ಬೆಳಗಾವಿ/ ಬೆಂಗಳೂರು: ಮಹಾರಾಷ್ಟ್ರದ (Maharashtra ) ಗಡಿಕ್ಯಾತೆ ಮುಂದುವರಿದಿದ್ದು ಕರ್ನಾಟಕದ (Karnataka) 865 ಹಳ್ಳಿಗಳಿಗೆ ಅನ್ವಯವಾಗುವಂತೆ ಆರೋಗ್ಯ ವಿಮೆಯನ್ನು (Health Insurance) ಮಹಾರಾಷ್ಟ್ರ ಸರ್ಕಾರ ಜಾರಿ ಮಾಡಿ ಆದೇಶ ಹೊರಡಿಸಿ ಉದ್ಧಟತನ ಮೆರೆದಿದೆ.
ಕೇಂದ್ರ ಗೃಹ ಸಚಿವ ಶ್ರೀ @AmitShah ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ @mieknathshinde ಹಾಗೂ ಉಪ ಮುಖ್ಯಮಂತ್ರಿ @Dev_Fadnavis ಅವರು ಗಡಿ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸುವುದಿಲ್ಲ ಎಂದು ಒಪ್ಪಿಕೊಂಡಿದ್ದರು.
2/5
— Basavaraj S Bommai (@BSBommai) April 5, 2023
ಈ ಬೆನ್ನಲ್ಲೇ ಸಿಎಂ ಬೊಮ್ಮಾಯಿ (CM Bommai) ಟ್ವೀಟ್ ಮಾಡಿ, ಮಹಾರಾಷ್ಟ್ರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ. ಗಡಿವಿವಾದ ಸುಪ್ರೀಂಕೋರ್ಟ್‍ನಲ್ಲಿದ್ದರೂ (Supreme Court) ಮಹಾ ಸರ್ಕಾರ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಮಹಾರಾಷ್ಟ್ರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು. ಇಲ್ಲವಾದರೆ ಮಹಾರಾಷ್ಟ್ರದ ಕನ್ನಡ ಭಾಷಿಕ ಹಳ್ಳಿಗಳಿಗೆ ನಾವೂ ಯೋಜನೆಗಳನ್ನು ಪ್ರಕಟಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಕಿಚ್ಚ ಸುದೀಪ್ ಈಗ ಸ್ಟಾರ್ ಪ್ರಚಾರಕ – ಬಿಜೆಪಿ ಲೆಕ್ಕಾಚಾರ ಏನು?
ರಾಜ್ಯದ ಗಡಿಯೊಳಗೆ ಆರೋಗ್ಯ ವಿಮೆ ಜಾರಿಗೆ ಮಹಾರಾಷ್ಟ್ರ ಸರ್ಕಾರ ಯತ್ನಿಸಿದಾಗಲೇ ನಾವು ವಿರೋಧಿಸಿದ್ದೆವು. ಅಲ್ಲಿಯ ವರೆಗೆ ತೆಪ್ಪಗಿದ್ದ ರಾಜ್ಯದ ಮುಖ್ಯಮಂತ್ರಿ @BSBommai ನಮ್ಮ ಒತ್ತಡಕ್ಕೆ ಮಣಿದು ವೀರಾವೇಶದ ಮಾತುಗಳನ್ನಾಡಿದ್ದರು.
ಆ ಆವೇಶ, ಬದ್ಧತೆಯನ್ನು ತೋರಿಸಬೇಕಾದ ಕಾಲ ಈಗ ಬಂದಿದೆ. 3/5#ಗಡಿವಿವಾದ
— Siddaramaiah (@siddaramaiah) April 5, 2023
ಸಿಎಂ ಏಕ್‍ನಾಥ್ ಶಿಂಧೆ (Eknath Shinde) ವಿರುದ್ಧ ಸಿದ್ದರಾಮಯ್ಯ (Siddaramaiah) ಆಕ್ರೋಶ ಹೊರಹಾಕಿದ್ದಾರೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಆದೇಶವನ್ನು ತಕ್ಷಣ ವಾಪಸ್ ಪಡೆಯದೇ ಇದ್ದರೇ ಪರಿಣಾಮ ನೆಟ್ಟಗಿರದು ಎಂದು ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ನೀಡಿದ ಎಚ್ಚರಿಕೆಯನ್ನು ಮಹಾರಾಷ್ಟ್ರ ಸರ್ಕಾರ ಧಿಕ್ಕರಿಸಿದೆ. ಮುಖ್ಯಮಂತ್ರಿ ಬೊಮ್ಮಾಯಿ ಈಗ ಬದ್ಧತೆ ತೋರಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಒಂದಲ್ಲ ಎರಡಲ್ಲ, ಪ್ರತಿಯೊಂದು ವಿಷಯದಲ್ಲೂ ಮಹಾರಾಷ್ಟ್ರವು ಕರ್ನಾಟಕವನ್ನು ಕೆರಳಿಸುತ್ತದೆ. ರಾಜ್ಯದ ಗಡಿ ಒಳಗಿರುವ 865 ಗ್ರಾಮಗಳ ಜನರಿಗೆ ಆರೋಗ್ಯ ವಿಮೆ ಜಾರಿ ಮಾಡಿದ ಆ ರಾಜ್ಯ ಸರಕಾರದ ನಡೆ ಒಕ್ಕೂಟ ವ್ಯವಸ್ಥೆಯನ್ನು ಒಡೆಯುವ ನೇರ, ಧೂರ್ತ ಪ್ರಯತ್ನ.2/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 5, 2023
ಹೆಚ್‍ಡಿ ಕುಮಾರಸ್ವಾಮಿ (HD Kumaraswamy) ಕೂಡ ಟ್ವೀಟ್ ಮಾಡಿ ಮಹಾರಾಷ್ಟ್ರ ಸರ್ಕಾರದ ಕ್ರಮನ್ನು ಖಂಡಿಸಿ ಮೋದಿ ಮೌನವನ್ನೂ ಪ್ರಶ್ನೆ ಮಾಡಿದ್ದಾರೆ.