ಬೆಳಗಾವಿ: ಜಿಲ್ಲೆಯ ಗಡಿ ವಿವಾದ ಈಗಾಗಲೇ ಸರ್ವೋಚ್ಛ ನ್ಯಾಯಾಲಯದಲ್ಲಿದೆ. ಆದರೆ ನ್ಯಾಯಾಲಯದ ತೀರ್ಪು ಬರುವವರೆಗೆ ಸುಮ್ಮನಿರದೆ ಮಹಾರಾಷ್ಟ್ರದಲ್ಲಿ ಪ್ರಪ್ರಥಮ ಬಾರಿಗೆ ಅಧಿಕಾರ ಹಿಡಿದ ಶೀವಸೇನೆಯ ಸಿಎಂ ಬೆಳಗಾವಿ ಗಡಿ ವಿಚಾರವಾಗಿ ಲಘುವಾಗಿ ಮಾತನಾಡಿದ್ದಾರೆ.
ಬೆಳಗಾವಿ, ನಿಪ್ಪಾಣಿ, ಕಾರವಾರ ಪ್ರದೇಶದ ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ ಪ್ರದೇಶವಾಗಿದೆ. ಅಲ್ಲಿರುವ ಮರಾಠಿಗರು ಹಿಂದೂಗಳಲ್ಲವೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಉದ್ಧಟತನದ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದ ನಾಗಪೂರದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮಾತನಾಡುವಾಗ ಬೆಳಗಾವಿ ಗಡಿ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಬೆಳಗಾವಿ, ಕಾರವಾರ ಪಾಕಿಸ್ತಾನದಲ್ಲಿದೆಯೋ, ಬ್ರಹ್ಮದೇಶದಲ್ಲಿದೆಯೋ? ಅಥವಾ ಭಾರತದಲ್ಲಿದೆಯೋ? ಎಂದು ಉದ್ಧವ್ ಪ್ರಶ್ನೆ ಮಾಡಿದ್ದಾರೆ.
Advertisement
Advertisement
ರಾಜ್ಯದ ಗಡಿಯಲ್ಲಿರುವ ಮರಾಠಿಗರ ಮೇಲೆ ಕರ್ನಾಟಕ ಸರ್ಕಾರ ಹಲವಾರು ವರ್ಷಗಳಿಂದ ಭಾಷಾ ಅತ್ಯಾಚಾರವೆಸಗುತ್ತಿದೆ. ನ್ಯಾಯಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಆದರೆ ಕೇಂದ್ರ ಸರ್ಕಾರ ಮರಾಠಿ ಭಾಷಿಕ ಹಿಂದೂಗಳ ಪರವಾಗಿ ನಿಲ್ಲದೆ ಕರ್ನಾಟಕ ಸರ್ಕಾರದ ಪರವಾಗಿ ನಿಂತಿದೆ ಎಂದು ಮಹಾರಾಷ್ಟ್ರದ ಸಿಎಂ ಗಂಭೀರ ಆರೋಪ ಮಾಡಿದ್ದಾರೆ.
Advertisement
ಬೆಳಗಾವಿ, ಕಾರವಾರ, ನಿಪ್ಪಾಣಿಯಲ್ಲಿ ಮರಾಠಿ ಭಾಷಿಕ ಹಿಂದೂಗಳಿಗೆ ಕೇಂದ್ರ ಸರ್ಕಾರ ಮೊದಲು ನ್ಯಾಯ ಕೊಡಿ ಎಂದು ಪರೋಕ್ಷವಾಗಿ ಹೇಳಿ ಪ್ರಧಾನಿ ಹಾಗೂ ಗ್ರಹ ಸಚಿವರನ್ನು ಕುಟುಕಿದ್ದಾರೆ. ಈ ಭಾಗದಲ್ಲಿರುವ ಕನ್ನಡಿಗಳು ಹಿಂದೂಗಳಲ್ಲವೆ? ಭಾಷಾ ವಿವಾದಕ್ಕೆ ತುಪ್ಪ ಸುರಿಯುವಂತೆ ಮಾತನಾಡುವ ಮಹಾರಾಷ್ಟ್ರ ಸಿಎಂ ಭಾರತದ ಒಕ್ಕೂಟದ ವ್ಯವಸ್ಥೆಯನ್ನೇ ಪ್ರಶ್ನೆ ಮಾಡಿ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.