ಮುಂಬೈ: ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಅನಿಲ್ ದೇಶ್‌ಮುಖ್ (Anil Deshmukh) ಅವರಿಗೆ ಬಾಂಬೆ ಹೈಕೋರ್ಟ್ (Bombay High Court) ಇಂದು ಜಾಮೀನು ನೀಡಿದೆ. ಆದರೆ ಕೆಲವೇ ಹೊತ್ತಿನಲ್ಲಿ ತನ್ನ ಆದೇಶವನ್ನು 10 ದಿನಗಳವರೆಗೆ ತಡೆ ಹಿಡಿದಿದೆ.
71 ವಯಸ್ಸಿನ ಅನಿಲ್ ದೇಶ್‌ಮುಖ್ ಅವರು ಅನಾರೋಗ್ಯದ ಸಮಸ್ಯೆ ಕಾರಣ ನೀಡಿ ಜಾಮೀನು ನೀಡುವಂತೆ ಕೋರಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ಅವರ ಮನವಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದನ್ನೂ ಓದಿ: ಸಂವಿಧಾನ ಉಳಿಸಲು ಮೋದಿ ಹತ್ಯೆ ಮಾಡಿ – ಕಾಂಗ್ರೆಸ್ ಮಾಜಿ ಸಚಿವ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ
Advertisement
Advertisement
ಎನ್‌ಸಿಪಿ ನಾಯಕನನ್ನು ನವೆಂಬರ್ 2, 2021 ರಂದು ಜಾರಿ ನಿರ್ದೇಶನಾಲಯ (ED) ಬಂಧಿಸಿತ್ತು. ಅಲ್ಲಿಂದ ಇಲ್ಲಿಯವರೆಗೂ ದೇಶ್‌ಮುಖ್ ಜೈಲಿನಲ್ಲಿದ್ದಾರೆ. ಈ ವರ್ಷ ಏಪ್ರಿಲ್‌ನಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಸಿಬಿಐ ಬಂಧಿಸಿದೆ. ನಂತರ ಕೊರೊನರಿ ಆಂಜಿಯೋಗ್ರಫಿಗಾಗಿ ಅವರನ್ನು ಅಕ್ಟೋಬರ್‌ನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Advertisement
Advertisement
2021ರಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಪರಮ್‌ಬೀರ್ ಸಿಂಗ್ (Param Bir Singh) ಅವರು, ಮುಂಬೈನಲ್ಲಿ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ತಿಂಗಳಿಗೆ 100 ಕೋಟಿ ರೂ. ವಸೂಲಿ ಮಾಡಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ದೇಶ್‌ಮುಖ್ ಅವರು ಟಾರ್ಗೆಟ್ ನೀಡಿದ್ದರು ಎಂದು ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ತನಿಖೆ ಮಾಡುವಂತೆ ಸಿಬಿಐಗೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಇದನ್ನೂ ಓದಿ: ಮೊದಲ ಟೆಸ್ಟ್‌ನಿಂದ ರೋಹಿತ್ ಹೊರಕ್ಕೆ – ಕನ್ನಡಿಗ ಕ್ಯಾಪ್ಟನ್