ಮುಂಬೈ: ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದ ಪತನದ ನಂತರ ಉದ್ಧವ್ ಠಾಕ್ರೆ ಅವರು ತಮ್ಮ ಮಕ್ಕಳಾದ ಆದಿತ್ಯ ಠಾಕ್ರೆ ಮತ್ತು ತೇಜಸ್ ಠಾಕ್ರೆಯೊಂದಿಗೆ ಮುಂಬೈನ ದೇವಸ್ಥಾನಕ್ಕೆ ಭೇಟಿ ನೀಡಿದರು.
Advertisement
ಜೂನ್ 21ರಂದು ಶಿವಸೇನೆಯ ಏಕನಾಥ್ ಶಿಂಧೆ ನೇತೃತ್ವದಲ್ಲಿ ಹಲವಾರು ಬಂಡಾಯ ಶಾಸಕರು ಸೂರತ್‍ಗೆ ತೆರಳಿದರು. ಸುಮಾರು 8 ದಿನಗಳ ರಾಜಕೀಯ ಬಿಕ್ಕಟ್ಟು ಉದ್ಧವ್ ಠಾಕ್ರೆ ಅವರ ರಾಜೀನಾಮೆಯೊಂದಿಗೆ ಅಂತ್ಯಗೊಂಡಿದೆ. ಇದನ್ನೂ ಓದಿ: ನಾಳೆ ಬಿಜೆಪಿ-ಶಿಂಧೆ ಸರ್ಕಾರ ರಚನೆ ಸಾಧ್ಯತೆ- ಹೊಸ ಸರ್ಕಾರ ರಚನೆ ಉಸ್ತುವಾರಿ ಹೊತ್ತ ಸಿ.ಟಿ ರವಿ
Advertisement
Mumbai | Uddhav Thackeray offered prayers at a temple with sons Aaditya and Tejas after submitting his resignation as Maharashtra CM to Governor Bhagat Singh Koshyari pic.twitter.com/QyMy5Ehshf
— ANI (@ANI) June 29, 2022
Advertisement
ಗುರುವಾರ ಸುಪ್ರೀಂ ಕೋರ್ಟ್ ವಿಶ್ವಾಸ ಮತಯಾಚನೆ ನಡೆಸುವಂತೆ ಆದೇಶ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನಾನು ಸಿಎಂ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದ್ಧವ್ ಠಾಕ್ರೆ ತಿಳಿಸಿದರು. ಸರ್ಕಾರ ರಚನೆಗೆ ಸಹಕಾರ ನೀಡಿದ್ದಕ್ಕೆ ಎನ್‍ಸಿಪಿ ಮತ್ತು ಕಾಂಗ್ರೆಸ್‍ಗೆ ಉದ್ಧವ್ ಠಾಕ್ರೆ ಧನ್ಯವಾದ ಹೇಳಿದ್ದಾರೆ.
Advertisement
ಗುರುವಾರ ಉದ್ಧವ್ ಸರ್ಕಾರ ವಿಶ್ವಾಸಮತ ಸಾಬೀತು ಪಡಿಸಬೇಕು ಎಂದು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಆದೇಶ ನೀಡಿದ್ದರು. ವಿಶೇಷ ಅಧಿವೇಶನ ಕರೆದು ಸಂಜೆ ಐದು ಗಂಟೆಯೊಳಗೆ ವಿಶ್ವಾಸಮತ ಪ್ರಕ್ರಿಯೆ ಮುಗಿಸುವಂತೆ ವಿಧಾನಸಭೆ ಕಾರ್ಯದರ್ಶಿಗೆ ಖಡಕ್ಕಾಗಿ ಆದೇಶ ನೀಡಿದ್ದರು. ಈ ಹಿನ್ನೆಲೆ ವಿಶ್ವಾಸಮತಯಾಚನೆಗೂ ಮುನ್ನವೇ ಸಿಎಂ ಹುದ್ದೆಗೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ.