ಮುಂಬೈ: ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಶಿಕ್ಷಿಸಿದ ಆರೋಪದ ಮೇಲೆ ಮಹಾರಾಷ್ಟ್ರದ (Maharashtra) ಥಾಣೆಯ (Thane) ಖಾಸಗಿ ಶಾಲಾ ಶಿಕ್ಷಕಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿಕ್ಷಕಿ, ಶಾಲಾ ಶುಲ್ಕ (School fees) ಪಾವತಿಸದ ವಿದ್ಯಾರ್ಥಿಗಳಿಗೆ ನೋಟ್‍ಬುಕ್‍ನಲ್ಲಿ `ನಾಳೆ ನನ್ನ ಶಾಲಾ ಶುಲ್ಕವನ್ನು ತರಲು ನಾನು ಮರೆಯುವುದಿಲ್ಲ’ ಎಂದು 30 ಬಾರಿ ಬರೆಸಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರಿಂದ ಬೇಸತ್ತ ಪೋಷಕರು ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: 50,000 ರೂ.ಗೆ 17 ವರ್ಷದ ಅಪ್ರಾಪ್ತೆಯ ಮಾರಾಟ – ನಾಲ್ವರ ಬಂಧನ
ಥಾಣೆ ಮುನ್ಸಿಪಲ್ ಕಾರ್ಪೋರೇಷನ್ (Thane Municipal Corporation) ಇದನ್ನು ಗಂಭೀರವಾಗಿ ಪರಿಗಣಿಸಿತ್ತು. ಸಿವಿಕ್ ಕಮಿಷನರ್ ಅಭಿಜಿತ್ ಭಂಗಾರ್ ಅವರು ಶಾಲೆಗೆ ಭೇಟಿ ನೀಡಿ ವಿಚಾರದ ಬಗ್ಗೆ ತನಿಖೆ ನಡೆಸುವಂತೆ ಶಿಕ್ಷಣಾಧಿಕಾರಿಗೆ ಆದೇಶಿಸಿದ್ದರು. ಶಿಕ್ಷಣಾಧಿಕಾರಿ ತನಿಖೆಯ ನಂತರ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಲಾ ಆಡಳಿತ ಮಂಡಳಿಗೆ ಆದೇಶ ನೀಡಿದ್ದರು. ಕೂಡಲೇ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಶಾಲೆಗೆ ಎಚ್ಚರಿಕೆ ನೀಡಲಾಗಿದೆ. ಈ ರೀತಿ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುವುದು ತಪ್ಪು. ಶಿಕ್ಷಣ ಹಕ್ಕು ಕಾಯಿದೆ (Right to Education Act) ಅಡಿ ಶಾಲಾ ವಿದ್ಯಾರ್ಥಿಗಳ ಭಾವನಾತ್ಮಕ ಅಥವಾ ದೈಹಿಕ ಕಿರುಕುಳ ನೀಡುವುದು ನಿಷೇಧಿಸಲಾಗಿದೆ. ಇಂತಹ ಪರಿಸ್ಥಿತಿಯು ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂಬ ಅಂಶವನ್ನು ನೆನಪಿಡ ಬೇಕು ಎಂದು ಕಮಿಷನರ್ ಹೇಳಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ ಸಾಬೀತಾದ್ರೆ ನಾನೇ ನೇಣು ಹಾಕ್ಕೋತೀನಿ: ಬ್ರಿಜ್ ಭೂಷಣ್