ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದೊಂದು ವಾರದಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾ ಇಂದು ಸುಪ್ರೀಂ ಕೋರ್ಟ್ ಅಂಗಳದಲ್ಲಿ ವಿಚಾರಣೆಗೆ ಒಳಪಟ್ಟಿದೆ. ಈ ವೇಳೆ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಬಹುಮತ ಕಳೆದುಕೊಂಡಿದೆ. ಉದ್ಧವ್ ಸರ್ಕಾರಕ್ಕೆ ನಮ್ಮ ಬೆಂಬಲವಿಲ್ಲ ಎಂದು ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆ ತಿಳಿಸಿದ್ದಾರೆ.
Advertisement
ಮೂರು ಪ್ರಮುಖ ಬೇಡಿಕೆಗಳೊಂದಿಗೆ ಏಕನಾಥ್ ಶಿಂಧೆ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದು ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿ ತುರ್ತು ವಿಚಾರಣೆಗೆ ಒಪ್ಪಿದ ಸುಪ್ರೀಂ ಕೋರ್ಟ್, ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ಆರಂಭಿಸಿದೆ. ಈ ವೇಳೆ ಬಂಡಾಯ ಶಾಸಕರು ಉದ್ಧವ್ ಠಾಕ್ರೆ ಸರ್ಕಾರ 3ನೇ ಎರಡರಷ್ಟು ಬೆಂಬಲ ಕಳೆದುಕೊಂಡಿದೆ. ಉದ್ಧವ್ ಠಾಕ್ರೆ ಸರ್ಕಾರಕ್ಕೆ ನಮ್ಮ ಬೆಂಬಲವಿಲ್ಲ. ನಾವು 39 ಶಾಸಕರು ಸರ್ಕಾರದಿಂದ ಹೊರ ಬಂದಿದ್ದು ಬೆಂಬಲ ಹಿಂಪಡೆದಿದ್ದೇವೆ ಎಂದಿದ್ದಾರೆ. ಇದೀಗ ವಿಚಾರಣೆ ಮುಂದುವರಿಯುತ್ತಿದೆ. ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಸಂಜಯ್ ರಾವತ್‍ಗೆ ಇಡಿ ಸಮನ್ಸ್- ನಾಳೆ ವಿಚಾರಣೆ
Advertisement
Advertisement
ಏಕನಾಥ್ ಶಿಂಧೆ ಬಂಡಾಯ ಎದ್ದ ಬಳಿಕ ಅವರನ್ನು ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ವಜಾಗೊಳಿಸಿ ಅಜಯ್ ಚೌಧರಿ ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಶಿವಸೇನೆ ನೇಮಕ ಮಾಡಲಾಗಿತ್ತು. ಇದನ್ನು ಡೆಪ್ಯುಟಿ ಸ್ಪೀಕರ್ ನರಹರಿ ಸೀತಾರಾಮ್ ಝಿರವಾಲ್ ಅನುಮೋದಿಸಿದ್ದರು. ಈ ಎರಡು ಕ್ರಮಗಳನ್ನು ಅರ್ಜಿಯನ್ನು ಬಂಡಾಯ ಶಾಸಕರು ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನಿಸಿದ್ದಾರೆ. 3ನೇ ಎರಡರಷ್ಟು ಭಾಗದಷ್ಟು ಶಾಸಕರು ಏಕನಾಥ್ ಶಿಂಧೆ ಪರವಾಗಿದ್ದು ಅವರನ್ನು ನಾಯಕ ಎಂದು ಘೋಷಿಸಿದ್ದೇವೆ, ಅಜಯ್ ಚೌಧರಿ ನೇಮಕ ಕಾನೂನು ಬಾಹಿರ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದೆ. ಎರಡನೇ ಪ್ರಮುಖ ಬೇಡಿಕೆಯಲ್ಲಿ ಡೆಪ್ಯುಟಿ ಸ್ಪೀಕರ್ ವಿರುದ್ಧ ಸಲ್ಲಿಸಿರುವ ಅವಿಶ್ವಾಸ ನಿರ್ಣಯ ಬಗೆಹರಿಯುವರೆಗೂ ಶಿವಸೇನೆ ಸಲ್ಲಿಸಿರುವ ಅನರ್ಹತೆ ಅರ್ಜಿ ಕುರಿತು ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಡೆಪ್ಯುಟಿ ಸ್ಪೀಕರ್ ಗೆ ಸೂಚಿಸಲು ಮನವಿ ಮಾಡಿದ್ದಾರೆ. ಮೂರನೇ ಮನವಿಯಲ್ಲಿ ತಮ್ಮಗೂ ತಮ್ಮ ಕುಟುಂಬಕ್ಕೂ ಭದ್ರತೆ ನೀಡಲು ಅತೃಪ್ತ ಶಾಸಕರು ಸುಪ್ರೀಂಕೋರ್ಟ್‍ಗೆ ಮನವಿ ಮಾಡಿದ್ದಾರೆ. ಈ ಎಲ್ಲದರ ನಡುವೆ ಉದ್ಧವ್ ಠಾಕ್ರೆ ಸರ್ಕಾರ ಬಹುತೇಕ ಪತನಗೊಳ್ಳುವ ಸಾಧ್ಯತೆ ಹೆಚ್ಚಿದೆ.