ಮುಂಬೈ: ಕೇರಳವು ಮಿನಿ ಪಾಕಿಸ್ತಾನವಾಗಿದೆ (Pakistan) ಎಂದು ಹೇಳುವ ಮೂಲಕ ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ (Nitesh Rane) ವಿವಾದ ಸೃಷ್ಟಿಸಿದ್ದಾರೆ. ಸಚಿವರ ಹೇಳಿಕೆ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.
ಪುಣೆ ಜಿಲ್ಲೆಯ ಪುರಂದರ ತಾಲೂಕಿನಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಸಚಿವ, ಕೇರಳವು (Kerala) ಮಿನಿ ಪಾಕಿಸ್ತಾನವಾಗಿದೆ. ಆದ್ದರಿಂದಲೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ (Rahul Gandhi And Priyanka Gandhi) ಅಲ್ಲಿಂದ ಆಯ್ಕೆಯಾಗಿದ್ದಾರೆ. ಕೇರಳ ಮಿನಿ ಪಾಕಿಸ್ತಾನವಾಗಿದ್ದರಿಂದಲೇ ಗಾಂಧಿಗಳು ಗೆಲ್ಲುತ್ತಿದ್ದಾರೆ. ಏಕೆಂದರೆ ಎಲ್ಲಾ ಭಯೋತ್ಪಾದಕರು ಅವರಿಗೆ ಮತ ಹಾಕುತ್ತಾರೆ. ಇದು ಸತ್ಯ… ಸತ್ಯ… ಸತ್ಯ… ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ಚಿನ್ನ ವಂಚನೆ ಕೇಸ್ – ಐಶ್ವರ್ಯಗೌಡ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿ.ಕೆ ಸುರೇಶ್ ದೂರು
Advertisement
Advertisement
ರಾಣೆ ವಿರುದ್ಧ ನಿಗಿನಿಗಿ ಕೆಂಡ:
ವಿವಾದಿತ ಹೇಳಿಕೆ ಬೆನ್ನಲ್ಲೇ ಸಚಿವ ನಿತೀಶ್ ರಾಣೆ ವಿರುದ್ಧ ಮಹಾ ವಿಕಾಸ್ ಅಘಾಡಿ ಒಕ್ಕೂಟ ಕೆರಳಿ ಕೆಂಡವಾಗಿದೆ. ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಆನಂದ್ ದುಬೆ ಮಾತನಾಡಿ, ಪ್ರಧಾನಿ ಮೋದಿ ಕೇವಲ 1 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರಿಂದ ಬಿಜೆಪಿ ನಾಯಕರು ಚಿಂತಿತರಾಗಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು 4 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿರುವುದು ಅವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
Advertisement
Advertisement
ಕೇರಳ ಭಾರತದ ಭಾಗ, ಅಲ್ಲಿ ವಾಸಿಸುತ್ತಿರುವ ಜನ ನಮ್ಮವರು. ಪಾಕಿಸ್ತಾನದಂತೆ ಆಗುತ್ತಿದೆ ಅನ್ನೋದಾದ್ರೆ ಅಮಿತ್ ಶಾ ಅವರಿಗಾಗಲಿ, ರಾಜ್ಯಪಾಲರಿಗಾಗಲಿ ಏಕೆ ದೂರು ನೀಡಿಲ್ಲ. ಇದು ನೀಚತನದ ರಾಜಕೀಯ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಅರ್ಚಕರಿಗೆ ಪ್ರತಿ ತಿಂಗಳು 18 ಸಾವಿರ ಸಹಾಯಧನ: ಕೇಜ್ರಿವಾಲ್ ಘೋಷಣೆ
ವಿವಾದದ ಬೆನ್ನಲ್ಲೇ ಸ್ಪಷ್ಟನೆ:
ಇನ್ನೂ ವಿವಾದದ ಬೆನ್ನಲ್ಲೇ ನಿತೀಶ್ ರಾಣೆ ಸ್ಪಷ್ಟನೆ ನೀಡಿದ್ದು, ಕೇರಳದ ಜನರನ್ನಲ್ಲ ಪರಿಸ್ಥಿತಿಯನ್ನ ಪಾಕಿಸ್ತಾನದೊಂದಿಗೆ ಹೋಲಿಕೆ ಮಾಡಿರುವುದಾಗಿ ಉಲ್ಟಾ ಹೊಡೆದಿದ್ದಾರೆ.
ಈ ಬೆನ್ನಲ್ಲೇ ಕೇಂದ್ರ ಸಚಿವ ನಾರಾಯಣ ರಾಣೆ ಮಾತನಾಡಿದ್ದು, ಕೇರಳ ಭಾರತದ ಭಾಗವೇ ಆದರೂ ಅಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಎಲ್ಲರೂ ಚಿಂತಿಸಬೇಕಾದ ವಿಷಯ. ಹಿಂದೂಗಳನ್ನು ಮುಸ್ಲಿಂ ಮತ್ತು ಕ್ರೈಸ್ತರನ್ನಾಗಿ ಪರಿವರ್ತನೆ ಮಾಡುತ್ತಿರುವುದು ಅಲ್ಲಿ ದಿನನಿತ್ಯದ ವಿಷಯವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡಾಕಿಂಗ್ ಸಾಹಸಕ್ಕೆ ಇಸ್ರೋ ರೆಡಿ – ಏನಿದು ಪ್ರಯೋಗ? ಇಷ್ಟೊಂದು ಮಹತ್ವ ಯಾಕೆ?