ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸಮನ್ಸ್ ನೀಡಿದ್ದು, ಮಂಗಳವಾರ ವಿಚಾರಣೆಗೆ ಹಾಜರಾಗಲು ಸೂಚಿಸಿದೆ.
ಈ ಹಿಂದೆ ಇಡಿ ಪ್ರವೀಣ್ ರಾವತ್ ಮತ್ತು ಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾವತ್ ಅವರ ಕೆಲವು ಆಸ್ತಿಗಳನ್ನು ಜಪ್ತಿ ಮಾಡಿತ್ತು. ಪ್ರವೀಣ್ ರಾವತ್‍ಗೆ ಸಂಬಂಧಿಸಿದ 9 ಕೋಟಿ ರೂ. ಮೌಲ್ಯದ ಆಸ್ತಿ ಹಾಗೂ 1,034 ಕೋಟಿ ರೂ. ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಸಂಜಯ್ ರಾವತ್ ಅವರ ಪತ್ನಿ ವರ್ಷಾ ಅವರಿಗೆ ಸೇರಿದ ಸುಮಾರು 2 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿತ್ತು.
Advertisement
Advertisement
ಹಣಕಾಸು ನಿಗಾ ಸಂಸ್ಥೆಯು ಪ್ರವೀಣ್ ರಾವತ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಇದೀಗ ಮತ್ತೆ ವಿಚಾರಣೆಗೆ ಹಾಜರಾಗಲು ತಿಳಿಸಿದೆ. ಸಮನ್ಸ್‌ಗೆ ಪ್ರತಿಕ್ರಿಯಿಸಿದ ಶಿವಸೇನಾ ನಾಯಕಿ ಪ್ರಿಯಾಂಕಾ ಚತುರ್ವೇದಿ ಅವರು, ಇಡಿ ಬಿಜೆಪಿಗೆ ನಿಜವಾದ ಭಕ್ತಿ ತೋರಿಸುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮತ್ತೆ ಬಂದ್ ಆಗ್ತಿದೆಯಾ ಶಿರಾಡಿ ಘಾಟ್..?
Advertisement
भाजपा से परम भक्ति का सबसे बड़ा उधारण पेश करती हुई ED डिपार्टमेंट। https://t.co/ri1BXppzIF
— Priyanka Chaturvedi???????? (@priyankac19) June 27, 2022
ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಶಿವಸೇನಾ ನಾಯಕ ಏಕನಾಥ್ ಶಿಂಧೆ ಗುವಾಹಟಿಯ ಹೋಟೆಲ್‍ನಲ್ಲಿ ಹಲವಾರು ಶಾಸಕರೊಂದಿಗೆ ಬೀಡು ಬಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಯಶವಂತ್ ಸಿನ್ಹಾ