ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಲ್ಸೆ ಪಾಟೀಲ್ ಅವರಿಗೆ ವರ್ಷದಲ್ಲಿ ಎರಡನೇ ಬಾರಿ ಕೊರೊನಾ ದೃಢಪಟ್ಟಿದೆ.
ಈ ಕುರಿತಂತೆ ದಿಲೀಪ್ ವಲ್ಸೆ ಪಾಟೀಲ್ ಅವರು ತಮ್ಮ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ. ಸೋಂಕಿನ ಗುಣಲಕ್ಷಣಗಳು ಕಾಣಿಸಿಕೊಂಡ ಕಾರಣ ಕೋವಿಡ್ ಪರೀಕ್ಷೆಗೆ ಒಳಗಾದೆ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಅವರು ಕೋವಿಡ್ -19 ವಿರುದ್ಧ ಎರಡೂ ಡೋಸ್‍ಗಳನ್ನು ತೆಗೆದುಕೊಂಡಿದ್ದಾರೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: SCOOTERನಲ್ಲಿ ಶಾಲೆಗೆ ತೆರಳುತ್ತಿದ್ದಾಗ ದೊಡ್ಡ ರಸ್ತೆ ಗುಂಡಿಗೆ ಬಿದ್ದ ವಿದ್ಯಾರ್ಥಿನಿಯರು!
ನನಗೆ ಕೋವಿಡ್ ಧೃಡಪಟ್ಟಿದೆ, ನನ್ನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ನಾನು ವೈದ್ಯರು ನೀಡಿರುವ ಸಲಹೆಯನ್ನು ಪಾಲಿಸುತ್ತಿದ್ದೇನೆ. “ನಾಗ್ಪುರ ಮತ್ತು ಅಮರಾವತಿ ಪ್ರವಾಸ ಮತ್ತು ಇತರ ಕಾರ್ಯಕ್ರಮಗಳ ಸಮಯದಲ್ಲಿ ನನ್ನೊಂದಿಗೆ ಸಂಪರ್ಕ ಹೊಂದಿದ್ದ ಎಲ್ಲರಿಗೂ ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಒತ್ತಾಯಿಸುತ್ತೇನೆ” ಎಂದು ಟ್ವೀಟರ್ನಲ್ಲಿ ಬರೆದುಕೊಂಡಿದ್ದಾರೆ.
After experiencing mild symptoms I decided to get tested for COVID-19. I have tested positive. My condition is stable and I am following my doctor’s advice. I urge all those who came in contact with me during Nagpur & Amravati tour, & other programs, to get themselves tested.
— Dilip Walse Patil (@Dwalsepatil) October 28, 2021
ದಿಲೀಪ್ ವಲ್ಸೆ ಪಾಟೀಲ್ ಅವರು ಇತ್ತೀಚೆಗಷ್ಟೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಎನ್‍ಸಿಪಿ ನಾಯಕ ಮತ್ತು ಸಚಿವ ನವಾಬ್ ಮಲ್ಲಿಕ್ ಅವರೊಂದಿಗಿನ ಸಭೆಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಟಿ-20 ವಿಶ್ವಕಪ್‍ನಲ್ಲಿ ಪಾಕ್ ಗೆಲುವು ಆಚರಿಸೋರು ದೇಶದ್ರೋಹ ಆರೋಪ ಎದುರಿಸ್ಬೇಕಾಗಿರುತ್ತೆ: ಯೋಗಿ ಆದಿತ್ಯನಾಥ್
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಎನ್‍ಸಿಪಿ ನಾಯಕರಾಗಿರುವ ದಿಲೀಪ್ ವಲ್ಸೆ ಪಾಟೀಲ್ ಅವರಿಗೆ ಕೋವಿಡ್ ದೃಢಪಟ್ಟಿತ್ತು. ಇದೀಗ ಮತ್ತೆ ದಿಲೀಪ್ ವಲ್ಸೆ ಪಾಟೀಲ್ ಅವರಿಗೆ ಕೊರೊನಾ ಸೋಂಕು ತಗುಲಿದೆ.