೇಟಿ ಮಾಡಿದ ಮಹಾರಾಷ್ಟ್ರ ಸಿಎಂ

Advertisements

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಬಗ್ಗೆ ಪ್ರಧಾನ ಮಂತ್ರಿ ಕಾರ್ಯಾಲಯವು ಟ್ವೀಟ್ ಮಾಡಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವ ಫೋಟೋವನ್ನು ಪೋಸ್ಟ್ ಮಾಡಿದೆ.

ಮಹಾರಾಷ್ಟ್ರದಲ್ಲಿ ಶಿಂಧೆ ನೇತೃತ್ವದಲ್ಲಿ ನೂತನ ಸರ್ಕಾರ ರಚನೆಯಾದ ನಂತರ ಮೋದಿ ಅವರೊಂದಿಗೆ ಇದು ಮೊದಲ ಸಭೆ ಆಗಿದೆ. ಶಿಂಧೆ ಮತ್ತು ಫಡ್ನವೀಸ್ ಅವರು ಪ್ರಧಾನಿಯನ್ನು ಅವರ ನಿವಾಸದಲ್ಲಿ ಭೇಟಿಯಾದರು. ಈ ವೇಳೆ ಶಿಂಧೆ ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಮೋದಿ ಅವರ ಆಶೀರ್ವಾದ ಹಾಗೂ ಮಾರ್ಗದರ್ಶನ ನೀಡಲು ಕೋರಿದರು.

ಭೇಟಿಗೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಶಿಂಧೆ, ರಾಜ್ಯದ ಅಭಿವೃದ್ಧಿಗಾಗಿ ಪ್ರಧಾನಿ ಅವರ ದೂರದೃಷ್ಟಿಯ ಅನುಗುಣ ಕೆಲಸ ಮಾಡುತ್ತೇವೆ. ಹಾಗೂ ಮಹಾರಾಷ್ಟ್ರವನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಶ್ರಮಿಸುವುದಾಗಿ ತಿಳಿಸಿದ್ದರು. ಇದನ್ನೂ ಓದಿ: ಮುಂದಿನ 5 ವರ್ಷಗಳಲ್ಲಿ ಪೆಟ್ರೋಲ್ ಬಳಕೆ ಇರಲ್ಲ: ಗಡ್ಕರಿ

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟನ್ನು ಸೃಷ್ಟಿಸಿದ್ದ ಬಂಡಾಯ ಶಾಸಕರ ನೇತೃತ್ವದ ನಾಯಕ ಏಕನಾಥ್ ಶಿಂಧೆ ಅವರು ಜೂ. 30ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇದನ್ನೂ ಓದಿ: ಪರಿಸರ ಸಂರಕ್ಷಣೆಗೆ ಯುವಪೀಳಿಗೆಯನ್ನು ಜಾಗೃತಗೊಳಿಸಲು ರಾಜ್ಯಪಾಲರ ಕರೆ

Live Tv

Leave a Reply

Your email address will not be published.

Back to top button