ಮುಂಬೈ: ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ತಮ್ಮ ವಿರುದ್ಧ ಬಂಡಾಯವೆದ್ದಿದ್ದ ಏಕನಾಥ್ ಶಿಂಧೆ ಅವರನ್ನು ಶಿವಸೇನಾ ನಾಯಕನ ಸ್ಥಾನದಿಂದ ವಜಾಗೊಳಿಸಿದ್ದಾರೆ.
ಶಿಂಧೆ ನೇತೃತ್ವದ ಶಿವಸೇನೆಯ ಬಂಡಾಯ ಶಾಸಕರಿಂದ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿ ಆಗಿತ್ತು. ಅವರು ಬೆಂಬಲಿತ ಇತರ ಶಾಸಕರೊಂದಿಗೆ ಗುವಾಹಟಿಯಲ್ಲಿ ಉಳಿದಿದ್ದರು. ಇದರ ಬೆನ್ನಲ್ಲೆ ಉದ್ಧವ್ ಠಾಕ್ರೆ ಬುಧವಾರ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಶಿಂಧೆ ಅವರನ್ನು ತೆಗೆದುಹಾಕಲಾಗಿದೆ ಎಂದು ಶಿವಸೇನೆ ಮಾಹಿತಿ ನೀಡಿದೆ.
Advertisement
Advertisement
ಮಹಾರಾಷ್ಟ್ರದ ಮಾಜಿಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದಕ್ಕೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ, ಎರಡೂವರೆ ವರ್ಷಗಳ ಹಿಂದೆಯೇ ಶಿವಸೇನಾ ನಾಯಕನಿಗೆ ಸಿಎಂ ಸ್ಥಾನ ಬಿಟ್ಟುಕೊಡಲು ಬಿಜೆಪಿ ತೀರ್ಮಾನಿಸಿದ್ದರೆ, ಮಹಾ ವಿಕಾಸ್ ಅಘಾಡಿ (ಎಂವಿಎ) ಸೃಷ್ಟಿಯಾಗುತ್ತಿರಲೇ ಇಲ್ಲ. ಇದನ್ನೂ ಓದಿ: ರಾಜ್ಯದಲ್ಲಿ ಜುಲೈ 5ರವರೆಗೆ ಭಾರೀ ಮಳೆ – ಕರಾವಳಿಯಲ್ಲಿ ಆರೆಂಜ್, ಬೆಂಗ್ಳೂರಲ್ಲಿ ಯೆಲ್ಲೋ ಅಲರ್ಟ್
Advertisement
Advertisement
ಸರ್ಕಾರ ರಚನೆಯಾದ ರೀತಿ ಮತ್ತು ಶಿವಸೇನಾ ಕಾರ್ಯಕರ್ತ ಎಂದು ಕರೆಸಿಕೊಳ್ಳುವವರನ್ನು ಸಿಎಂ ಮಾಡಿದ್ದನ್ನು ನೋಡಿದೆವು. ಅಮಿತ್ ಶಾ ಅವರಿಗೂ ಹಿಂದೆ ಅದನ್ನೇ ಹೇಳಿದ್ದೆ. ಇದನ್ನು ಗೌರವಯುತವಾಗಿ ಮಾಡಬಹುದಿತ್ತು. ಆ ಸಮಯದಲ್ಲಿ ಶಿವಸೇನಾ ಅಧಿಕೃತವಾಗಿ ನಿಮ್ಮೊಂದಿಗಿತ್ತು. ಏಕನಾಥ್ ಶಿಂಧೆ ಶಿವಸೇನಾ ಸಿಎಂ ಅಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ದಕ್ಷಿಣ ಇರಾನ್‍ನಲ್ಲಿ ಭೂಕಂಪನ- ಮೂವರು ಸಾವು, 16 ಮಂದಿಗೆ ಗಂಭೀರ ಗಾಯ