ಮುಂಬೈ: ದಕ್ಷಿಣ ಆಫ್ರಿಕಾದಿಂದ ದೆಹಲಿ ವಿಮಾನ ನಿಲ್ದಾಣದ ಮೂಲಕ ಮುಂಬೈಗೆ ಆಗಮಿಸಿದ ಕಲ್ಯಾಣ್ ಡೊಂಬಿವಿಲಿ ಮುನ್ಸಿಪಲ್ ಪ್ರದೇಶದ ವ್ಯಕ್ತಿಯೊಬ್ಬರಿಗೆ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ನಾಲ್ಕಕ್ಕೆ ಏರಿಕೆ ಕಂಡಿದೆ.
Advertisement
ಮಹಾರಾಷ್ಟ್ರದಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ.ಕಲ್ಯಾಣ್ ಡೊಂಬಿವಿಲಿ ಮುನ್ಸಿಪಲ್ ಪ್ರದೇಶದ 33 ವರ್ಷದ ಸೋಂಕಿತ ವ್ಯಕ್ತಿ ನವೆಂಬರ್ 23 ರಂದು ದೆಹಲಿಗೆ ಬಂದಿದ್ದರು ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದರು. ನಂತರ ಅವರು ಮುಂಬೈಗೆ ವಿಮಾನದಲ್ಲಿ ತೆರಳಿದ್ದರು ಎಂದು ವರದಿಯಾಗಿದ್ದು, ಇಂದು ಅವರ ರಿಪೋರ್ಟ್ ಬಂದಿದ್ದು ಅದರಲ್ಲಿ ಓಮಿಕ್ರಾನ್ ಸೋಂಕು ದೃಢಪಟ್ಟಿದೆ. ಇದನ್ನೂ ಓದಿ: ಜಿಂಬಾಬ್ವೆಯಿಂದ ಗುಜರಾತ್‌ಗೆ ವಾಪಸ್ಸಾಗಿದ್ದ ವ್ಯಕ್ತಿಯಲ್ಲಿ ಓಮಿಕ್ರಾನ್ ಪತ್ತೆ- ಭಾರತದಲ್ಲಿ 3ಕ್ಕೇರಿದ ಸಂಖ್ಯೆ
Advertisement
Advertisement
ದೇಶದಲ್ಲಿ ಮೊದಲ ಎರಡು ಪ್ರಕರಣಗಳು ಕರ್ನಾಟಕ ರಾಜ್ಯದ ಬೆಂಗಳೂರಿನಲ್ಲಿ ಪತ್ತೆಯಾಗಿತ್ತು. ಬಳಿಕ ಇಂದು ಗುಜರಾತ್ ಮೂಲದ ಜಾಮ್‌ನಗರ ನಿವಾಸಿ 72 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಓಮಿಕ್ರಾನ್ ಓಮಿಕ್ರಾನ್ ಸೋಂಕು ಪತ್ತೆಯಾಗಿತ್ತು. ಇದನ್ನೂ ಓದಿ: ಲಸಿಕೆ ಪ್ರಮಾಣ ಪತ್ರ ಎಡವಟ್ಟು – ವ್ಯಾಕ್ಸಿನ್ ಪಡೆಯಲು ಬಂದಾತನಿಗೆ ಶಾಕ್
Advertisement