ಮುಂಬೈ: 62 ನಿವಾಸಿಗಳಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆ ಮಹಾರಾಷ್ಟ್ರದ ಥಾಣೆ ಜಿಲ್ಲಾಡಳಿತ ವೃದ್ಧಾಶ್ರಮವನ್ನು ಕಂಟೈನ್ಮೆಂಟ್ ಝೋನ್ ಮಾಡಿದೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ‘ಮಾತೋಶ್ರೀ ವೃದ್ಧಾಶ್ರಮ’ದ 62 ನಿವಾಸಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಈ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಮಾಡಲಾಗಿದೆ ಎಂದು ಜಿಲ್ಲಾಡಳಿತ ಘೋಷಿಸಿದೆ. ಪ್ರಸ್ತುತ ಈ 62 ನಿವಾಸಿಗಳನ್ನು ಹತ್ತಿರದ ಸಿವಿಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
Advertisement
Advertisement
ಆಸ್ಪತ್ರೆಗೆ ದಾಖಲಾದ 62 ರೋಗಿಗಳಲ್ಲಿ 37 ಪುರುಷರು ಮತ್ತು 25 ಮಹಿಳೆಯರು. ಇವರಲ್ಲಿ 41 ಜನರು ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ. ಎಲ್ಲ ರೋಗಿಗಳನ್ನು ನಾವು ಗಮನಿಸುತ್ತಿದ್ದು, ಆಸ್ಪತ್ರೆಯ ವೈದ್ಯಕೀಯ ತಂಡವು ಹಗಲು-ರಾತ್ರಿ ಅವರನ್ನು ನೋಡಿಕೊಳ್ಳುತ್ತಿದೆ. 10 ದಿನಗಳ ಕಾಲ ಇವರನ್ನು ಆಸ್ಪತ್ರೆಯಲ್ಲಿ ಇರಿಸಲಾಗುವುದು. ವೃದ್ಧಾಶ್ರಮದಿಂದ ಇತರ ಐದು ಶಂಕಿತ ಸೋಂಕಿತರನ್ನು ಆಸ್ಪತ್ರೆಯ ಸಾಮಾನ್ಯ ವಾರ್ಡ್‍ಗೆ ದಾಖಲಿಸಲಾಗಿದೆ. 15 ಜನರ ಪರೀಕ್ಷಾ ಮಾದರಿಗಳನ್ನು ಜಿನೋಮ್ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಆಸ್ಪತ್ರೆಯ ಅಧಿಕಾರಿ ತಿಳಿಸಿದರು. ಇದನ್ನೂ ಓದಿ: ಇಂದು ಕರ್ನಾಟಕದಲ್ಲಿ 257 ಪಾಸಿಟಿವ್, 5 ಸಾವು
Advertisement
Advertisement
ಸಿವಿಲ್ ಸರ್ಜನ್ ಡಾ ಕೈಲಾಸ್ ಪವಾರ್ ಈ ಕುರಿತು ಮಾತನಾಡಿದ್ದು, ದಾಖಲಾದ ನಾಲ್ವರನ್ನು ಐಸಿಯುನಲ್ಲಿ ಇಡಲಾಗಿದ್ದು, ಆಮ್ಲಜನಕದ ಸಹಾಯದಿಂದ ಅವರು ಬದುಕಿದ್ದಾರೆ. ಈ ನಿವಾಸಿಗಳು ‘ಮಾತೋಶ್ರೀ ವೃದ್ಧಾಶ್ರಮ’ ದವರಾಗಿದ್ದು, 2 ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಈ ವೃದ್ಧಾಶ್ರಮದಲ್ಲಿ 55 ಹಿರಿಯ ನಾಗರಿಕರು, 5 ಜನ ನೌಕರರು ಮತ್ತು ಒಂದೂವರೆ ವರ್ಷದ ಮಗು ಸೇರಿದಂತೆ ಸಿಬ್ಬಂದಿಯ ಎರಡು ಕುಟುಂಬದ ಸದಸ್ಯರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಈ ವಾರಾಂತ್ಯದಲ್ಲಿ ಪಾಸಿಟಿವ್ ಬಂದ ಹಿನ್ನೆಲೆ ಅವರೆಲ್ಲರನ್ನು ಥಾಣೆ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು ಎಂದರು.
ಜಿಲ್ಲಾಡಳಿತವು ಪ್ರಸ್ತುತ ಭಿವಂಡಿ ತಹಸಿಲ್‍ನ ಸೊರ್ಗಾಂವ್ ಗ್ರಾಮವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿದೆ. ಹಿರಿಯ ನಾಗರಿಕರು ವೃದ್ಧಾಶ್ರಮದಲ್ಲಿ ಒಟ್ಟಿಗೆ ಓಡಾಡುವುದು, ತಿನ್ನುವುದು ಮತ್ತು ಹಲವು ಚಟುವಟಿಕೆಗಳನ್ನು ಒಟ್ಟಿಗೆ ನಡೆಸುವುದರಿಂದ ಸೋಂಕು ಇವರಿಗೆ ಬೇಗ ಹರಡಿಕೊಂಡಿದೆ ಎಂದು ಹೇಳಿದರು. ಇದನ್ನೂ ಓದಿ: ಗುರುದ್ವಾರದಲ್ಲಿ ಫೋಟೋಶೂಟ್ – ಮಾಡೆಲ್ ವಿರುದ್ಧ ನೆಟ್ಟಿಗರು ಗರಂ