ನವದೆಹಲಿ: ಶಿವನ ರಾಜಮನೆತನ ನೀಡುವ ಪ್ರತಿಷ್ಠಿತ ‘ಶಿವ ಸಮ್ಮಾನ್’ (Shiv Samman Award) ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಯ್ಕೆಯಾಗಿದ್ದಾರೆ.
ಈ ವಿಚಾರವನ್ನು ಮಹಾರಾಷ್ಟ್ರ (Maharashtra) ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿಯವರನ್ನು ನಾನು ಅಭಿನಂದಿಸುತ್ತೇನೆ. ಇದು ಎಲ್ಲಾ ಶಿವ ಭಕ್ತರಿಗೆ ಸಂತೋಷ ಮತ್ತು ಹೆಮ್ಮೆಯ ಕ್ಷಣ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ವಿಕಸಿತ ಭಾರತ್ ಬಜೆಟ್ – ಹಣಕಾಸು ಸಚಿವೆಗೆ ಪ್ರಧಾನಿ ಮೋದಿ ಶ್ಲಾಘನೆ
Advertisement
Advertisement
ಭಾರತದ ಶ್ರೇಷ್ಠ ಮತ್ತು ಆದರ್ಶ ರಾಜ ಛತ್ರಪತಿ ಶಿವಾಜಿ ಮಹಾರಾಜರ ಹೆಸರಿನಲ್ಲಿ ರಾಜಮನೆತನದವರು ನೀಡುವ `ಶಿವ ಸಮ್ಮಾನ್ ಪ್ರಶಸ್ತಿ’ಯನ್ನು ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲಾಗುವುದು. ಇದು ಎಲ್ಲಾ ಶಿವಭಕ್ತರಿಗೆ ಸಂತೋಷ ಮತ್ತು ಹೆಮ್ಮೆಯ ಕ್ಷಣವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಅವರು ಪೊಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.
Advertisement
Advertisement
ಈ ಪ್ರಶಸ್ತಿಯನ್ನು ಸತಾರಾ ರಾಜಮನೆತನ ಮತ್ತು ಶಿವಭಕ್ತರಿಂದ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ಸೈನಿಕ್ ಸ್ಕೂಲ್ ಮೈದಾನದಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ. ಇದನ್ನೂ ಓದಿ: ಮಹತ್ವದ ಘೋಷಣೆ, ಉಚಿತ ಭರವಸೆಗಳಿಗೆ ಬ್ರೇಕ್ – ಅಧಿಕಾರಿಗಳಿಗೆ ಮೋದಿ ಸೂಚಿಸಿದ್ದೇನು?