LatestMain PostNational

ಸತತ 6ನೇ ಬಾರಿಗೆ ದೇಶದ ಸ್ವಚ್ಛ ನಗರ ಕಿರೀಟ ಮುಡಿಗೇರಿಸಿಕೊಂಡ ಇಂದೋರ್

ಮುಂಬೈ: ಕೇಂದ್ರ ಸರ್ಕಾರದ ವಾರ್ಷಿಕ ಸ್ವಚ್ಛತಾ ಸಮೀಕ್ಷೆಯಲ್ಲಿ ಮಧ್ಯಪ್ರದೇಶದ ಇಂದೋರ್ (Indore) ಸತತ ಆರನೇ ಬಾರಿಗೆ ಭಾರತದ ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜಸ್ಥಾನದ ಸೂರತ್ (Surat) ಮತ್ತು ಮಹಾರಾಷ್ಟ್ರದ ನವಿ ಮುಂಬೈ (Navi Mumbai) ನಂತರದ ಎರಡು ಸ್ಥಾನಗಳನ್ನು ಗಿಟ್ಟಿಸಿಕೊಂಡಿದೆ.

‘ಸ್ವಚ್ಛ ಸರ್ವೇಕ್ಷಣ್ ಅವಾರ್ಡ್ಸ್ 2022’ (Swachh Survekshan Awards 2022) ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ರಾಜ್ಯಗಳ ವಿಭಾಗದಲ್ಲಿ ಮಧ್ಯಪ್ರದೇಶವು (Madhya Pradesh) ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು, ಛತ್ತೀಸಗಢ (Chhattisgarh) ಮತ್ತು ಮಹಾರಾಷ್ಟ್ರವು (Maharashtra) ನಂತರದ ಸ್ಥಾನ ಗಿಟ್ಟಿಸಿಕೊಂಡಿದೆ. ಇದನ್ನೂ ಓದಿ: ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆ; ತ್ರಿಪಾಠಿ ನಾಮಪತ್ರ ತಿರಸ್ಕೃತ – ಖರ್ಗೆ, ಶಶಿ ತರೂರ್‌ ನಡುವೆ ಫೈಟ್

ಇಂದೋರ್ ಮತ್ತು ಸೂರತ್ ಈ ವರ್ಷ ದೊಡ್ಡ ನಗರಗಳ ವಿಭಾಗದಲ್ಲಿ ತಮ್ಮ ಅಗ್ರ ಸ್ಥಾನಗಳನ್ನು ಉಳಿಸಿಕೊಂಡರೆ, ವಿಜಯವಾಡ ನವಿ ಮುಂಬೈ ತನ್ನ ಮೂರನೇ ಸ್ಥಾನವನ್ನು ಕಳೆದುಕೊಂಡಿದೆ. 100ಕ್ಕಿಂತ ಕಡಿಮೆ ನಗರ ಸ್ಥಳೀಯ ಸಂಸ್ಥೆಗಳನ್ನು ಹೊಂದಿರುವ ರಾಜ್ಯಗಳ ಪೈಕಿ ತ್ರಿಪುರಾ ಅಗ್ರಸ್ಥಾನವನ್ನು ಪಡೆದುಕೊಂಡಿದೆ ಎಂದು ಸಮೀಕ್ಷೆಯ ಫಲಿತಾಂಶಗಳಿಂದ ತಿಳಿದುಬಂದಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ (Union Housing and Urban Affairs Minister Hardeep Singh Puri) ಹಾಗೂ ಇತರರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಆಗಮಿಸಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿದರು. ಇದನ್ನೂ ಓದಿ: ನಿವೃತ್ತಿಯಾಗುವ ಮುನ್ನ ಪಾಕಿಸ್ತಾನದಲ್ಲಿ ಆಡಿ – ಕೊಹ್ಲಿ ಆಹ್ವಾನಿಸಿದ ಪಾಕ್ ಅಭಿಮಾನಿ

ಒಂದು ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ನಗರಗಳ ವಿಭಾಗದಲ್ಲಿ ಮಹಾರಾಷ್ಟ್ರದ ಪಂಚಗಣಿ ಮೊದಲ ಸ್ಥಾನದಲ್ಲಿದ್ದರೆ, ಛತ್ತೀಸ್‍ಗಢದ ಪಟಾನ್ ಮತ್ತು ಮಹಾರಾಷ್ಟ್ರದ ಕರ್ಹಾದ್ ನಂತರದ ಸ್ಥಾನದಲ್ಲಿದೆ.

Live Tv

Leave a Reply

Your email address will not be published. Required fields are marked *

Back to top button