ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಸಿಎಂ, ಏಕನಾಥ್ ಶಿಂಧೆ ಡಿಸಿಎಂ ಆಗ್ತಾರೆ: ಮೂಲಗಳು

Public TV
1 Min Read
DEVENDRA FADNAVIS EKNATH SHINDE

ಮುಂಬೈ: ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಮಹಾರಾಷ್ಟ್ರದ ಮುಂದಿನ ಸಿಎಂ ಆಗಲಿದ್ದಾರೆ. ಮೈತ್ರಿಕೂಟ ಸರ್ಕಾರ ಉರುಳಲು ಕಾರಣರಾದ ಏಕನಾಥ್ ಶಿಂಧೆ ಉಪ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಶ್ವಾಸಮತಯಾಚನೆಗೆ ಸಂಬಂಧಿಸಿದಂತೆ ರಾಜ್ಯಪಾಲರ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದ ಕೆಲವೇ ಗಂಟೆಗಳಲ್ಲಿ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದರ ಬೆನ್ನಲ್ಲೇ ಫಡ್ನವಿಸ್ ಮಹಾರಾಷ್ಟ್ರದ ಮುಂದಿನ ಸಿಎಂ ಎನ್ನುವ ಮಾತು ಕೇಳಿಬರುತ್ತಿದೆ.

ಠಾಕ್ರೆ ರಾಜೀನಾಮೆ ಬೆನ್ನಲ್ಲೇ ರಾಜ್ಯಪಾಲರ ಭೇಟಿಗೆ ದೇವೇಂದ್ರ ಫಡ್ನವಿಸ್ ಸಮಯ ಕೇಳಿದ್ದಾರೆ. ಇಂದು ಸಂಜೆ 4:30 ಕ್ಕೆ ರಾಜ್ಯಪಾಲರ ಭೇಟಿಗೆ ಅವಕಾಶ ಕೇಳಿದ್ದಾರೆ. ಫಡ್ನವಿಸ್ ಅವರು ಏಕನಾಥ್ ಶಿಂಧೆ ಜೊತೆಗೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ಇದನ್ನೂ ಓದಿ:‌ ಜಿಎಸ್‌ಟಿ ಪರಿಹಾರದ ಅವಧಿ ವಿಸ್ತರಣೆ: ಆಗಸ್ಟ್ ತಿಂಗಳಲ್ಲಿ ಅಂತಿಮ ನಿರ್ಣಯ – ಬೊಮ್ಮಾಯಿ

ರೆಬೆಲ್ ಶಾಸಕರ ಸಹಿ ಪತ್ರದೊಂದಿಗೆ ಭೇಟಿಯಾಗಲಿದ್ದಾರೆ. ಈ ವೇಳೆ ಉಭಯ ನಾಯಕರು ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಇದನ್ನೂ ಓದಿ: ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ : ಬಿಜೆಪಿ ವ್ಯಂಗ್ಯ

Live Tv

Share This Article
Leave a Comment

Leave a Reply

Your email address will not be published. Required fields are marked *