ರಾಯಚೂರು: ಮಂತ್ರಾಲಯದಲ್ಲಿ ಮಹಾಶಿವರಾತ್ರಿ ಸಂಭ್ರಮ ಜೋರಾಗಿದೆ. ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ಎಲ್ಲ ಭಕ್ತರು ಸಂಭ್ರಮದಲ್ಲಿದ್ದಾರೆ.
Advertisement
ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥಸ್ವಾಮಿ ವಿಶೇಷ ಪೂಜೆ ನೆರವೇರಿಸುತ್ತಿದ್ದು, ರುದ್ರದೇವರಿಗೆ ಮಹಾರುದ್ರಾಭಿಷೇಕ ನಡೆಯಿತು. ಮಠದ ಪಂಡಿತರು, ಸಂಸ್ಕೃತ ಪಾಠಶಾಲೆ ವಿದ್ಯಾರ್ಥಿಗಳಿಂದ ಮಂತ್ರಪಠಣ ನಡೆಯಿತು. ಮಹಾಶಿವರಾತ್ರಿ ಹಿನ್ನೆಲೆ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಮಠಕ್ಕೆ ಬರುತ್ತಿದ್ದಾರೆ. ಇದನ್ನೂ ಓದಿ: ಇಂದು ಮಹಾಶಿವರಾತ್ರಿ – ಆದಿ ಅಂತ್ಯವಿಲ್ಲದ ಶಿವನ ಆರಾಧಕರಿಗೆ ಇಂದು ಹಬ್ಬ
Advertisement
Advertisement
ಮಹಾಶಿವರಾತ್ರಿ ಹಿನ್ನೆಲೆ ರಾಯಚೂರಿನ ಈಶ್ವರ ದೇವಾಲಯಗಳಲ್ಲಿ ಬೆಳಗ್ಗೆಯಿಂದ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಬೆಳಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ನಗರದ ಐತಿಹಾಸಿಕ ಚಂದ್ರಮೌಳೇಶ್ವರ ದೇವಾಲಯ, ರಾಮಲಿಂಗೇಶ್ವರ ದೇವಾಲಯ, ನಂದೀಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಅಲ್ಲದೆ ಭಕ್ತರ ಸಂಖ್ಯೆಯೂ ಸಹ ಹೆಚ್ಚಾಗಿದೆ.
Advertisement
ಮಹಾಪಂಚಾಮೃತ ಅಭೀಷೇಕ ಸೇರಿದಂತೆ ಬೆಳಗ್ಗೆ ನಾಲ್ಕು ಗಂಟೆಯಿಂದಲೇ ಪೂಜೆಗಳು ನಡೆಯುತ್ತವೆ. ಮಹಾಶಿವರಾತ್ರಿ ಹಿನ್ನೆಲೆ ರಾತ್ರಿ ಜಾಗರಣೆಗೂ ದೇವಾಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಮೆಟ್ರೋ ನಿಲ್ದಾಣದ ಗ್ರಿಲ್‍ನಲ್ಲಿ ಸಿಲುಕಿದ್ದ ಬಾಲಕಿ ರಕ್ಷಿಸಿದ CISF ಸಿಬ್ಬಂದಿ!