ಮುಂಬೈ: ಮಹಾರಾಷ್ಟ್ರದ (Maharashtra) ಜಲಗಾಂವ್‌ನಲ್ಲಿ ವರದಕ್ಷಿಣೆ ಕಿರುಕುಳಕ್ಕೆ (Dowry Harassment) ಬೇಸತ್ತು ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಮಯೂರಿ ಗೌರವ್ ತೋಸರ್ (23) ಎಂದು ಗುರುತಿಸಲಾಗಿದೆ. ಹುಟ್ಟುಹಬ್ಬದ ಮರುದಿನ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅತ್ತೆ-ಮಾವ ನಿರಂತರ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ.
ನಾಲ್ಕು ತಿಂಗಳ ಅವಧಿಯಲ್ಲಿ ಹಲವಾರು ಬಾರಿ ಕುಟುಂಬಸ್ಥರ ಜೊತೆ ರಾಜಿ ಪ್ರಯತ್ನಗಳು ನಡೆದಿವೆ. ಇಷ್ಟಾದರೂ ಚಿತ್ರಹಿಂಸೆ ಮುಂದುವರಿದಿದ್ದರಿಂದ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅತ್ತೆ-ಮಾವನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತೋಸರ್‌ನ ಪೋಷಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ
ಈ ಸಂಬಂಧ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
ಕಳೆದ ತಿಂಗಳು ನೋಯ್ಡಾದಲ್ಲಿ ನಿಕ್ಕಿ ಭಾಟಿ (28) ಎಂಬಾಕೆಯನ್ನು ಆಕೆಯ ಅತ್ತೆ-ಮಾವಂದಿರು ಜೀವಂತವಾಗಿ ಸುಟ್ಟು ಹಾಕಿದ್ದರು. ಈ ಹತ್ಯೆಯನ್ನು ಆಕೆಯ ಏಳು ವರ್ಷದ ಮಗ ಮತ್ತು ಸಹೋದರಿ ಕಣ್ಣಾರೆ ಕಂಡಿದ್ದರು. ಬೆಂಕಿ ಹೊತ್ತಿಕೊಂಡು ನಿಕ್ಕಿ ಮೆಟ್ಟಿಲುಗಳ ಕೆಳಗೆ ಕುಳಿತಿದ್ದ ವೀಡಿಯೋ ಸಹ ವೈರಲ್ ಆಗಿತ್ತು. ಇದನ್ನೂ ಓದಿ: ತುಮಕೂರು | ಮಹಿಳೆ ಆತ್ಮಹತ್ಯೆ – ವರದಕ್ಷಿಣೆ ಕಿರುಕುಳ ಆರೋಪ