ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಹಿಳೆ ಮೇಲೆ 5 ತಿಂಗಳ ಕಾಲ ನಿರಂತರ ಅತ್ಯಾಚಾರ ಎಸಗಿದ ಆರೋಪದಡಿ 48 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ವಿಕ್ರಮಗಡ್ನ ಕೆವ್ನ ದಪ್ಚಾರಿ ಸುತಾರ್ ಪದಾ ಪ್ರದೇಶದ ನಿವಾಸಿಯಾಗಿದ್ದು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆ ಮೇಲೆ ಕಳೆದ ಐದು ತಿಂಗಳಿನಿಂದ ಅತ್ಯಾಚಾರವೆಸಗಿದ್ದಾನೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಜ್ಞಾನದೀವಿಗೆ 2ನೇ ಆವೃತ್ತಿಗೆ ಬೊಮ್ಮಾಯಿ, ಸಿದ್ದರಾಮಯ್ಯ ಚಾಲನೆ
Advertisement
Advertisement
ಆರೋಪಿಗಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಜೀವ ಬೆದರಿಕೆ ಹಾಕಿರುವುದಾಗಿ ಗರ್ಭಿಣಿ ತನ್ನ ತಾಯಿಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಇದೀಗ ಮಹಿಳೆ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಮೇನರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ತಿ ವಿಚಾರಕ್ಕೆ ನಡು ಬೀದಿಯಲ್ಲಿ ಸಂಬಂಧಿಕರ ಮಾರಾಮಾರಿ