ಮುಂಬೈ: ಮಹಾರಾಷ್ಟ್ರದಲ್ಲಿ ವರದಿಯಾದ ಓಮಿಕ್ರಾನ್ ಮೊದಲ ಪ್ರಕರಣದ ಸೋಂಕಿತನನ್ನು ಮತ್ತೆ ಪರೀಕ್ಷೆಗೆ ಒಳಪಡಿಸಿದ್ದು, ನೆಗೆಟಿವ್ ಬಂದಿದೆ. ವ್ಯಕ್ತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಎಂಜಿನಿಯರ್ ವೃತ್ತಿಯಲ್ಲಿರುವ 33 ವರ್ಷ ವಯಸ್ಸಿನ ಈ ವ್ಯಕ್ತಿ ಮುಂಬೈ ನಿವಾಸಿಯಾಗಿದ್ದಾರೆ. ಇವರು ಕೋವಿಡ್ ಲಸಿಕೆ ಪಡೆದುಕೊಂಡಿಲ್ಲ. ನವೆಂಬರ್‌ನ ಕೊನೆ ವಾರದಲ್ಲಿ ದಕ್ಷಿಣ ಆಫ್ರಿಕಾದಿಂದ ದೆಹಲಿಗೆ ವಾಪಸ್ಸಾಗಿದ್ದರು. ಈ ವೇಳೆ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಇರುವುದು ದೃಢಪಟ್ಟಿತ್ತು. ಇದನ್ನೂ ಓದಿ: ಕೊರೊನಾ ಮೂರನೇ ಅಲೆ ತಡೆಯಲು ಸಕಲ ಸಿದ್ಧತೆ: ಆರ್ ಅಶೋಕ್
Advertisement
Advertisement
ಸದ್ಯ ಓಮಿಕ್ರಾನ್‌ನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದರೆ 1 ವಾರ ಮನೆಯಲ್ಲೇ ಕ್ವಾರಂಟೈನ್ ಆಗಿರಬೇಕು. ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.
Advertisement
ಈ ವ್ಯಕ್ತಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಪ್ರಯತ್ನಿಸಿದ್ದರು. ಆದರೆ ಖಾಸಗಿ ಮರ್ಚೆಂಟ್ ನೇವಿ ಹಡಗಿನಲ್ಲಿ ಕೆಲಸ ಮಾಡುತ್ತಿದ್ದರಿಂದ ಲಸಿಕೆ ಪಡೆಯಲು ಸಾಧ್ಯವಾಗಿರಲಿಲ್ಲ. ಈ ವರ್ಷದ ಏಪ್ರಿಲ್‌ನಲ್ಲಿ ಎರಡನೇ ಅಲೆ ಭೀಕರತೆ ಸಂದರ್ಭದಲ್ಲಿ ಅವರು ವಿದೇಶಕ್ಕೆ ತೆರಳಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಪಡಿತರ ಅಕ್ಕಿ ಪಾಲಿಶ್ ಮಾಡಿ ವಿದೇಶಕ್ಕೆ ರಫ್ತು
Advertisement
ಮಹಾರಾಷ್ಟ್ರದಲ್ಲಿ ಈವರೆಗೆ 10 ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಮುಂಜಾಗ್ರತೆ ಕ್ರಮವಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಅದರಲ್ಲೂ ಮುಖ್ಯವಾಗಿ ಅಪಾಯ ಇರುವ ದೇಶಗಳಿಂದ ಬರುವವರಿಗೆ ಕಠಿಣ ಮಾರ್ಗಸೂಚಿಗಳನ್ನು ಸರ್ಕಾರ ಹೊರಡಿಸಿದೆ.