ಮುಂಬೈ: ಬಾಲಿವುಡ್ ನಟಿ ಹೇಮಾಮಾಲಿನಿ ಅವರ ಕೆನ್ನೆಯನ್ನು ಜಲಗಾಂವ್ ಜಿಲ್ಲೆಯ ತಮ್ಮ ಕ್ಷೇತ್ರದ ರಸ್ತೆಗಳಿಗೆ ಹೋಲಿಸುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಸಚಿವ ಮತ್ತು ಶಿವಸೇನೆಯ ಹಿರಿಯ ನಾಯಕ ಗುಲಾಬ್ ರಾವ್ ಪಾಟೀಲ್ ಇದೀಗ ಕ್ಷಮೆಯಾಚಿಸಿದ್ದಾರೆ.
Advertisement
ಉತ್ತರ ಮಹಾರಾಷ್ಟ್ರದ ತಮ್ಮ ಜಿಲ್ಲೆಯ ಬೋದ್ವಾಡ್ ನಗರ ಪಂಚಾಯತ್ ಚುನಾವಣೆಯ ಸಭೆಯನ್ನುದ್ದೇಶಿಸಿ ಗುಲಾಬ್ ರಾವ್ ಪಾಟೀಲ್ ಅವರು ಶನಿವಾರ ಭಾಷಣ ಮಾಡಿದ್ದ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಭಾಷಣದ ವೇಳೆ ಗುಲಾಬ್ ರಾವ್ ಪಾಟೀಲ್ ಅವರು ತಮ್ಮ ಕ್ಷೇತ್ರದ ರಸ್ತೆಗಳ ಗುಣಮಟ್ಟ ಎಷ್ಟಿದೆ ಎಂಬುವುದನ್ನು ತಮ್ಮ ವಿರೋಧಿಗಳಿಗೆ ಒಮ್ಮೆ ಭೇಟಿ ನೀಡಿ ನೋಡುವಂತೆ ತಿಳಿಸಿದ್ದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ
Advertisement
Advertisement
Advertisement
30 ವರ್ಷಗಳಿಂದ ಶಾಸಕನಾಗಿರುವ ನನ್ನ ಕ್ಷೇತ್ರಕ್ಕೆ ಬಂದು ಒಮ್ಮೆ ರಸ್ತೆ ನೋಡಿ. ಅದು ಹೇಮಾಮಾಲಿನಿ ಅವರ ಕೆನ್ನೆಯಂತೆ ಇಲ್ಲದಿದ್ದರೆ, ನಾನು ರಾಜೀನಾಮೆ ನೀಡುತ್ತೇನೆ ಮತ್ತು ನೀರು ಸರಬರಾಜು ಮತ್ತು ನೈರ್ಮಲ್ಯ ಬಗ್ಗೆ ಕೂಡ ಮಾತನಾಡಿದ್ದರು. ಇನ್ನೂ ಈ ಮಾತನ್ನು ಹಲವಾರು ವರ್ಷಗಳಿಂದ ಜಲಗಾಂವ್‍ನಿಂದ ಶಾಸಕರಾಗಿದ್ದ ಮಾಜಿ ಬಿಜೆಪಿ ನಾಯಕ ಏಕನಾಥ್ ಖಾಡ್ಸೆ ಅವರನ್ನು ಗುರಿಯಾಗಿಸಿಕೊಂಡು ಹೇಳಿದ್ದರು.
ಈ ಹೇಳಿಕೆ ಕುರಿತಂತೆ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು ಮತ್ತು ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಶಿವಾಜಿ ಪ್ರತಿಮೆಗೆ ಮಸಿ – ರಣಧೀರ ಪಡೆಯ 7 ಜನರ ಬಂಧನ
ಇದಾದ ಕೆಲವೇ ಗಂಟೆಗಳಲ್ಲಿ ಗುಲಾಬ್ ರಾವ್ ಪಾಟೀಲ್ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಈ ಕುರಿತಂತೆ ಧುಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾರನ್ನೂ ನೋಯಿಸುವ ಉದ್ದೇಶವನ್ನು ಹೊಂದಿರಲಿಲ್ಲ. ನನ್ನ ಹೇಳಿಕೆಗೆ ಕ್ಷಮೆಯಾಚಿಸುತ್ತೇನೆ. ನಾನು ಛತ್ರಪತಿ ಶಿವಾಜಿ ಮಹಾರಾಜರನ್ನು ಆರಾಧಿಸುವ ಶಿವಸೇನೆಗೆ ಸೇರಿದವನು. ಮಹಿಳೆಯರನ್ನು ಗೌರವಿಸುವುದನ್ನು ಪಕ್ಷದ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ನಮಗೆ ಕಲಿಸಿದ್ದಾರೆ ಎಂದು ತಿಳಿಸಿದರು.