ಮುಂಬೈ: ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದ ಬೆನ್ನಲ್ಲೇ, ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಭಾನುವಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್‍ನ್ನು ಕಡಿತಗೊಳಿಸಿದೆ.
ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಲೀಟರ್‌ಗೆ 2.08 ರೂ. ಮತ್ತು ಡೀಸೆಲ್‍ಗೆ ಲೀಟರ್‌ಗೆ 1.44 ರೂ.ಗೆ ಇಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ರಾಷ್ಟ್ರಧ್ವಜದ ಮೇಲೆ ನಿಂತು ನಮಾಜ್- ವ್ಯಕ್ತಿಯ ಬಂಧನ
Advertisement
Advertisement
ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ 2,500 ಕೋಟಿ ರೂಪಾಯಿ ನಷ್ಟ ಉಂಟಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿದ ನಂತರ, ಪೆಟ್ರೋಲ್‍ನಿಂದ ತಿಂಗಳ ಆದಾಯವು 80 ಕೋಟಿ ರೂ.ಗಳಷ್ಟು ಕಡಿಮೆಯಾದರೆ, ಡೀಸೆಲ್‍ನಿಂದ 125 ಕೋಟಿ ರೂ. ಕಡಿಮೆಯಾಗಲಿದೆ ಎಂದು ರಾಜ್ಯ ಸರ್ಕಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: 12 ಜ್ಯೋತಿರ್ಲಿಂಗಗಳಲ್ಲಿ ಜ್ಞಾನವಾಪಿಯಲ್ಲಿ ಸಿಕ್ಕ ಶಿವಲಿಂಗವೂ ಒಂದು: ವಿಹೆಚ್‌ಪಿ
Advertisement
Advertisement
ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ ಕ್ರಮವಾಗಿ ರೂ. 8 ಮತ್ತು 6 ರೂ. ಕಡಿತ ಮಾಡಿ ಶನಿವಾರ ಆದೇಶ ಹೊರಡಿಸಿತ್ತು.