Dharwad
ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ- ಒಂದೇ ಕುಟುಂಬದ 6 ಮಂದಿ ಸಾವು

ಧಾರವಾಡ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕಾಶೀಳ ಗ್ರಾಮ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಘಟನೆಯಲ್ಲಿ ಸಾವನ್ನಪ್ಪಿದ ಎಲ್ಲರೂ ಕರ್ನಾಟಕ ಮೂಲದ ಧಾರವಾಡ ನಿವಾಸಿ ನೀಜಾಮುದ್ದಿನ್ ಕುಟುಂಬದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಕಾರು ಚಾಲಕ ಮತ್ತು ಹೆಣ್ಣು ಮಗುವಿಗೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಮೂರೂವರೆ ವರ್ಷದ ಬಾಲಕ ಮತ್ತು 5 ವರ್ಷದ ಬಾಲಕಿ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಬೋರೆಗಾಂವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
