ಮುಂಬೈ: ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ (Eknath Shinde) ಅವರ ಎಕ್ಸ್ ಖಾತೆಯನ್ನು (X Account) ಹ್ಯಾಕ್ ಮಾಡಿದ್ದು, ಹ್ಯಾಕರ್‌ಗಳು ಅವರ ಖಾತೆಯಿಂದ ಪಾಕಿಸ್ತಾನ (Pakistan) ಮತ್ತು ಟರ್ಕಿಯ (Turkey) ಧ್ವಜಗಳನ್ನು ಪೋಸ್ಟ್ ಮಾಡಿದ್ದಾರೆ.
ಖಾತೆ ಹ್ಯಾಕ್ ಆಗಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಸೈಬರ್ ಅಪರಾಧ ಪೊಲೀಸರ ಗಮನಕ್ಕೆ ತಂದಿದ್ದೇವೆ. ಹ್ಯಾಕ್ ಆದ ಬಳಿಕ ಸುಮಾರು 30-45 ನಿಮಿಷಗಳ ಒಳಗಾಗಿ ಖಾತೆಯನ್ನು ಮರುಸ್ಥಾಪಿಸಲಾಗಿದೆ. ಅಲ್ಲದೇ ಪೋಸ್ಟ್‌ಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೋಲಾರ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ನಟ ಧ್ರುವ ಸರ್ಜಾ ವಿಶೇಷ ಪೂಜೆ
ಏಷ್ಯಾಕಪ್ ಸೂಪರ್ 4 ಪಂದ್ಯದಲ್ಲಿ ಇಂದು ಭಾರತ-ಪಾಕ್ ಮುಖಾಮುಖಿಯಾಗುತ್ತಿದೆ. ಈ ಬೆನ್ನಲ್ಲೇ ಎರಡು ದೇಶಗಳ ಧ್ವಜವನ್ನು ಹ್ಯಾಕರ್‌ಗಳು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: Nelamangala | ಕೆಲಸ ಮಾಡುವ ವೇಳೆ 2ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

