ಮುಂಬೈ: ರಾಜಕಾರಣದಲ್ಲಿ ಶತ್ರುಗಳು ಮಿತ್ರರಾಗುತ್ತಾರೆ. ಮಿತ್ರರು ಶತ್ರುಗಳಾಗುತ್ತಾರೆ ಎನ್ನುವುದು ಮತ್ತೊಮ್ಮೆ ದೃಢಪಟ್ಟಿದೆ. ಮಹಾರಾಷ್ಟ್ರದಲ್ಲಿ 25 ವರ್ಷಗಳ ಕಾಲ ಮಿತ್ರಪಕ್ಷವಾಗಿದ್ದ ಬಿಜೆಪಿಗೆ ಶಿವಸೇನೆ ಗುಡ್‍ಬೈ ಹೇಳಿದ್ದು ಕಾಂಗ್ರೆಸ್, ಎನ್‍ಸಿಪಿ, ಶಿವಸೇನೆ ನೇತೃತ್ವದ ಮಹಾಮೈತ್ರಿ ಅಧಿಕಾರಕ್ಕೆ ಬರಲಿದ್ದು ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಶಿವಸೇನೆ ಹಿಡಿದಿರುವ ಪಟ್ಟು ಸಡಿಲಸದ ಪರಿಣಾಮ ಬಿಜೆಪಿ ಭಾನುವಾರ ಸಂಜೆ ನಾವು ಸರ್ಕಾರ ರಚಿಸುವುದಿಲ್ಲ ಎಂದು ಹೇಳಿತ್ತು. ಬಿಜೆಪಿಯಿಂದ ಅಧಿಕೃತ ಘೋಷಣೆ ಹೊರ ಬಿದ್ದ ಬೆನ್ನಲ್ಲೇ ಶಿವಸೇನೆಗೆ ಬೆಂಬಲ ನೀಡಲು ಕಾಂಗ್ರೆಸ್ ಮತ್ತು ಎನ್‍ಸಿಪಿ ಮುಂದಾಗಿದೆ.
Advertisement
Nawab Malik, NCP after party's core group meeting on govt formation in Maharashtra: Congress MLAs are in favour of supporting Shiv Sena-led government, but Congress Working Committee (CWC) is the supreme body to decide on their party line. https://t.co/tNn3ZkIDUJ
— ANI (@ANI) November 11, 2019
Advertisement
ಇಂದು ಬೆಳಗ್ಗೆ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಶಿವಸೇನೆಗೆ ಬೆಂಬಲ ನೀಡುವ ಬಗ್ಗೆ ಮಾತುಕತೆ ನಡೆದಿದೆ. ಇಂದು ಸಂಜೆ 4 ಗಂಟೆಗೆ ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
Advertisement
ಆರಂಭದಲ್ಲಿ ಮೈತ್ರಿಗೆ ಹಿಂದೇಟು ಹಾಕಿದ್ದ ಕಾಂಗ್ರೆಸ್, ಎನ್‍ಸಿಪಿ ಪಕ್ಷಗಳು ಶಿವಸೇನೆಗೆ ಷರತ್ತು ವಿಧಿಸಿತ್ತು. ಎನ್‍ಡಿಎ ಒಕ್ಕೂಟದಿಂದ ಹೊರ ಬಂದರೆ ಮಾತ್ರ ಮೈತ್ರಿಗೆ ಬೆಂಬಲ ನೀಡುವುದಾಗಿ ಹೇಳಿತ್ತು. ಸಿಎಂ ಸ್ಥಾನದ ಮೇಲೆ ಕಣ್ಣನ್ನು ಇಟ್ಟಿರುವ ಶಿವಸೇನೆ ಈ ಷರತ್ತನ್ನು ಒಪ್ಪಿಕೊಂಡಿದ್ದು ಈಗಾಗಲೇ ಮೋದಿ ಸರ್ಕಾರದಲ್ಲಿ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಖಾತೆಯ ಸಚಿವ ಅರವಿಂದ ಸಾವಂತ್ ರಾಜೀನಾಮೆ ನೀಡಿದ್ದಾರೆ.
Advertisement
Congress leader Mallikarjun Kharge after party's Working Committee meeting ends: We have called our Maharashtra leaders to Delhi for further discussions, the meeting will be at 4 pm. https://t.co/A95BwEaOW9 pic.twitter.com/iMEFMsh8cD
— ANI (@ANI) November 11, 2019
ಈಗಾಗಲೇ ಶಿವಸೇನೆಗೆ ರಾಜ್ಯಪಾಲರು ಸರ್ಕಾರ ರಚಿಸಲು ಅನುಮತಿ ನೀಡಿದ್ದು, ಬಹುಮತ ಸಾಬೀತು ಪಡಿಸಲು ಸೂಚಿಸಿದ್ದಾರೆ. ಮೂಲಗಳ ಪ್ರಕಾರ ಮಹಾಮೈತ್ರಿಯಲ್ಲಿ ಮೂರು ಪಕ್ಷಗಳ ಪೈಕಿ ಶಿವಸೇನೆ ಅತಿ ದೊಡ್ಡ ಪಕ್ಷವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನ, ಎನ್‍ಸಿಪಿ ಮತ್ತು ಕಾಂಗ್ರೆಸ್ಸಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲು ಮಾತುಕತೆ ನಡೆದಿದೆ. ಅಧಿಕಾರ ಹಂಚಿಕೆ ಸಂಬಂಧ ಮಾತುಕತೆ ಪೂರ್ಣಗೊಂಡರೆ ಶೀಘ್ರವೇ ಶಿವಸೇನೆ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಲಿದೆ.
ಮಹಾರಾಷ್ಟ್ರದಲ್ಲಿ ಶಿವಸೇನೆ ಇಲ್ಲಿಯವರೆಗೆ ಕಾಂಗ್ರೆಸ್ ವಿರುದ್ಧವೇ ಹೇಳಿಕೆ ನೀಡುತಿತ್ತು. ಹೀಗಾಗಿ ಕಾಂಗ್ರೆಸ್ ಮೈತ್ರಿಗೆ ಒಪ್ಪಿಗೆ ನೀಡಿದ್ದು ಕೈ ನಾಯಕರೇ ವಿರೋಧಿಸಿದ್ದಾರೆ. ಕಾಂಗ್ರೆಸ್ ಬಂಡಾಯ ನಾಯಕ ಸಂಜಯ್ ನಿರುಪಮ್ ಟ್ವೀಟ್ ಮಾಡಿ ಮೈತ್ರಿಯಿಂದ ಕಾಂಗ್ರೆಸ್ಸಿಗೆ ಹಾನಿಯಾಗುತ್ತದೆ. ಮಹಾರಾಷ್ಟ್ರದಲ್ಲಿ ರಾಜಕೀಯ ಅಸ್ಥಿರತೆ ಮುಂದುವರಿಯಲಿದೆ. 2020ಕ್ಕೆ ಮತ್ತೆ ಚುನಾವಣೆ ಎದುರಾಗುವ ಸಾಧ್ಯತೆಯಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಶಿವಸೇನೆಯ ಜೊತೆ ಮೈತ್ರಿ ಮಾಡುತ್ತಾ ಎಂದು ಪ್ರಶ್ನಿಸಿದ್ದಾರೆ.
No matter who forms govt and how ? But the political instability in Maharashtra can not be ruled out now. Get ready for early elections. It may take place in 2020.
Can we go to the elections with ShivSena as partner ?— Sanjay Nirupam (@sanjaynirupam) November 11, 2019
Sanjay Raut, Shiv Sena on Governor's invite to Shiv Sena to 'indicate willingness to form govt in Maharashtra': It would have been easy if Governor had given us more time.BJP was given 72 hrs;we've been given lesser time. It's a strategy of BJP to impose President's rule in state https://t.co/Je9QGtaafX pic.twitter.com/I45sOCAw6n
— ANI (@ANI) November 11, 2019