ಮುಂಬೈ: ಮಹಾತ್ಮ ಗಾಂಧಿಯವರ (Mahatma Gandhi) ಮೊಮ್ಮಗ ಅರುಣ್ ಗಾಂಧಿ (Arun Gandhi) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ (Maharashtra) ಕೊಲ್ಲಾಪುರದಲ್ಲಿ ನಿಧನರಾದರು.
ಲೇಖಕ ಹಾಗೂ ಸಾಮಾಜಿಕ ರಾಜಕೀಯ ಹೋರಾಟಗಾರರಾದ ಅರುಣ್ ಗಾಂಧಿ (89) ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಮಂಗಳವಾರ ಮೃತಪಟ್ಟಿದ್ದು, ಅಂತ್ಯಕ್ರಿಯೆಯನ್ನು ಕೊಲ್ಲಾಪುರದಲ್ಲಿ ನಡೆಸಲಾಯಿತು ಎಂದು ಅವರ ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಪ್ರಣಾಳಿಕೆಯಲ್ಲಿ ಪಂಚರತ್ನ ಯೋಜನೆ ನಕಲು ಮಾಡಿದ್ದಾರೆ: ಕುಮಾರಸ್ವಾಮಿ
Advertisement
Advertisement
1934ರಂದು ದಕ್ಷಿಣ ಆಫ್ರಿಕಾದ ಡರ್ಬನ್‍ನಲ್ಲಿ ಮಣಿಲಾಲ್ ಗಾಂಧಿ ಹಾಗೂ ಸುಶೀಲಾ ಮಶ್ರುವಾಲಾ ದಂಪತಿಗೆ ಜನಿಸಿದ ಅರುಣ್ ಗಾಂಧಿ ಅವರು ಹೋರಾಟಗಾರರಾಗಿ ತಮ್ಮ ತಾತ ಅಂದರೇ ಮಹಾತ್ಮ ಗಾಂಧಿ ಅವರ ಹೆಜ್ಜೆಯನ್ನೇ ಅನುಸರಿಸುತ್ತಿದ್ದರು. ಇದನ್ನೂ ಓದಿ: ಭಯೋತ್ಪಾದನೆಗೆ ಉತ್ತೇಜನ ಕೊಟ್ರೆ, PFI, ಭಜರಂಗದಳ ಆದ್ರೂ ಬ್ಯಾನ್ ಮಾಡಲಾಗುತ್ತೆ: ಬಿ.ಕೆ ಹರಿಪ್ರಸಾದ್