ಮುಂಬೈ: ಮಹಾರಾಷ್ಟ್ರದಲ್ಲಿ 50:50 ಸರ್ಕಾರ ರಚನೆಗೆ ಬಿಜೆಪಿ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಶಿವಸೇನೆ ಆಪರೇಷನ್ ಆರಂಭಿಸಿದೆ.
ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮುಖಂಡ ಅಜಿತ್ ಪವಾರ್ ಅವರನ್ನು ಶಿವಸೇನೆ ಸಂಪರ್ಕಿಸಿದೆ. ಈ ವಿಚಾರವನ್ನು ಸ್ವತಃ ಅಜಿತ್ ಪವಾರ್ ಮಾಧ್ಯಮಗಳ ಜೊತೆಗೆ ಹಂಚಿಕೊಂಡಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಎನ್‌ಸಿಪಿ ಜೊತೆಗೆ ಮೈತ್ರಿ ಸಾಧಿಸಲು ಸರ್ವ ಪ್ರಯತ್ನವನ್ನು ಶಿವಸೇನೆ ನಡೆಸಿದೆ. ಇದನ್ನೂ ಓದಿ: ರಾಷ್ಟ್ರಪತಿ ನಿಮ್ಮ ಜೇಬಿನಲ್ಲಿದ್ದಾರಾ? ಬಿಜೆಪಿ ಹೇಳಿಕೆಗೆ ಶಿವಸೇನೆ ಕೆಂಡಾಮಂಡಲ
Advertisement
Ajit Pawar, Nationalist Congress Party: I received a message from Sanjay Raut a while ago, I was in a meeting so couldn't respond. This is the first time after elections that he has contacted me, I don't know why he has messaged me. I will call him in a while. #Maharashtra pic.twitter.com/HAjKqBlsY3
— ANI (@ANI) November 3, 2019
Advertisement
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಜಿತ್ ಪವಾರ್, ಶಿವಸೇನೆ ನಾಯಕ ಸಂಜಯ್ ರಾವತ್ ಅವರಿಂದ ಸಂದೇಶ ಬಂದಿತ್ತು. ಆದರೆ ನಾನು ಸಭೆಯಲ್ಲಿ ಇದ್ದಿದ್ದರಿಂದ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ನನಗೆ ಸಂದೇಶ ಕಳುಹಿಸಿದ್ದಾರೆ. ಯಾಕೆ ಸಂದೇಶ ಕಳುಹಿಸಿದ್ದಾರೆ ಎನ್ನುವುದು ಗೊತ್ತಿಲ್ಲ. ಸ್ವಲ್ಪ ಸಮಯದ ನಂತರ ಅವರನ್ನು ಸಂಪರ್ಕಿಸುತ್ತೇನೆ ಎಂದು ತಿಳಿಸಿದ್ದಾರೆ.
Advertisement
ಇದಕ್ಕೂ ಮುನ್ನ ಸಂಜಯ್ ರಾವತ್, ಸರ್ಕಾರ ರಚಿಸಲು ನಮ್ಮ ಬಳಿ ಬಹುಮತವಿದೆ. 288 ಕ್ಷೇತ್ರಗಳ ಪೈಕಿ ನಮಗೆ 170 ಶಾಸಕರ ಬೆಂಬಲ ದೊರೆತಿದೆ. ನಾವು ಸ್ವತಂತ್ರವಾಗಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಬಹುದು. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದರಿಂದ ಬಿಜೆಪಿ ಜೊತೆಯಲ್ಲಿ 50:50 ಫಾರ್ಮುಲಾದಂತೆ ಸರ್ಕಾರ ರಚಿಸಿಬೇಕಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಸಿಎಂ ಸ್ಥಾನ ನಮಗೆ ಬರೆದಿಟ್ಟುಕೊಳ್ಳಿ – ಬಿಜೆಪಿ ಇಲ್ಲದೇ ಸರ್ಕಾರ ರಚನೆಗೆ ಶಿವಸೇನೆ ಪ್ಲಾನ್
Advertisement
ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಅಕ್ಟೋಬರ್ 24ರಂದು ಬಂದಿದ್ದರೂ, ಇದುವರೆಗೂ ಸರ್ಕಾರ ರಚನೆಯಾಗಿಲ್ಲ. ಶಿವಸೇನೆ ಮತ್ತು ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿತ್ತು. ಈ ಮೈತ್ರಿಗೆ ಬಹುಮತ ಸಿಕ್ಕರೂ ಸರ್ಕಾರ ರಚನೆ ಕಗ್ಗಂಟಾಗಿದೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ನಮ್ಮನ್ನು ವಿರೋಧ ಪಕ್ಷದಲ್ಲಿ ಕೂರುವಂತೆ ಜನಾದೇಶ ಬಂದಿದೆ. ವಿಪಕ್ಷದಲ್ಲಿಯೇ ಕುಳಿತುಕೊಳ್ಳುತ್ತೇವೆಯೇ ಹೊರತು ಯಾರೊಂದಿಗೆ ಮೈತ್ರಿ ಮಾಡಿಕೊಳ್ಳಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೀಗ ಸಂಜಯ್ ರಾವತ್, ನಮಗೆ 170 ಶಾಸಕರ ಬೆಂಬಲವಿದೆ ಎಂಬ ಹೇಳಿಕೆ ಮಹಾರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
2014ರ ಚುನಾವಣೆಯಲ್ಲಿ ಶಿವಸೇನೆ ಮತ್ತು ಬಿಜೆಪಿ ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದ್ದವು. ಶಿವಸೇನೆ 63 ಮತ್ತು ಬಿಜೆಪಿ 122 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿತ್ತು. ನಂತರ ಎರಡೂ ಪಕ್ಷಗಳು ಚುನಾವಣೋತ್ತರ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಲಾಗಿತ್ತು.
2019ರಲ್ಲಿ ಬಿಜೆಪಿ ಚುನಾವಣೆ ಪೂರ್ವದಲ್ಲಿಯೇ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಇತ್ತ ಕಾಂಗ್ರೆಸ್ ಮತ್ತು ಎನ್‌ಸಿಪಿ ಮೈತ್ರಿ ರಚನೆ ಮಾಡಿಕೊಂಡು ಅಖಾಡಕ್ಕೆ ಇಳಿದಿದ್ದವು. ಬಿಜೆಪಿ 105, ಶಿವಸೇನೆ, 56, ಎನ್‌ಸಿಪಿ 54, ಕಾಂಗ್ರೆಸ್ 44 ಮತ್ತು ಇತರರು 29 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.