ಬೆಳಗಾವಿ: ಮಹಾರಾಷ್ಟ್ರದಲ್ಲಿ ಇರೋದು ಮೂರಾಬಟ್ಟೆ ಸರ್ಕಾರ ಎಂದು ಸಚಿವ ಗೋವಿಂದ ಕಾರಜೋಳ ಕಿಡಿಕಾರಿದರು.
ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ವಿಚಾರವಾಗಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಇರೋದು ಮೂರಾಬಟ್ಟೆ ಸರ್ಕಾರ. ಎನ್‍ಸಿಪಿ, ಕಾಂಗ್ರೆಸ್, ಶಿವಸೇನೆ ಮೂರು ಪಕ್ಷ ಸೇರಿ ಮೂರಾಬಟ್ಟೆ ಸರ್ಕಾರ ಮಾಡಿದೆ. ಕಾಂಗ್ರೆಸ್, ಶಿವಸೇನೆಗೆ ಎಂದೂ ಹೊಂದಾಣಿಕೆ ಆಗಲು ಸಾಧ್ಯವಿಲ್ಲ. ನೀರಿಗೆ ಎಣ್ಣೆ ಸೇರಿಸಿದ ಹಾಗೇ ಆಗಿದೆ ಎಂದು ವಿರೋಧ ವ್ಯಕ್ತಪಡಿಸಿದರು.
Advertisement
Advertisement
ಬಾಳಾಸಾಹೇಬ್ ಠಾಕ್ರೆ ಮುಂಬೈನಲ್ಲಿ ಹಿಂದೂಗಳ ಮೇಲೆ ನಡೆಯುತ್ತಿದ್ದ ದೌರ್ಜನ್ಯದ ವಿರುದ್ಧ ಹೋರಾಟ ಮಾಡಿ ಶಿವಸೇನೆ ಪಕ್ಷವನ್ನು ಕಟ್ಟಿದ್ದಾರೆ. ಅಧಿಕಾರದ ಆಸೆಗೆ ಉದ್ಧವ್ ಠಾಕ್ರೆ ಕಾಂಗ್ರೆಸ್ ಜೊತೆಗೆ ಕೈಜೋಡಿಸಿದ್ದಾರೆ. ತತ್ವ, ಸಿದ್ಧಾಂತವಿಲ್ಲದ ಪಕ್ಷದ ಜೊತೆ ಕೈ ಜೋಡಿಸಿ ಸರ್ಕಾರ ಮಾಡಿದ್ದು, ಮಹಾ ಅಪರಾಧ ಎಂದು ಕಿಡಿಕಾರಿದರು. ಇದನ್ನೂ ಓದಿ: ಭಾರತೀಯ ಉಕ್ಕು ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿ. ಕೃಷ್ಣಮೂರ್ತಿ ವಿಧಿವಶ
Advertisement
ಉದ್ಧವ ಠಾಕ್ರೆ ವಿರುದ್ಧ ಅವರದೇ ಪಕ್ಷದ ಶಾಸಕರು ಬಂಡೆದ್ದಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಗುತ್ತಾ ಎಂದು ಮಾಧ್ಯಮಗಳ ಪ್ರಶ್ನೆಗೆ ಕಾದು ನೋಡಬೇಕು. ಆಪರೇಷನ್ ನಾವು ಮಾಡಿಲ್ಲ. ಯಾವ ಪಕ್ಷಕ್ಕೆ ತತ್ವ ಸಿದ್ಧಾಂತವಿಲ್ಲ. ಅಂತವರ ವಿರುದ್ಧ ಪಕ್ಷದ ಶಾಸಕರೇ ಬಂಡೆದ್ದಿದ್ದಾರೆ. ಪ್ರಧಾನಿ ಮೋದಿ ಆಡಳಿತ ಮೆಚ್ಚಿ ಇಡೀ ಪ್ರಪಂಚದಲ್ಲಿ ಬಿಜೆಪಿ ಬಲಿಷ್ಠ ಪಕ್ಷವಾಗ್ತಿದೆ ಎಂದು ವಿವರಿಸಿದರು.
Advertisement
18 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿ ಇದೆ. ದೇಶದಲ್ಲಿ 1,378 ಬಿಜೆಪಿ ಶಾಸಕರಿದ್ದು, 301 ಬಿಜೆಪಿ ಸಂಸದರಿದ್ದಾರೆ. 95 ರಾಜ್ಯಸಭಾ ಸದಸ್ಯರಿದ್ದಾರೆ. ನರೇಂದ್ರ ಮೋದಿ ದೇಶಪ್ರೇಮ, ಅಭಿವೃದ್ಧಿ, ಇಡೀ ಪ್ರಪಂಚದಲ್ಲಿ ಬಿಜೆಪಿ ಕೀರ್ತಿ ಗೌರವ ಹೆಚ್ಚಾಗಿದ್ದರಿಂದ ಮೆಚ್ಚಿ ಬರುತ್ತಿದ್ದಾರೆ. ಸ್ಥಿರ ಸರ್ಕಾರ ಅಂದ್ರೆ ಏನು ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ನಿಯಮಗಳನ್ನು ಮೀರಿ ಕಲ್ಲು ಕ್ವಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಸ್ಫೋಟ
ಮಹಾರಾಷ್ಟ್ರದಲ್ಲಿ ಯಾವ ಪಕ್ಷಕ್ಕೂ ಬಹುಮತ ಬಂದಿರಲಿಲ್ಲ. ಆ ಸಂದರ್ಭದಲ್ಲಿ ಯಾವ ಪಕ್ಷಕ್ಕೆ ಹೆಚ್ಚಿನ ಸೀಟ್ ಬಂದಿರುತ್ತೆ ಅವರನ್ನು ಬೆಂಬಲಿಸಬೇಕು ಎಂದು ತಿಳಿಸಿದರು.