ಬೆಳಗಾವಿ: ಮಹಾರಾಷ್ಟ್ರದಲ್ಲಿ (Maharashtra) ಕರ್ನಾಟಕ (Karnataka) ಬಸ್‍ಗಳ ಮೇಲೆ ಕಲ್ಲು ತೂರಾಟ ಮಸಿ ಬಳಿದ ಪ್ರಕರಣ ಸೇರಿದಂತೆ ನಾಳೆ ಸುಪ್ರೀಂ ಕೋರ್ಟ್‍ನಲ್ಲಿ (Supreme Court) ಗಡಿ ವಿವಾದ ವಿಚಾರಣೆ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಭಾಗದ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಹೈವೋಲ್ಟೆಜ್ ಮೀಟಿಂಗ್ ನಡೆಯುತ್ತಿದೆ.
Advertisement
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‍ಕುಮಾರ್ ನೇತೃತ್ವದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಭಾಗದ ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ಜರುಗುತ್ತಿದೆ. ಸಭೆಯಲ್ಲಿ ಪ್ರಮುಖವಾಗಿ ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‍ಗಳ ಮೇಲೆ ಕಲ್ಲು ತೂರಾಟ ಮಸಿ ಬಳಿದ ಪ್ರಕರಣ ಸೇರಿದಂತೆ ನ.30ರಂದು ಗಡಿ ವಿವಾದದ ಅಂತಿಮ ವಿಚಾರಣೆ ಕುರಿತು ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಸುಪ್ರೀಂ ಕೋರ್ಟ್‍ನಲ್ಲಿ ಅಂತಿಮ ಹಂತದ ವಿಚಾರಣೆಯಲ್ಲಿ ಏನೇ ಆದರೂ ಕಾನೂನು ಸುವ್ಯವಸ್ಥೆ ಹದಗೆಡದಂತೆ ಎಚ್ಚರಿಕೆ ವಹಿಸುವ ಬಗ್ಗೆ ಚರ್ಚೆ ಜೊತೆಗೆ ಎರಡು ರಾಜ್ಯದ ಗಡಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಭೆ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಎಷ್ಟು ಜನ ರೌಡಿಶೀಟರ್‌ಗಳಿದ್ದಾರೆ ಅಂತ ಮೊದಲು ಲೆಕ್ಕ ಹಾಕಲಿ: ಸಿಎಂ
Advertisement
Advertisement
ಸಭೆಯಲ್ಲಿ ಕೆಲವು ನಿರ್ಧಾರಗಳನ್ನು ಕೂಡ ಎರಡು ರಾಜ್ಯದ ಪೊಲೀಸರು ಕೈಗೊಳ್ಳಲಿದ್ದಾರೆ. ಸಭೆಯಲ್ಲಿ ಉತ್ತರ ವಲಯ ಐಜಿಪಿ, ಬೆಳಗಾವಿ ಎಸ್‍ಪಿ, ನಗರ ಪೊಲೀಸ್ ಆಯುಕ್ತ, ಇಬ್ಬರು ಡಿಸಿಪಿ, ಆರು ಜನ ಡಿಎಸ್‍ಪಿ ಭಾಗಿಯಾಗಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಐಜಿಪಿ, ಕೊಲ್ಲಾಪುರ, ಸಿಂಧದುರ್ಗ, ಸಾಂಗ್ಲಿಯ ಎಸ್‌ಪಿಗಳು ಮತ್ತು ಆರು ಜನ ಡಿಎಸ್‍ಪಿಗಳು ಭಾಗಿಯಾಗಿದ್ದಾರೆ. ಇದನ್ನೂ ಓದಿ: ಸೈಲೆಂಟ್ ಸುನೀಲಗೆ ಬಿಜೆಪಿ ಬಾಗಿಲು ಬಂದ್- ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ