ಮುಂಬೈ: ಮಹಾರಾಷ್ಟ್ರ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಸರ್ಕಾರ ರಚನೆಗೆ ಹಕ್ಕು ಸಾಧಿಸಲು ಮುಂದಾಗಿದೆ. ಪ್ರಮಾಣ ವಚನ ಸಮಾರಂಭ ನಾಳೆ ನಡೆಯುವ ಸಾಧ್ಯತೆ ಇದೆ.
ಶಿವಸೇನೆಯ ಏಕನಾಥ್ ಶಿಂಧೆ ಬಣದ ಹಿರಿಯ ಸಚಿವ ದೀಪಕ್ ಕೇಸರ್ಕರ್ ಮಾಹಿತಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ ಮತ್ತು ಡಿಸಿಎಂ ಮಾತ್ರ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಯಾರ‍್ಯಾರು ಸಂಪುಟ ಸೇರುತ್ತಾರೆ ಎಂಬ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ.
Advertisement
ಶಿಂಧೆ ಮತ್ತು ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವಿಸ್ ಅವರು ಮುಖ್ಯಮಂತ್ರಿ ಸ್ಥಾನದ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ. ಅವರಲ್ಲಿ ಯಾರಿಗೆ ಈ ಬಾರಿ ಉನ್ನತ ಸ್ಥಾನ ಸಿಗುತ್ತದೆ ಎಂಬುದು ಸದ್ಯದ ಕುತೂಹಲವಾಗಿದೆ.
Advertisement
ಒಟ್ಟು 288 ಸ್ಥಾನಗಳಲ್ಲಿ ಮಹಾಯುತಿ 235 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 132 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.