ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನಲೆ ಮುಖ್ಯಮಂತ್ರಿ ಮತ್ತು ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ (Eknath Shinde) ಅವರು ಥಾಣೆಯ (Thane) ಕೊಪ್ರಿ-ಪಚ್ಪಖಾಡಿ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ (Nomination Paper) ಸಲ್ಲಿಸಿದ್ದಾರೆ.
ಶಿಂಧೆ ಥಾಣೆಯ ಪ್ರಬಲ ನಾಯಕ ದಿವಂಗತ ಆನಂದ್ ದಿಘೆ ಅವರ ಸೋದರಳಿಯ ಶಿವಸೇನಾ (UBT) ಅಭ್ಯರ್ಥಿ ಕೇದಾರ್ ದಿಘೆ ಅವರನ್ನು ಎದುರಿಸಲಿದ್ದಾರೆ. 2009ರಲ್ಲಿ ಕ್ಷೇತ್ರ ರಚನೆಯಾದಾಗಿನಿಂದ ಶಿಂಧೆ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಏಕನಾಥ್ ಶಿಂಧೆ ಸಂತ ಏಕನಾಥ ಮಹಾರಾಜರ ವಂಶದ ಯೋಗಿರಾಜ್ ಮಹಾರಾಜ್ ಗೋಸ್ವಾಮಿಯವರಿಂದ ಆಶೀರ್ವಾದ ಪಡೆದರು. ಬಳಿಕ ರೋಡ್ ಶೋ ನಡೆಸಿದರು. ಅಲಂಕೃತ ರಥದಂತಹ ವಾಹನವನ್ನು ಏರಿ ನೂರಾರು ಬೆಂಬಲಿಗರು ಸಮ್ಮುಖದಲ್ಲಿ ಅವರು ನಾಮಪತ್ರ ಸಲ್ಲಿಸಲು ತೆರಳಿದರು. ಇದನ್ನೂ ಓದಿ: ನಾವು ಅಲ್ಲಾನ ವಿರೋಧಿಗಳಲ್ಲಾ- ಅಲ್ಲಾನ ಹೆಸರಿನ ಬದ್ಮಾಶ್‌ಗಿರಿ ಮಾಡೋರ ವಿರೋಧಿ: ಜೋಶಿ ಕಿಡಿ
Advertisement
Advertisement
ಏಕನಾಥ್ ಶಿಂಧೆ ನಾಮಪತ್ರ ಸಲ್ಲಿಕೆ ವೇಳೆ ಕೇಂದ್ರ ಸಚಿವ ರಾಮದಾಸ್ ಅಠವಳೆ ಸೇರಿದಂತೆ ಶಿವಸೇನೆ ಮತ್ತು ಎನ್‌ಸಿಪಿಯ, ಆರ್‌ಪಿಐ (ಎ) ಯ ಪ್ರಮುಖ ನಾಯಕರು ಭಾಗಿಯಾಗಿದ್ದರು. 2019ರ ಚುನಾವಣೆಯಲ್ಲಿ, ಶಿವಸೇನೆ ವಿಭಜನೆಯ ಮೊದಲು ಏಕನಾಥ್ ಶಿಂಧೆ ಕೊಪ್ರಿ-ಪಚ್ಪಖಾಡಿ ಸ್ಥಾನವನ್ನು 65% ಕ್ಕಿಂತ ಹೆಚ್ಚು ಮತಗಳೊಂದಿಗೆ ಗೆದ್ದರು. ಕಾಂಗ್ರೆಸ್ ಅಭ್ಯರ್ಥಿ ಸಂಜಯ್ ಘಡಿಗಾಂವ್ಕರ್ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಭ್ಯರ್ಥಿ ಮಹೇಶ್ ಪರಶುರಾಮ್ ಕದಂ ತಲಾ 13 ಪ್ರತಿಶತದಷ್ಟು ಮತ ಗಳಿಸಿದ್ದರು. ಇದನ್ನೂ ಓದಿ: ದೀಪಾವಳಿ ಹಬ್ಬ – ಬೆಂಗಳೂರಲ್ಲಿ ಪಟಾಕಿ ಸಿಡಿಸಲು ಬಿಬಿಎಂಪಿ ಮಾರ್ಗಸೂಚಿ
Advertisement
Advertisement
ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಕೂಡ ಬಾರಾಮತಿ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಎನ್‌ಸಿಪಿ-ಎಸ್‌ಪಿ ಅಭ್ಯರ್ಥಿಯಾಗಿ ಅಜಿತ್ ಪವಾರ್ ಅವರ ಸೋದರಳಿಯ ಮತ್ತು ಶರದ್ ಪವಾರ್ ಅವರ ಮೊಮ್ಮಗ ಯುಗೇಂದ್ರ ಪವಾರ್ ಕ್ಷೇತ್ರದಿಂದ ಪ್ರತಿಸ್ಪರ್ಧಿ ಅಭ್ಯರ್ಥಿಯಾಗಿದ್ದಾರೆ. ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವ್ಹಾಣ್ ಅವರು ಕರಡ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಚಿಖಾಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ವೇತಾ ಮಹಾಲೆ ಪಾಟೀಲ್ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಕಂಕಾವಲಿಯಿಂದ ಬಿಜೆಪಿ ಅಭ್ಯರ್ಥಿ ನಿತೇಶ್ ರಾಣೆ ರೋಡ್ ಶೋ ನಡೆಸಿ ಇಂದು ನಾಮಪತ್ರ ಸಲ್ಲಿಸಿದರು. ಜಾರ್ಖಂಡ್‌ನಲ್ಲಿ ಜಮ್ತಾರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೀತಾ ಸೊರೇನ್ ಅವರು ನಾಮಪತ್ರ ಸಲ್ಲಿಸಿದರು. ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರು ಧನ್ವಾರ್ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಇದನ್ನೂ ಓದಿ: 14,201 ಎಕರೆಯಲ್ಲಿ 773 ಎಕರೆ ಮಾತ್ರ ವಕ್ಫ್‌ಗೆ ನೋಟಿಫಿಕೇಶನ್ ಆಗಿದೆ: ಕೃಷ್ಣಭೈರೇಗೌಡ
ವಯನಾಡ್ ಲೋಕಸಭೆ ಉಪ ಚುನಾವಣೆಗೆ ಪ್ರಿಯಾಂಕ್ ಗಾಂಧಿ ಸಲ್ಲಿಸಿದ ನಾಮಪತ್ರ ಸ್ವೀಕೃತಗೊಂಡಿದೆ. ಈ ಬೆನ್ನಲ್ಲೇ ವಯನಾಡ್‌ನ ಮೂರು ಪ್ರದೇಶಗಳಲ್ಲಿ ಪ್ರಿಯಾಂಕ ಗಾಂಧಿ ರೋಡ್ ಶೋ ನಡೆಸಿದರು. ಇಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕ್ಷೇತ್ರಕ್ಕೆ ಸಮಯ ನೀಡಲ್ಲ ಎನ್ನುವ ಆರೋಪಕ್ಕೆ ಉತ್ತರ ನೀಡಿದರು. ನಾನು ಒಮ್ಮೆ ಆಯ್ಕೆಯಾಗಬೇಕು. ಆ ಬಳಿಕ ಎಷ್ಟು ಸಮಯ ನೀಡುವೆ ನೀವೆ ನೋಡುತ್ತಿರಿ. ಆಯ್ಕೆಯಾಗದೇ ಇದಕ್ಕೆ ಹೇಗೆ ಉತ್ತರಿಸಲಿ ಎಂದರು. ದೇಶದಲ್ಲಿ ನಿರುದ್ಯೋಗ ಸಮಸ್ಯೆಯು ಸಾರ್ವಕಾಲಿಕ ಉತ್ತುಂಗದಲ್ಲಿದೆ. ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡಲು ಶ್ರಮಿಸುತ್ತಿದ್ದಾರೆ. ನಿಮ್ಮ ಸೌಲಭ್ಯಗಳು ಸಾಕಷ್ಟು ಉತ್ತಮವಾಗಿಲ್ಲ. ಕಠಿಣ ತರಬೇತಿ ನೀಡುವ ಮತ್ತು ಕೆಲಸ ಮಾಡುವ ಎಲ್ಲಾ ಹುಡುಗರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಬೇಕಾಗಿದೆ ಎಂದು ಹೇಳಿದರು. ಇದನ್ನೂ ಓದಿ: 1974 ಮುಂಚಿನ ದಾಖಲೆ ಇದ್ದರೆ ರೈತರು ಟಾಸ್ಕ್ ಫೋರ್ಸ್‌ಗೆ ತಂದುಕೊಡಿ – ಎಂ.ಬಿ ಪಾಟೀಲ್