ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ತನಿಖೆಯ ದಾರಿ ತಪ್ಪಿಸಲು ಇಂತಹ ವಿಧಾನ ಪೂರಕವಾಗಿದೆ. ಈ ಹಂತದಲ್ಲಿ ನಾವು ತನಿಖೆಯ ಯಾವುದೇ ಪ್ರಕ್ರಿಯೆಗೆ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ – ನವಾಬ್ ಮಲಿಕ್ ವಿರುದ್ಧ 5 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) 5,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು.
20 ವರ್ಷಗಳ ಹಿಂದೆ ಮುಂಬೈನ ಕುರ್ಲಾದಲ್ಲಿ 2.75 ಎಕರೆ ಜಾಗಕ್ಕಾಗಿ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪರ್ಕರ್‌ಗೆ ನವಾಬ್ ಮಲಿಕ್ 55 ಲಕ್ಷ ರೂ. ನಗದು ನೀಡಿದ್ದರು ಎಂದು ಇಡಿ ಮಾಹಿತಿ ಕಲೆಹಾಕಿದ್ದು, ಈ ಸಂಬಂಧ ಇಡಿ ಫೆ.23 ರಂದು ಮಲಿಕ್‍ರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು. ಇದನ್ನೂ ಓದಿ: ಇಡಿಯಿಂದ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅರೆಸ್ಟ್