ಮೊಟ್ಟೆ ವಿಷಯಕ್ಕೆ ಗಲಾಟೆ – ಮಹಿಳೆ ಸಾವು

Public TV
1 Min Read
EGG

ಮುಂಬೈ: ಮೊಟ್ಟೆ (Egg) ತಿನ್ನುವ ವಿಚಾರಕ್ಕೆ 2 ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ (Maharashtra) ಔರಂಗಾಬಾದ್‍ನಲ್ಲಿ ನಡೆದಿದೆ.

ನಗರದ ಮೊಟ್ಟೆ ಅಂಗಡಿಯೊಂದರಲ್ಲಿ ಈ ಘಟನೆ ನಡೆದಿದ್ದು, ಸಮೀಪದಲ್ಲೇ ರೈದಾಸ್ ಪೂಜೆ ನಡೆಯುತ್ತಿದ್ದರಿಂದ ಅಲ್ಲಿ ಜನಸಾಗರವೇ ನೆರೆದಿತ್ತು. ಈ ವೇಳೆ 2 ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಈ ವಾಗ್ವಾದವೇ ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿದೆ. ಘಟನೆಯಲ್ಲಿ ಓರ್ವ ಮಹಿಳೆ (Woman) ಸಾವನ್ನಪ್ಪಿದ್ದಾರೆ. ಗಾಯಗೊಂಡ 6 ಜನರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಹೊರಗಿನ ಪರಿಸ್ಥಿತಿ ಏನೇ ಇರಲಿ, ಆಂತರಿಕವಾಗಿ ಭಾರತ ಗಟ್ಟಿಯಾಗಿದೆ: ಮೋದಿ

police jeep 1

ಮೊಟ್ಟೆಯ ಆಹಾರ ಸೇವಿಸಿದ್ದೇ ಘಟನೆಗೆ ಕಾರಣ ಎಂದು ಜಿಲ್ಲಾಡಳಿತ ಖಚಿತಪಡಿಸಿದೆ. ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ವಲಯಾಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆ: ಸತೀಶ್ ಜಾರಕಿಹೊಳಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *