– ಉದ್ಧವ್ ಠಾಕ್ರೆಗೆ ಏಕನಾಥ್ ಶಿಂಧೆಯನ್ನು ಅನರ್ಹ ಮಾಡುವ ಅಧಿಕಾರ ಇಲ್ಲ
ಮುಂಬೈ: ಏಕನಾಥ್ ಶಿಂಧೆ (Eknath Shinde) ಬಣ ನಿಜವಾದ ಶಿವಸೇನೆ. ಏಕನಾಥ್ ಶಿಂಧೆ ನಾಯಕತ್ವ ಸಾಂವಿಧಾನಿಕವಾಗಿದೆ ಎಂದು ಮಹಾರಾಷ್ಟ್ರ (Maharashtra) ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ (Rahul Narwekar) ತಿಳಿಸಿದ್ದಾರೆ.
Advertisement
Advertisement
ಶಿವಸೇನೆ ಅನರ್ಹತೆಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಆದೇಶ ಪ್ರಕಟಿಸಿದ್ದಾರೆ. ಉದ್ಧವ್ ಠಾಕ್ರೆಗೆ ಏಕನಾಥ್ ಶಿಂಧೆಯನ್ನು ಅನರ್ಹ ಮಾಡುವ ಅಧಿಕಾರ ಇಲ್ಲ. ಉದ್ಧವ್ ಠಾಕ್ರೆ ನಾಯಕತ್ವ ಅವರ ಪಕ್ಷದ ಇಚ್ಛೆಯಂತೆ ಇಲ್ಲ. ಹೀಗಾಗಿ ಅವರ ಆದೇಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಹೋಗಲ್ಲ: ಕಾಂಗ್ರೆಸ್
Advertisement
1999 ಶಿವಸೇನೆ ಪಕ್ಷದ ಸಂವಿಧಾನವೇ ಅಧಿಕೃತ. ಉದ್ಧವ್ ಠಾಕ್ರೆಗೆ ಶಾಸಕರ ಬೆಂಬಲ ಇಲ್ಲ. 2018 ರ ಪಕ್ಷದ ಹೊಸ ಸಂವಿಧಾನ ಚುನಾವಣಾ ಆಯೋಗದಲ್ಲಿಲ್ಲ. ಹೀಗಾಗಿ ಚುನಾವಣಾ ಆಯೋಗದ ದಾಖಲೆಗಳ ಪ್ರಕಾರ 1999 ಸಂವಿಧಾನ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.
Advertisement
ಏಕನಾಥ್ ಶಿಂಧೆ ಬಣ ನಿಜವಾದ ಶಿವಸೇನೆ. ಏಕನಾಥ್ ಶಿಂಧೆ ನಾಯಕತ್ವ ಸಾಂವಿಧಾನಿಕವಾಗಿದೆ. ಯಾವ ಬಣವೂ ಗುರುತಿಸಿಕೊಳ್ಳದ ಶಾಸಕರನ್ನು ಅನರ್ಹ ಮಾಡಿರುವುದು ಸರಿಯಲ್ಲ. ಏಕನಾಥ್ ಶಿಂಧೆ ಬಣದ ಸಚೇತಕ (ವಿಪ್) ಆಯ್ಕೆಯೂ ಮಾನ್ಯವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆ 2024 – ಶಾಸಕರು, ಮಾಜಿ ಸಚಿವರಿಗೆ ಟಿಕೇಟ್ ನೀಡಲು SP ಪ್ಲ್ಯಾನ್
ಸ್ಪೀಕರ್ ನಾರ್ವೇಕರ್ ಹೇಳಿಕೆ ವಿರುದ್ಧ ಮಾಜಿ ಸಿಎಂ ಉದ್ಧವ್ ಠಾಕ್ರೆ (Uddhav Thackeray) ಕಿಡಿಕಾರಿದ್ದಾರೆ. ನಾರ್ವೇಕರ್ ಹೇಳಿಕೆ ಸುಪ್ರೀಂ ಕೋರ್ಟ್‌ಗೆ ಮಾಡಿದ ಅಪಮಾನ. ಪ್ರಜಾಪ್ರಭುತ್ವದ ಕಗ್ಗೊಲೆ. ಕಳನನ್ನು (ಸಭಾಪತಿ) ಸದನದ ಯಜಮಾನನನ್ನಾಗಿ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.