ಮುಂಬೈ: ಬಂದ್ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಅಮರಾವತಿ ನಗರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದ್ದು, ನಾಲ್ಕು ದಿನಗಳ ಕರ್ಫ್ಯೂ ವಿಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ತ್ರಿಪುರಾದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರವನ್ನು ಖಂಡಿಸಿ ಮುಸ್ಲಿಂ ಸಂಘಟನೆಗಳು ಆಯೋಜಿಸಿದ್ದ ರ್ಯಾಲಿಗಳನ್ನು ವಿರೋಧಿಸಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಬಂದ್ಗೆ ಕರೆ ನೀಡಿದ್ದಾರೆ. ಈ ವೇಳೆ ಗುಂಪೊಂದು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಹಸು ಸಗಣಿ, ಗೋಮೂತ್ರ ಆರ್ಥಿಕತೆ ಬಲಪಡಿಸುತ್ತದೆ: ಶಿವರಾಜ್ ಸಿಂಗ್ ಚೌಹಾಣ್
Advertisement
Advertisement
ನಗರದಲ್ಲಿ ಮೂರು ದಿನಗಳ ಕಾಲ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಜೊತೆಗೆ ಇಂದಿನಿಂದಲೇ ಕಫ್ರ್ಯೂ ಕೂಡ ಹೇರಲಾಗಿದೆ ಎಂದು ಪೊಲೀಸ್ ಕಮಿಷನರ್ ಆರತಿ ಸಿಂಗ್ ಮಾಹಿತಿ ನೀಡಿದ್ದಾರೆ.
Advertisement
ನೂರಾರು ಮಂದಿ ಬಾವುಟಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ರಾಜ್ಕಮಲ್ ಚೌಕ್ ಬಳಿಯ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕೆಲವರು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆಂದು ಹಿರಿಯ ಅಧಿಕಾರಿ ವಿವರಿಸಿದ್ದಾರೆ. ಇದನ್ನೂ ಓದಿ: ಪಂಜಾಬ್ ಚುನಾವಣೆಗೆ ಸೋನು ಸೂದ್ ಸೋದರಿ ಸ್ಪರ್ಧೆ – ಪಕ್ಷ ಇನ್ನೂ ಸಸ್ಪೆನ್ಸ್!
Advertisement
ಪರಿಸ್ಥಿತಿ ಉದ್ವಿಗ್ನಗೊಂಡಿರುವುದರಿಂದ ವೈದ್ಯಕೀಯ ತುರ್ತು ಪರಿಸ್ಥಿತಿ ಹೊರತುಪಡಿಸಿ ಇತರೆ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಜನರು ಮನೆಯಿಂದ ಹೊರಬಾರದಂತೆ ಸೂಚಿಸಲಾಗಿದೆ. ಅಲ್ಲದೇ ಒಂದು ಕಡೆ ಐದಕ್ಕೂ ಹೆಚ್ಚು ಮಂದಿ ಗುಂಪು ಸೇರದಂತೆ ನಿರ್ಬಂಧಿಸಲಾಗಿದೆ.