ವಿಜಯಪುರ: ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆ (Heavy Rain) ಮುಂದುವರೆದಿದ್ದು ಉಜನಿ ಹಾಗೂ ವೀರ್ ಜಲಾಶಯಗಳಿಂದ ಭೀಮಾನದಿಗೆ (Bhima River) ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ.
ಮಹಾರಾಷ್ಟ್ರದಿಂದ ಒಟ್ಟು 1,20,000 ಕ್ಯೂಸೆಕ್ ನೀರು ಭೀಮಾ ನದಿಗೆ ಹರಿಸಿದ್ದರಿಂದ ವಿಜಯಪುರ (Vijayapura) ಜಿಲ್ಲೆಯಲ್ಲಿ ಭೀಮಾ ನದಿ ಉಕ್ಕಿ ಹರಿಯುತ್ತಿದೆ. ಚಡಚಣ ತಾಲೂಕಿನಲ್ಲಿ ಭೀಮಾನದಿಗೆ ಅಡ್ಡಲಾಗಿ ಕಟ್ಟಿರುವ ಉಮರಾಣಿ- ಲವಗಿ ಬ್ಯಾರೇಜ್ ಮುಳುಗಡೆಯಾಗಿದೆ. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಕ್ಷಿಪ್ರಕ್ರಾಂತಿ – ಹಿಂದೂ ದೇವಸ್ಥಾನಗಳ ಮೇಲೆ ಪುಂಡರ ದಾಳಿ
ಭಾರೀ ನೀರು ಹರಿಯುತ್ತಿರುವುದರಿಂದ ಜಿಲ್ಲೆಯ ಭೀಮಾ ನದಿ ಪಾತ್ರದ ಜನರಲ್ಲಿ ಆತಂಕ ಶುರುವಾಗಿದೆ. ಚಡಚಣ, ಇಂಡಿ, ಆಲಮೇಲ, ಸಿಂದಗಿ ತಾಲೂಕುಗಳಲ್ಲಿ ಪ್ರವಾಹದ ಭೀತಿ ಶುರುವಾಗಿದೆ.