Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದ 865 ಹಳ್ಳಿಗಳಿಗೆ ಮಹಾರಾಷ್ಟ್ರದಿಂದ 54 ಕೋಟಿ ಹಣ ಬಿಡುಗಡೆಗೆ ಆದೇಶ – ಇದು ಸ್ವಾಭಿಮಾನಕ್ಕೆ ಧಕ್ಕೆ ಎಂದ ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕರ್ನಾಟಕದ 865 ಹಳ್ಳಿಗಳಿಗೆ ಮಹಾರಾಷ್ಟ್ರದಿಂದ 54 ಕೋಟಿ ಹಣ ಬಿಡುಗಡೆಗೆ ಆದೇಶ – ಇದು ಸ್ವಾಭಿಮಾನಕ್ಕೆ ಧಕ್ಕೆ ಎಂದ ಡಿಕೆಶಿ

Belgaum

ಕರ್ನಾಟಕದ 865 ಹಳ್ಳಿಗಳಿಗೆ ಮಹಾರಾಷ್ಟ್ರದಿಂದ 54 ಕೋಟಿ ಹಣ ಬಿಡುಗಡೆಗೆ ಆದೇಶ – ಇದು ಸ್ವಾಭಿಮಾನಕ್ಕೆ ಧಕ್ಕೆ ಎಂದ ಡಿಕೆಶಿ

Public TV
Last updated: March 16, 2023 9:07 pm
Public TV
Share
3 Min Read
DK Shivakumar 2 3
SHARE

ಬೆಳಗಾವಿ: ಕರ್ನಾಟಕ ರಾಜ್ಯದ 865 ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರದಿಂದ (Maharashtra Government) 54 ಕೋಟಿ ರೂ. ಬಿಡುಗಡೆಗೆ ಆದೇಶ ಹೊರಡಿಸಿದೆ. ಇದರಿಂದ ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ರಾಜ್ಯದ 865 ಹಳ್ಳಿಗಳಿಗೆ 54 ಕೋಟಿ ರೂ. ಯೋಜನೆ ಘೋಷಿಸಿರುವ ಮಹಾರಾಷ್ಟ್ರ ಸರ್ಕಾರದ ವಿಧ್ವಂಸಕಾರಿ ನಿಲುವಿನ ಬಗ್ಗೆ ನನ್ನ ಹಾಗೂ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ @Siddaramaiah ಅವರ ಜಂಟಿ ಹೇಳಿಕೆ. pic.twitter.com/tDowNeMoLQ

— DK Shivakumar (@DKShivakumar) March 16, 2023

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾರ್ಚ್ 20ರಂದು ಬೆಳಗ್ಗೆ 11 ಗಂಟೆಗೆ ಸಾರ್ವಜನಿಕ ಬಹಿರಂಗ ಸಭೆ ನಡೆಯಲಿದೆ. ರಾಹುಲ್ ಗಾಂಧಿ (Rahul Gandhi) ಭಾರತ್ ಜೋಡೋ ಯಾತ್ರೆ (Bharat Jodo Yatra) ಬಳಿಕ ಮೊದಲ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಹಾತ್ಮ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿದ ಜಾಗವೇ ಬೇಕು ಅಂತಾ ಅವರು ಬೆಳಗಾವಿ (Belagavi) ಆಯ್ಕೆ ಮಾಡಿಕೊಂಡಿದ್ದಾರೆ. ಯಾವ ವಿಚಾರ ಇಟ್ಟುಕೊಂಡು ಭಾರತ್ ಜೋಡೋ ಯಾತ್ರೆ ಕೈಗೊಂಡರು ಅನ್ನೋದನ್ನ ತಿಳಿಸಲಿದ್ದಾರೆ. ಆ ಮೂಲಕ ನಮಗೆ ಶಕ್ತಿ ತುಂಬಲಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಡಿ.ಕೆ ಶಿವಕುಮಾರ್ ಸ್ಪರ್ಧಿಸಲಿ – ಸ್ಥಳೀಯ ಕಾಂಗ್ರೆಸ್ ನಾಯಕರ ಮನವಿ

eknath shinde 3

ನಾವೆಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ. ಸಂವಿಧಾನದ ಅಡಿಯಲ್ಲಿ ಕೆಲಸ ಮಾಡ್ತಿದ್ದೇವೆ. ಇವತ್ತು ನಮ್ಮ ನೆಲ, ಜಲ, ಭಾಷೆ, ಗಡಿ ಇವೆಲ್ಲ ನಿಗದಿಯಾಗಿದೆ. ನಾವೆಲ್ಲ ಅಣ್ಣತಮ್ಮಂದಿರಂತೆ ಒಗ್ಗಟ್ಟಾಗಿ ಬದುಕುತ್ತಿದ್ದೇವೆ. ಗಡಿವಿವಾದ ಮಹಾಜನ್ ವರದಿಯಲ್ಲಿ ತೀರ್ಮಾನ ಆಗಿದೆ. ನಮ್ಮ ರಾಜ್ಯ ಈ ಭಾಗಕ್ಕೆ ಶಕ್ತಿ ಕೊಡಲು ಸುವರ್ಣಸೌಧ ಕಟ್ಟಿ ಈ ಭಾಗದ ಹಿತಕ್ಕಾಗಿ ಇಡೀ ರಾಜ್ಯದ ಶಾಸಕರು ಬಂದು ಇಲ್ಲಿಯ ಸಮಸ್ಯೆ ಚರ್ಚಿಸಿ ಪರಿಹಾರಕ್ಕೆ ಬಂದಿದ್ದೇವೆ. ಗಡಿ ಜಿಲ್ಲೆಯಲ್ಲಿ ಧರ್ಮ ಇರಲಿ, ಭಾಷೆ ಇರಲಿ ಯಾವುದೇ ತಾರತಮ್ಯ ಇಲ್ಲ. ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ (BJP Government) ಇದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಬೆಂಬಲಿತ ಶಿವಸೇನೆ ಸರ್ಕಾರ ಇದ್ದು, ಕನ್ನಡಿಗರನ್ನು ಕೆಣಕಿ ಶಾಂತಿಭಂಗಕ್ಕೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಸೌಹಾರ್ದಯುತ ಕೆಲಸ ಮಾಡ್ತಿದ್ದೀವಿ. ಆದರೆ ಇವತ್ತು ಮಹಾರಾಷ್ಟ್ರ ಸರ್ಕಾರ ಇಲ್ಲಿಯ 800ಕ್ಕೂ ಹೆಚ್ಚು ಹಳ್ಳಿಗಳಿಗೆ ಅನುದಾನ ಕೊಡಲು ತೀರ್ಮಾನ ಮಾಡಿದೆ. 865 ಹಳ್ಳಿಗಳಿಗೆ 54 ಕೋಟಿ ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ. ಇದು ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Eknath Shinde Basavaraj Bommai

ನಾನು ಸಿಎಂಗೆ ಹೇಳೋದಿಷ್ಟೆ. ನಮ್ಮ ರಾಜ್ಯದ ಸ್ವಾಭಿಮಾನವನ್ನ ನೀವು ಅಡ ಇಟ್ಟಿದ್ದೀರಿ. ನಿಮ್ಮ ಅಧಿಕಾರಕ್ಕಾಗಿ ಯಾರೂ ಬೇಕಾದರೂ ಇಲ್ಲಿ ಆಡಳಿತ ನಡೆಸಬಹುದು ಅಂದುಬಿಟ್ಟಿದ್ದೀರಿ. ಕೂಡಲೇ ರಾಜ್ಯಪಾಲರು ಬಿಜೆಪಿ ಸರ್ಕಾರವನ್ನ ವಜಾ ಮಾಡಬೇಕು. ಕೇಂದ್ರ ಸರ್ಕಾರ ಮಹಾರಾಷ್ಟ್ರಕ್ಕೆ ಬೆಂಬಲ ಕೊಡುತ್ತಿದೆ. ಸಂವಿಧಾನದ ಆರ್ಟಿಕಲ್ 356 ಪ್ರಕಾರ ಮಹಾರಾಷ್ಟ್ರ ಸರ್ಕಾರವನ್ನೂ ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಚೀತಾ ಹೆಲಿಕಾಪ್ಟರ್ ಪತನ – ಭಾರತೀಯ ಸೇನೆಯ ಇಬ್ಬರು ಪೈಲಟ್‌ಗಳು ಹುತಾತ್ಮ

ಮಾರ್ಚ್ 20ರಂದು ಬೆಳಗಾವಿಗೆ ಶ್ರೀ @RahulGandhi ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ, ಕಾರ್ಯಕ್ರಮ ನಡೆಯಲಿರುವ ಸಿಪಿಇಡಿ ಮೈದಾನದಲ್ಲಿ ಪೂರ್ವಸಿದ್ಧತೆಗಳನ್ನು ಶ್ರೀ @RSSurjewala ಅವರೊಡನೆ ಪರಿಶೀಲಿಸಿದೆ. pic.twitter.com/iRdJW9R7mw

— DK Shivakumar (@DKShivakumar) March 16, 2023

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಸಹ ನಾವು ಪಂಜಾಬ್, ತಮಿಳುನಾಡು, ಕೇರಳಕ್ಕೆ ಹೋಗಿ ದರ್ಬಾರ್ ಮಾಡೋಕೆ ಆಗಲ್ಲ. ಏನಾದರೂ ಸಮಸ್ಯೆ ಇದ್ರೆ ನೀರು ಇಲ್ಲದಾಗ ನೀರು, ವಿದ್ಯುತ್ ಇಲ್ಲದಿದ್ದಾಗ ವಿದ್ಯುತ್ ಸೌಲಭ್ಯ ಕೊಡುವುದು ನಡೆದುಕೊಂಡು ಬಂದಿದೆ. ಆದ್ರೆ ಅವರ ಹಣ ತಂದು ನಮ್ಮ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡೋದು ಖಂಡನೀಯ. 26 ಜನ ಲೋಕಸಭಾ ಸದಸ್ಯರು, ಈ ಭಾಗದಲ್ಲಿ 5-6 ಮಂದಿ ಸಚಿವರಿದ್ದಾರೆ. ಇವರೆಲ್ಲ ಸ್ವಾಭಿಮಾನ ಉಳಿಸಿಕೊಳ್ಳಲು ಪ್ರಯತ್ನ ಮಾಡಿಲ್ಲ. ಅವರೆಲ್ಲ ರಾಜೀನಾಮೆ ನೀಡಬೇಕು. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರವನ್ನ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

TAGGED:Basavaraj BommaibelagavibjpDK ShivakumarEknath ShinderahulgandhiShivSenaಏಕನಾಥ್ ಶಿಂಧೆಡಿಕೆ ಶಿವಕುಮಾರ್ಬಸವರಾಜ ಬೊಮ್ಮಾಯಿಬಿಜೆಪಿಬೆಳಗಾವಿಮಹಾರಾಷ್ಟ್ರಶಿವಸೇನೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
30 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?