ಬೆಳಗಾವಿ: ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಮಹಾವಿಕಾಸ್ ಅಘಾಡಿ ಸರ್ಕಾರ ಪತನವಾಗಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ಸಂತಸ ಹಂಚಿಕೊಂಡಿದ್ದಾರೆ.
ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡುತ್ತಿದ್ದಂತೆ ಕನ್ನಡಗರಿಂದ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳು ಹಂಚಿಕೊಂಡು ಸಂಭ್ರಮಿಸಿದರು. ಪೋಸ್ಟ್‍ನಲ್ಲಿ ಹೊಡಿ ಒಂಬತ್, ಹೋಳಿಗೆ ಊಟ ನಾಳೆ. ಖುಷಿ ತಡಕೊಳೋಕೆ ಆಗ್ತಿಲ್ಲ. ಬೆಳಗಾವಿ ಬಿಡ್ರಿ. ಮಹಾರಾಷ್ಟ್ರವನ್ನೇ ಇವರ ಕಡೆ ಉಳಿಸಿಕೊಳ್ಳಲಾಗಲಿಲ್ಲ ಎಂದು ಪೋಸ್ಟ್ ಮಾಡಿ ಸಂಭ್ರಮಿಸಿದರು. ಇದನ್ನೂ ಓದಿ: ಮಕ್ಕಳೊಂದಿಗೆ ದೇವಾಲಯಕ್ಕೆ ಭೇಟಿ ಕೊಟ್ಟ ಉದ್ಧವ್ ಠಾಕ್ರೆ
Advertisement
Advertisement
ಅಧಿಕಾರಕ್ಕೆ ಬಂದ ದಿನದಿಂದಲೂ ಮಾಜಿ ಸಿಎಂ ಉದ್ಧವ್ ಠಾಕ್ರೆ ಗಡಿ ಕ್ಯಾತೆ ತಗೆಯುತ್ತಿದ್ದರು. ಇದರಿಂದಾಗಿ ಕನ್ನಡಿಗರ ಹಾಗೂ ಮರಾಠಿಗರ ಮಧ್ಯೆ ಆಗಾಗ ಹಿಂಸಾಚಾರಕ್ಕೂ ಕಾರಣವಾಗುತ್ತಿತ್ತು. ಆದರೆ ಗುರುವಾರ ಸುಪ್ರೀಂ ಕೋರ್ಟ್ ವಿಶ್ವಾಸ ಮತಯಾಚನೆ ನಡೆಸುವಂತೆ ಆದೇಶ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನಾನು ಸಿಎಂ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದ್ಧವ್ ಠಾಕ್ರೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಕನ್ನಡಿಗ ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾಳೆ ಬಿಜೆಪಿ-ಶಿಂಧೆ ಸರ್ಕಾರ ರಚನೆ ಸಾಧ್ಯತೆ- ಹೊಸ ಸರ್ಕಾರ ರಚನೆ ಉಸ್ತುವಾರಿ ಹೊತ್ತ ಸಿ.ಟಿ ರವಿ