ಮುಂಬೈ: ಮಹಾರಾಷ್ಟ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (VAT) ಪ್ರತಿ ಲೀಟರ್‌ಗೆ ಕ್ರಮವಾಗಿ 5 ಮತ್ತು 3 ರೂಪಾಯಿಗಳಷ್ಟು ಕಡಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.
Great relief to Maharashtrian & Marathi Manus !
Happy to announce that new Government under CM Eknathrao Shinde has decided to reduce Petrol & Diesel prices by ₹5/litre & ₹3/litre respectively.#CabinetDecision #PetrolDieselPrice #Maharashtra
— Devendra Fadnavis (@Dev_Fadnavis) July 14, 2022
Advertisement
ಅವರಿಂದು ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ನವೆಂಬರ್ 4 ಮತ್ತು ಮೇ 22 ರಂದು ವ್ಯಾಟ್ ಅನ್ನು ಕಡಿಮೆ ಮಾಡಿತು. ರಾಜ್ಯಗಳಲ್ಲೂ ತೆರಿಗೆ ಕಡಿತಗೊಳಿಸುವಂತೆ ಸೂಚನೆ ನೀಡಿತು. ಆದರೆ ಈ ಹಿಂದೆ ಇದ್ದ ಮಹಾ ವಿಕಾಸ್ ಸರ್ಕಾರ ಕೇಂದ್ರದ ಸೂಚನೆಯನ್ನು ಅನುಸರಿಸಲಿಲ್ಲ. ನಮ್ಮ ಸರ್ಕಾರ ಪ್ರಸ್ತುತ ಹಣಕಾಸು ಸ್ಥಿತಿಯನ್ನು ಅಧ್ಯಯನ ಮಾಡಿ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಅನ್ನು ಇಳಿಸಲು ಮುಂದಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮೋದಿ ಹತ್ಯೆಗೆ ಸಂಚು- ನಿವೃತ್ತ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಶಂಕಿತ ಭಯೋತ್ಪಾದಕರ ಬಂಧನ
Advertisement
The price of petrol & diesel reduced by Rs 5 per litre & Rs 3 per litre respectively: Maharashtra CM Eknath Shinde pic.twitter.com/7f0EvMrUQI
— ANI (@ANI) July 14, 2022
Advertisement
ಪ್ರತಿ ಲೀಟರ್ ಪೆಟ್ರೋಲ್‌ಗೆ 5 ರೂ. ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲಿನ 3 ರೂ. ವ್ಯಾಟ್ ಅನ್ನು ಕಡಿತಗೊಳಿಸಲು ನಿರ್ಧರಿಸಿದೆ. ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ 6,000 ಕೋಟಿ ರೂಪಾಯಿ ಹೊರೆ ಬೀಳಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆಚರಣೆ, ವೈಭವಗಳನ್ನ ಇಷ್ಟಪಡದ ಸಿದ್ದರಾಮಯ್ಯ ಈಗ ಉತ್ಸವ ಆಚರಿಕೊಳ್ಳುತ್ತಿದ್ದಾರೆ: ವಿ.ಸೋಮಣ್ಣ
Advertisement
ಶಿವಸೇನೆ ಜನರ ಕಲ್ಯಾಣಕ್ಕಾಗಿ ಈ ನಿರ್ಧಾರ ಕೈಗೊಳ್ಳುತ್ತಿದೆ ಎಂದು ಉಪಮುಖ್ಯಮಂತ್ರಿ ದೇವೆಂದ್ರ ಫಡ್ನವೀಸ್ ಹರ್ಷ ವ್ಯಕ್ತಪಡಿಸಿದ್ದಾರೆ.