CoronaLatestMain PostNational

ಮಹಾರಾಷ್ಟ್ರದ ವ್ಯಕ್ತಿಯಲ್ಲಿ ಓಮಿಕ್ರಾನ್ ದೃಢ – ಭಾರತದಲ್ಲಿ 4ಕ್ಕೇರಿದ ಒಟ್ಟು ಪ್ರಕರಣ

ಮುಂಬೈ: ದಕ್ಷಿಣ ಆಫ್ರಿಕಾದಿಂದ ದೆಹಲಿ ವಿಮಾನ ನಿಲ್ದಾಣದ ಮೂಲಕ ಮುಂಬೈಗೆ ಆಗಮಿಸಿದ ಕಲ್ಯಾಣ್ ಡೊಂಬಿವಿಲಿ ಮುನ್ಸಿಪಲ್ ಪ್ರದೇಶದ ವ್ಯಕ್ತಿಯೊಬ್ಬರಿಗೆ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ನಾಲ್ಕಕ್ಕೆ ಏರಿಕೆ ಕಂಡಿದೆ.

ಮಹಾರಾಷ್ಟ್ರದಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ.ಕಲ್ಯಾಣ್ ಡೊಂಬಿವಿಲಿ ಮುನ್ಸಿಪಲ್ ಪ್ರದೇಶದ 33 ವರ್ಷದ ಸೋಂಕಿತ ವ್ಯಕ್ತಿ ನವೆಂಬರ್ 23 ರಂದು ದೆಹಲಿಗೆ ಬಂದಿದ್ದರು ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದರು. ನಂತರ ಅವರು ಮುಂಬೈಗೆ ವಿಮಾನದಲ್ಲಿ ತೆರಳಿದ್ದರು ಎಂದು ವರದಿಯಾಗಿದ್ದು, ಇಂದು ಅವರ ರಿಪೋರ್ಟ್ ಬಂದಿದ್ದು ಅದರಲ್ಲಿ ಓಮಿಕ್ರಾನ್ ಸೋಂಕು ದೃಢಪಟ್ಟಿದೆ. ಇದನ್ನೂ ಓದಿ: ಜಿಂಬಾಬ್ವೆಯಿಂದ ಗುಜರಾತ್‌ಗೆ ವಾಪಸ್ಸಾಗಿದ್ದ ವ್ಯಕ್ತಿಯಲ್ಲಿ ಓಮಿಕ್ರಾನ್‌ ಪತ್ತೆ- ಭಾರತದಲ್ಲಿ 3ಕ್ಕೇರಿದ ಸಂಖ್ಯೆ

ದೇಶದಲ್ಲಿ ಮೊದಲ ಎರಡು ಪ್ರಕರಣಗಳು ಕರ್ನಾಟಕ ರಾಜ್ಯದ ಬೆಂಗಳೂರಿನಲ್ಲಿ ಪತ್ತೆಯಾಗಿತ್ತು. ಬಳಿಕ ಇಂದು ಗುಜರಾತ್ ಮೂಲದ ಜಾಮ್‌ನಗರ ನಿವಾಸಿ 72 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಓಮಿಕ್ರಾನ್‌  ಓಮಿಕ್ರಾನ್ ಸೋಂಕು ಪತ್ತೆಯಾಗಿತ್ತು. ಇದನ್ನೂ ಓದಿ: ಲಸಿಕೆ ಪ್ರಮಾಣ ಪತ್ರ ಎಡವಟ್ಟು – ವ್ಯಾಕ್ಸಿನ್ ಪಡೆಯಲು ಬಂದಾತನಿಗೆ ಶಾಕ್

Leave a Reply

Your email address will not be published.

Back to top button