ಕಲಬುರಗಿ: ಆಳಂದದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗದ ಶುದ್ಧೀಕರಣ ವಿಚಾರದ ಗಲಾಟೆ ವಿಕೋಪಕ್ಕೆ ಹೋಗಿದ್ದು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಶಿವಲಿಂಗದ ಶುದ್ಧೀಕರಣಕ್ಕೆ ಹಿಂದೂಪರ ಸಂಘಟನೆಗಳು ಪಟ್ಟು ಹಿಡಿದಿದ್ದು, ಆಂದೋಲಾದ ಶ್ರೀಸಿದ್ದಲಿಂಗ ಸ್ವಾಮೀಜಿ ಕಲಬುರಗಿಯಿಂದ ಆಳಂದ ಚಲೋಗೆ ಕರೆ ಕೊಟ್ಟಿದ್ದರು. ಆದರೆ ಆಳಂದ ಚಲೋಗೆ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಇದನ್ನೂ ಓದಿ: ಕಲಬುರಗಿಗೆ ಬರುವಾಗ ಚೈತ್ರಾ ವಶಕ್ಕೆ – ಯಾದಗಿರಿ ಗಡಿ ದಾಟಿಸಿ ಬಿಟ್ಟ ಪೊಲೀಸರು
ಶಿವರಾತ್ರಿ ಹಬ್ಬದಂದೇ ಮುಸ್ಲಿಮರ ಸಂದಲ್ ಮತ್ತು ಶಬ್‍ಏ ಬರಾತ್ ಇರುಗವುದರಿಂದ ಶಾಂತಿ ಭಂಗವಾಗುವ ಸಾಧ್ಯತೆಯಿದೆ ಎಂದು ಜಿಲ್ಲಾಡಳಿತದಿಂದ ಆಳಂದ ಚಲೋಗೆ ಅನುಮತಿ ಸಿಕ್ಕಿರಲಿಲ್ಲ. ಪ್ರಮೋದ್ ಮುತಾಲಿಕ್ ಹಾಗೂ ಚೈತ್ರಾ ಕುಂದಾಪುರ ಕಲಬುರಗಿ ಜಿಲ್ಲೆಗೆ ಕಾಲಿಡುವಂತಿಲ್ಲ ಅಂತಾ ಜಿಲ್ಲಾಡಳಿತ ಆದೇಶಿಸಿತ್ತು. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?
ಇಂದು ಹಿಂದೂಪರ ಸಂಘಟನೆ ಕಾರ್ಯಕರ್ತರು ದರ್ಗಾ ಪ್ರವೇಶಿಸಬಾರದು ಎಂದು ಯುವಕರ ಗುಂಪೊಂದು ನಿಷೇಧಾಜ್ಞೆ ನಡುವೆ ತಲ್ವಾರ್, ದೊಣ್ಣೆ ಪ್ರದರ್ಶಿಸಿತ್ತು. ಆದರೆ ಪೊಲೀಸರು ಯಾರಿಗೂ ಅವಕಾಶ ನೀಡಿರಲಿಲ್ಲ. ತೀವ್ರ ಗದ್ದಲ, ಗಲಾಟೆ ನಡೆಸಿದ್ದಕ್ಕೆ ಪೊಲೀಸರು ಲಾಠಿಚಾರ್ಜ್ ನಡೆಸಿ ನಿಯಂತ್ರಿಸಿದ್ದಾರೆ. ಇದನ್ನೂ ಓದಿ: ಊಟ ತರಲು ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ ಅದೇ ನವೀನ್‍ನ ಕೊನೆ ಮಾತು: ಶ್ರೀಕಾಂತ್