ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವು ಗುವಾಹಟಿಯಲ್ಲಿ ಬೀಡುಬಿಟ್ಟಿರುವ ರೆಬೆಲ್ ಶಾಸಕರ ಕುಟಂಬದ ಭದ್ರತೆಯನ್ನು ಹಿಂಪಡೆದಿದೆ ಎಂದು ಶಾಸಕ ಏಕನಾಥ್ ಶಿಂಧೆ ಆರೋಪಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಠಾಕ್ರೆ, ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಜನೀಶ್ ಸೇಠ್ ಮತ್ತು ಎಲ್ಲಾ ಪೊಲೀಸ್ ಕಮಿಷನರ್‌ಗಳಿಗೆ ಬರೆದ ಪತ್ರವನ್ನು ಹಾಕಿದ್ದಾರೆ. ಜೊತೆಗೆ ಶಾಸಕರ ಕುಟುಂಬ ಸದಸ್ಯರಿಗೆ ನೀಡಿದ್ದ ಭದ್ರತಾ ರಕ್ಷಣೆಯನ್ನು ದುರುದ್ದೇಶಪೂರ್ವಕವಾಗಿ ಹಿಂಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.
Advertisement
राजकीय आकसापोटी शिवसेनेच्या आमदारांचे संरक्षण मुख्यमंत्री आणि गृहमंत्री यांच्या आदेशाने काढून घेण्यात आले आहे. त्यांच्या व त्यांच्या कुटुंबीयांच्या संरक्षणाची जबाबदारी सरकारची आहे.#MVAisAntiShivsena pic.twitter.com/lX2qjVTxGM
— Eknath Shinde – एकनाथ शिंदे (@mieknathshinde) June 25, 2022
ನಾವು ಪ್ರಸ್ತುತ ಶಾಸಕರಾಗಿದ್ದರು ಕೂಡ, ನಮ್ಮ ನಿವಾಸದಲ್ಲಿ ಹಾಗೂ ನಮ್ಮ ಕುಟುಂಬ ಸದಸ್ಯರಿಗೆ ನೀಡಿದ್ದ ಭದ್ರತೆಯನ್ನು ಕಾನೂನು ಬಾಹಿರವಾಗಿ ಹಿಂಪಡೆಯಲಾಗಿದೆ. ಈ ನಡೆಯಿಂದ ನಮ್ಮ ಸಂಕಲ್ಪವನ್ನು ಮುರಿಯಲು ಪ್ರಯತ್ನಿಸುತ್ತಿದ್ದಾರೆ. ಜೊತೆಗೆ ಎನ್‍ಸಿಪಿ ಮತ್ತು ಕಾಂಗ್ರೆಸ್‍ನ ಗೂಂಡಾಗಳನ್ನು ಒಳಗೊಂಡಿರುವ ಎಂವಿಎ ಸರ್ಕಾರವನ್ನು ಉಳಿಸಿಕೊಳ್ಳಲು ಮತ್ತೊಂದು ಪ್ರಯತ್ನವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
Advertisement
ಎಂವಿಎ ಮೈತ್ರಿಕೂಟದ ಘಟಕ ಪಕ್ಷಗಳು ಶಾಸಕರ ವಿರುದ್ಧ ಹಿಂಸಾಚಾರ ನಡೆಸಲು ತಮ್ಮ ಕಾರ್ಯಕರ್ತರನ್ನು ಪ್ರಚೋದಿಸುತ್ತಿವೆ. ಈ ರೀತಿ ಶಾಸಕರ ಕುಟುಂಬ ಸದಸ್ಯರಿಗೆ ಯಾವುದೇ ತೊಂದರೆಯಾದರೆ ಅದಕ್ಕೆ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್, ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಮತ್ತು ಶಿವಸೇನಾ ಸಂಸದ ಸಂಜಯ್ ರಾವತ್ ಸೇರಿದಂತೆ ಮಹಾ ವಿಕಾಸ್ ಅಘಾಡಿಯ ಉನ್ನತ ನಾಯಕರು ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದರು.
Advertisement
Advertisement
ಈ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಮಾತನಾಡಿ, ಮಹಾರಾಷ್ಟ್ರ ಸರ್ಕಾರ ಅಂತಹ ಈ ಆದೇಶ ಹೊರಡಿಸಿಲ್ಲ. ಯಾವುದೇ ಶಾಸಕರ ಭದ್ರತೆಯನ್ನು ಹಿಂಪಡೆಯುವಂತೆ ಮುಖ್ಯಮಂತ್ರಿಯಾಗಲಿ ಅಥವಾ ಗೃಹ ಇಲಾಖೆಯಾಗಲಿ ಆದೇಶ ನೀಡಿಲ್ಲ. ಟ್ವಿಟ್ಟರ್ ಮೂಲಕ ಹೊರಿಸಲಾಗುತ್ತಿರುವ ಆರೋಪಗಳು ಸುಳ್ಳು ಮತ್ತು ಸಂಪೂರ್ಣವಾಗಿ ಆಧಾರರಹಿತವಾಗಿವೆ ಎಂದು ಹೇಳಿದರು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ – ಮಂತ್ರಿ ಗ್ರೂಪ್ ಎಂಡಿ ಸುಶೀಲ್ ಪಾಂಡುರಂಗ್ ಅರೆಸ್ಟ್
ಶಿಂಧೆ ಅವರ ಪತ್ರಕ್ಕೆ ಪ್ರತಿಕ್ರಿಯಿಸಿದ ರಾವತ್, ನೀವು ಶಾಸಕರಾಗಿದ್ದೀರಿ, ಆದ್ದರಿಂದ ನಿಮಗೆ ಭದ್ರತೆಯನ್ನು ಒದಗಿಸಲಾಗಿದೆ. ನಿಮ್ಮ ಕುಟುಂಬ ಸದಸ್ಯರಿಗೆ ಅದೇ ರೀತಿ ಒದಗಿಸಲಾಗುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸರ್ಕಾರ ಕಾಲಾವಕಾಶ ಕೇಳಿದೆ – ಸಿಎಂ ನಿವಾಸದೆದುರಿನ ಧರಣಿ ಸತ್ಯಾಗ್ರಹವನ್ನು ಮುಂದೂಡಲಾಗಿದೆ: ಜಯಮೃತ್ಯುಂಜಯ ಸ್ವಾಮೀಜಿ