Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾತ್ಮ ಗಾಂಧೀಜಿ ಹೆಸರನ್ನ ಇತಿಹಾಸದಿಂದ ಅಳಿಸಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಾತ್ಮ ಗಾಂಧೀಜಿ ಹೆಸರನ್ನ ಇತಿಹಾಸದಿಂದ ಅಳಿಸಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

Bengaluru City

ಮಹಾತ್ಮ ಗಾಂಧೀಜಿ ಹೆಸರನ್ನ ಇತಿಹಾಸದಿಂದ ಅಳಿಸಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

Public TV
Last updated: December 28, 2025 6:27 pm
Public TV
Share
8 Min Read
DK Shivakumar 9
SHARE

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಈ ದೇಶದ ಇತಿಹಾಸದಿಂದ ಅಳಿಸಿಹಾಕಲು ಯಾರಿಗೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೆ ಎಂಬುದು ಇರಲೇಬೇಕಲ್ಲವೇ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಬಿಜೆಪಿ (BJP) ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿ ಹೋಗಿದ್ದಾರೆ. ಅಲೆಗ್ಸಾಂಡರ್ ದಿ ಗ್ರೇಟ್ ಇಡೀ ಪ್ರಪಂಚದ ಮುಕ್ಕಾಲು ಪಾಲು ಗೆದ್ದವರೇ ಶಾಶ್ವತವಲ್ಲ. ಸದ್ದಾಂ ಹುಸೇನ್ ಕೊನೆಗಾಲದಲ್ಲಿ ಅವಿತುಕೊಳ್ಳಬೇಕಾಯಿತು. ಇನ್ನು ಬೇರೆಯವರದ್ದು ಯಾವ ಲೆಕ್ಕ ಮನ್ರೇಗಾ ಹೆಸರು ಬದಲಾವಣೆ ವಿರೋಧಿಸಿ 2026ರ ಜನವರಿ 5ನೇ ತಾರೀಖಿನಿಂದ ಹೊಸ ಹೋರಾಟ ರೂಪಿಸಲಾಗುವುದು. ಪಂಚಾಯತಿ ಮಟ್ಟದಿಂದ ಈ ಹೋರಾಟ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ವೇಣುಗೋಪಾಲ್ ಸರ್ಕಾರದ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ, ಸಲಹೆ ನೀಡಿದ್ದಾರೆ: ಡಿಕೆಶಿ

ಗ್ಯಾರಂಟಿ ಸಮಿತಿ ಸದಸ್ಯರು, ಬೆಸ್ಕಾಂ, ಆರೋಗ್ಯ ಸಮಿತಿ ಸೇರಿದಂತೆ ಇತರೇ ಇಲಾಖೆಗಳಿಂದ ನಾಮನಿರ್ದೇಶನ ಮಾಡಿರುವ ಸದಸ್ಯರ ಸಂಖ್ಯೆಯೇ 150-200 ಇದ್ದು, ಇವರೆಲ್ಲರೂ ಹೋರಾಟದ ಜವಾಬ್ದಾರಿ ತೆಗೆದುಕೊಳ್ಳಬೇಕು ಅಂತ ಕರೆ ನೀಡಿದರು. ಎರಡು – ಮೂರು ತಿಂಗಳಿನಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಬೇಕಿದೆ. ಅದಕ್ಕೂ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ. ಪ್ರಿಯಾಂಕ್ ಖರ್ಗೆ ಅವರಿಗೂ ಇದರ ಬಗ್ಗೆ ತಿಳಿಸಿದ್ದು, ಮೀಸಲಾತಿ ವಿಚಾರವಾಗಿ ನ್ಯಾಯಾಲಯಗಳಲ್ಲಿ ಇರುವ ಕಂಟಕಗಳನ್ನು ಬಗೆಹರಿಸಿ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ ಎಂದಿದ್ದಾರೆ.

100 ಕಾಂಗ್ರೆಸ್ ಕಚೇರಿಗಳ ನಿರ್ಮಾಣ:
ಅಂದು ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ಎಐಸಿಸಿ ಅಧಿವೇಶನ ಹೇಗೆ ನಡೆಯಿತು ಎನ್ನುವ ಕುರಿತಾದ ಗಾಂಧಿ ಭಾರತ ಪುಸ್ತಕವನ್ನ ರೂಪಿಸಿದ್ದೇನೆ. ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಲಭ್ಯವಿದೆ. ಮಲ್ಲಿಕಾರ್ಜುನ ಖರ್ಗೆ ಅವರಿಂದ ಬಿಡುಗಡೆ ಮಾಡಿಸಬೇಕು ಎಂದು ಅವರ ಬಳಿ ಸಮಯ ಕೇಳಿದ್ದೇನೆ. ಇದೇ ಭಾರತ್ ಜೋಡೋ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಗುವುದು. ಇದರ ನೆನಪಿಗೆ 100 ಕಾಂಗ್ರೆಸ್ ಕಚೇರಿಗಳನ್ನು ನಿರ್ಮಾಣ ಮಾಡಬೇಕು ಎಂದು ಹೊರಟಿದ್ದೇವೆ. ಈಗಾಗಲೇ 70 ಕಾಂಗ್ರೆಸ್ ಕಚೇರಿಗಳು ನಿರ್ಮಾಣವಾಗಿವೆ. ಬೆಂಗಳೂರಿನಲ್ಲೂ ಎರಡು ಕಚೇರಿಗಳ ನಿರ್ಮಾಣ ಮಾಡಲಾಗುವುದು. ಒಂದಕ್ಕೆ ರಾಮಲಿಂಗಾರೆಡ್ಡಿ ಅವರು ಇನ್ನೊಂದು ಕಚೇರಿ ಜವಾಬ್ದಾರಿಯನ್ನು ನಾನು ತೆಗೆದುಕೊಂಡಿದ್ದೇನೆ. ಒಂದು ಜಿಲ್ಲಾ ಕಚೇರಿ ಇನ್ನೊಂದು ರಾಜ್ಯ ಕಚೇರಿ. ಮೈಸೂರಿನಲ್ಲಿಯೂ ಸಹ ದೊಡ್ಡ ಕಚೇರಿ ನಿರ್ಮಾಣ ಮಾಡಲಾಗುವುದು. ಇದರ ಜವಾಬ್ದಾರಿಯನ್ನು ಮುಖ್ಯಮಂತ್ರಿಯವರು ತೆಗೆದುಕೊಂಡಿದ್ದಾರೆ. ಮೈಸೂರು ಕಾಂಗ್ರೆಸ್ ಭವನಕ್ಕೆ ಎಲ್ಲಾ ಯೋಜನೆ ಅಂತಿಮ ಮಾಡಿ, ಭೂಮಿಪೂಜೆ ಕೂಡ ನೆರವೇರಿಸಿದ್ದೇನೆ ಎಂದು ಹೇಳಿದ್ದಾರೆ.

ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಅಧ್ಯಕ್ಷರುಗಳು ಅಡಿಪಾಯ ಹಾಕಲು ಕಾಯಲು ಹೋಗಬೇಡಿ. ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿಯವರು ಬೆಂಗಳೂರಿನಲ್ಲಿ ವರ್ಚುಯಲ್ ಆಗಿ ಎಲ್ಲಾ ಕಾಂಗ್ರೆಸ್ ಭವನಗಳ ಅಡಿಪಾಯಗಳಿಗೆ ಚಾಲನೆ ನೀಡಲಿದ್ದಾರೆ. ಆದರೆ ಎಲ್ಲಾ ತಯಾರಿಗಳನ್ನು ಈಗಲೇ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ. ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದು ಇಂದಿಗೆ 101 ವರ್ಷವಾಗಿದೆ. ಕಳೆದ ವರ್ಷ ಬೆಳಗಾವಿಯಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದೆವು. ಇಂತಹ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವ ಕೆಲಸ ಮಾಡಲಾಗುತ್ತಿದೆ. ನಿನ್ನೆ ನಡೆದ ಸಿಡ್ಬ್ಲ್ಯೂಸಿ ಸಭೆಯಲ್ಲಿ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರ ಗ್ರಾಮೀಣ ಭಾಗದಲ್ಲಿ ಬಡವರಿಗೆ ಉದ್ಯೋಗ ನೀಡುವ ಮನರೇಗಾ ಯೋಜನೆ ತಂದಿತ್ತು. ಕೇಂದ್ರ ಬಿಜೆಪಿ ಸರ್ಕಾರ ಈ ಯೋಜನೆಯನ್ನು ಹತ್ಯೆ ಮಾಡಲು ಮುಂದಾಗಿದೆ. ಈ ಯೋಜನೆಯಲ್ಲಿ 60:40 ಅನುಪಾತದಲ್ಲಿ ಅನುದಾನ ಹಂಚಿಕೆ ಮಾಡಿಕೊಳ್ಳುವ ಬದಲಾವಣೆ ತಂದಿದ್ದಾರೆ. ಬರಗಾಲ ಪ್ರದೇಶದಲ್ಲಿ ವರ್ಷಕ್ಕೆ 150 ಮಾನವ ದಿನಗಳ ಉದ್ಯೋಗ ನೀಡಲು ಕಾನೂನಿನಲ್ಲಿ ಸೂಚಿಸಲಾಗಿತ್ತು. ಆದರೆ ಅವರು ನಮ್ಮ ರಾಜ್ಯಕ್ಕೆ ಬರಗಾಲ ಇದ್ದಾಗಲೂ ನೀಡಲಿಲ್ಲ, ಕೋವಿಡ್ ಸಮಯದಲ್ಲೂ ನೀಡಲಿಲ್ಲ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಮಾದಕವಸ್ತು ಹಾವಳಿ – ಸಿಎಂ ಎಚ್ಚೆತ್ತುಕೊಳ್ಳದಿದ್ರೆ ಉಡ್ತಾ ಕರ್ನಾಟಕ ಆಗಲಿದೆ: ಬೊಮ್ಮಾಯಿ

ಕೇಂದ್ರ ಸರ್ಕಾರ ತರಲಾಗಿರುವ 60:40 ಅನುಪಾತದ ನೂತನ ತಿದ್ದುಪಡಿ ಯೋಜನೆಯನ್ನು ಬಿಜೆಪಿ ಆಡಳಿತ ರಾಜ್ಯಗಳಲ್ಲೂ ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲ. ಈ ಹಿಂದೆ ಮನರೇಗಾ ಯೋಜನೆಯನ್ನು ನನ್ನ ತಾಲ್ಲೂಕಿನಲ್ಲಿ ಬಹಳ ಯಶಸ್ವಿಯಾಗಿ ಅನುಷ್ಠಾನಕ್ಕೆ ತರಲಾಗಿತ್ತು. ಇಡೀ ದೇಶದಲ್ಲಿ ಕನಕಪುರ ಕ್ಷೇತ್ರದಲ್ಲಿ ಅತಿ ಹೆಚ್ಚು ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಲಾಗಿದೆ. ನಾನು ಇದರಲ್ಲಿ ಹಣ ಲೂಟಿ ಮಾಡಿರಬಹುದು ಎಂದು ಪರಿಶೀಲನೆ ಮಾಡಲು ಕೇಂದ್ರ ಸರ್ಕಾರ ಸುಮಾರು ಹತ್ತು ತಂಡಗಳನ್ನು ಕಳುಹಿಸಿ, ತನಿಖೆ ಮಾಡಿಸಿತ್ತು. ನಂತರ ಕೇಂದ್ರ ಸರ್ಕಾರ ನಮ್ಮ ಕ್ಷೇತ್ರಕ್ಕೆ ಪ್ರಶಸ್ತಿಯನ್ನು ನೀಡಿದೆ. ನನಗೆ ಪ್ರಶಸ್ತಿ ನೀಡಬೇಕಾಗುತ್ತದೆ ಎಂದು ಪಂಚಾಯಿತಿ ಅಧ್ಯಕ್ಷರನ್ನು ಕರೆದು ಅವರಿಗೆ ಪ್ರಶಸ್ತಿ ಕೊಟ್ಟರು. ಎಂದು ತಿಳಿಸಿದ್ದಾರೆ.

ಈ ಡಿ.ಕೆ.ಶಿವಕುಮಾರ್ ನಿಮ್ಮನ್ನು ಗುರುತಿಸುವುದಿಲ್ಲ. ಇಂದಿನಿಂದ ಆಕಾಂಕ್ಷಿ ಅಭ್ಯರ್ಥಿಗಳ ಅರ್ಜಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 50 ಸಾವಿರ ರೂ., ಪರಿಶಿಷ್ಟ ಅಭ್ಯರ್ಥಿಗಳಿಗೆ 25 ಸಾವಿರ ರೂ. ಹಣ ಕಟ್ಟಡ ನಿಧಿಗೆ ಹೋಗಲಿದೆ. ಏಕೆಂದರೆ ಜಿಲ್ಲಾ ಕಚೇರಿ ನಿರ್ಮಾಣಕ್ಕೆ 20 ಕೋಟಿ ರೂ., ರಾಜ್ಯ ಕಚೇರಿ ನಿರ್ಮಾಣಕ್ಕೆ 60 ಕೋಟಿ ರೂ. ಖರ್ಚಾಗಲಿದೆ. ತಾಲ್ಲೂಕು ಕಚೇರಿಗಳ ನಿರ್ಮಾಣಕ್ಕೂ ಕೆಪಿಸಿಸಿಯಿಂದ ಹಣ ನೀಡಬೇಕಲ್ಲವೇ. ಎಂಎಲ್‌ಎ ಚುನಾವಣೆ ವೇಳೆ 2 ಲಕ್ಷ ರೂ. ಹಣ ನಿಗದಿ ಮಾಡಲಾಗಿತ್ತು. ಇದರಿಂದ 20 ಕೋಟಿ ರೂ. ಹಣ ಸಂಗ್ರಹವಾಯಿತು. ಇದರಿಂದ ಪಕ್ಷದ ಪರವಾಗಿ ಜಾಹೀರಾತು ನೀಡಲು ಸಾಧ್ಯವಾಯಿತು. ಮಹಿಳೆಯರಿಗೆ ರಿಯಾಯಿತಿ ಇಲ್ಲ. ಒಂದು ಚುನಾವಣೆಗೆ ಎಷ್ಟು ಖರ್ಚಾಗುತ್ತದೆ ಎಂದು ನನಗೆ ತಿಳಿದಿದೆ ಎಂದು ಮಾಹಿತಿ ನೀಡಿದ್ದಾರೆ.

ಮಹಿಳೆಯರಿಗೆ ಹಾಗೂ ಓಬಿಸಿಗಳಿಗೆ ರಿಯಾಯಿತಿ ನೀಡಿ ಎಂದು ಸಭಿಕರು ಕೂಗಿದ ವೇಳೆಯಲ್ಲಿ, ಈಗಾಗಲೇ ಮಹಿಳೆಯರಿಗೆ ತಿಂಗಳಿಗೆ ಎರಡು ಸಾವಿರ, ಉಚಿತ ಬಸ್ ನೀಡಲಾಗುತ್ತಿದೆ. ಈ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾನು ಸಹ ಓಬಿಸಿ, ಒಕ್ಕಲಿಗರು ಓಬಿಸಿ ಎಂದು ತಿಳಿದಿದೆಯೇ? ಲಿಂಗಾಯತರು ಓಬಿಸಿ, ಆದಾಯ ಇಲ್ಲದ ಬ್ರಾಹ್ಮಣರು ಓಬಿಸಿ. ಇದೇ ವೇಳೆ ವೇದಿಕೆಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳೆಯರಿಗೆ 25 ಸಾವಿರ ರೂ. ಇರಲಿ ಎಂದರು. ಆಗ ಡಿಸಿಎಂ ಶಿವಕುಮಾರ್ ಅವರು ಸಿಎಂ ಹಾಗೂ ಜಾರ್ಜ್ ಹೇಳುತ್ತಿದ್ದಾರೆ ಎಂದು ಮಹಿಳೆಯರಿಗೆ 25 ಸಾವಿರ ರೂ. ನಿಗದಿ ಮಾಡಲಾಗುತ್ತಿದೆ. ನಿಮ್ಮ ದುಡ್ಡು ನನಗೆ ಬೇಡ ಮುಂದಿನ ಜನವರಿ 15ನೇ ತಾರೀಖಿನ ಒಳಗೆ ಅರ್ಜಿ ಹಾಕಬೇಕು. 369 ವಾರ್ಡ್ಗಳಿಂದ ಶೇ.50ರಷ್ಟು ಮೀಸಲಾತಿ ನೀಡಲಾಗಿದೆ. ಒಂದೊಂದು ಕ್ಷೇತ್ರದಿಂದ 10 ಮಂದಿ ಮಹಿಳೆಯರಾದರೂ ಅರ್ಜಿ ಸಲ್ಲಿಕೆ ಮಾಡಬೇಕು. ಯಾರೇ ಆದರೂ ಚೆನ್ನಾಗಿ ಕೆಲಸ ಮಾಡಿರಬೇಕು. ಅಂತಹವರಿಗೆ ಪ್ರಾಮುಖ್ಯತೆ ನೀಡಲಾಗುವುದು ಎಂದಿದ್ದಾರೆ.

ಯಾರು ಬೂತ್ ಮಟ್ಟದಲ್ಲಿ ಕೆಲಸ ಮಾಡುತ್ತಾರೋ ಅವರಿಗೆ ಅವಕಾಶ. ಸಿದ್ದರಾಮಯ್ಯ, ಶಿವಕುಮಾರ್ ಹಿಂದೆ ತಿರುಗಿದರೆ ಅವಕಾಶವಿಲ್ಲ. ಕೆಲಸ ಮಾಡಿದವರಿಗೆ ಹೆಚ್ಚು ಆದ್ಯತೆ. ವಿದ್ಯಾರ್ಥಿ ಚುನಾವಣೆ ಹೇಗೆ ನಡೆಸಬೇಕು ಎಂದು ತೀರ್ಮಾನಿಸಲು ಹೊಸ ಸಮಿತಿ ರಚನೆ ಮಾಡಲಾಗಿದೆ. ಇದರಿಂದ ಹೊಸ ನಾಯಕರನ್ನು ಬೆಳಕಿಗೆ ತರಲಾಗುವುದು. ಇಂದು ನಾವೆಲ್ಲರೂ ಕಾಂಗ್ರೆಸಿಗರೆಂದು ಗುರುತಿಸಿಕೊಳ್ಳುತ್ತೇವೆ. ನಾವು ಈ ದೇಶಕ್ಕೆ ಸ್ವಾತಂತ್ರ‍್ಯ ಹೋರಾಟಕ್ಕಾಗಿ ಹುಟ್ಟುಕೊಂಡ ಪಕ್ಷ. ಈ ದೇಶದ ಇತಿಹಾಸ, ದೇಶದ ಒಗ್ಗಟ್ಟಿಗೆ ಶ್ರಮಿಸಿರುವ ಪಕ್ಷ. ವಿವಿಧ ಭಾಷೆ, ಸಮುದಾಯಗಳನ್ನು ತ್ರಿವರ್ಣ ಧ್ವಜದ ಕೆಳಗೆ ಒಂದಾಗಿ ಇಟ್ಟ ಪಕ್ಷ ಕಾಂಗ್ರೆಸ್. ಇಂತಹ ಇತಿಹಾಸವನ್ನು ಕಾಂಗ್ರೆಸಿಗರು ಮಾತ್ರ ಹೇಳಲು ಸಾಧ್ಯವೇ ಹೊರತು, ಬಿಜೆಪಿಯವರಿಗೆ ಇತಿಹಾಸ ಹೇಳಲು ಸಾಧ್ಯವಿಲ್ಲ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ, ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಎಲ್ಲಾ ವರ್ಗದ ಬಗ್ಗೆ ಚಿಂತನೆ ಮಾಡಿದೆ. ಕಾರ್ಮಿಕರು, ರೈತರು, ವರ್ತಕರು, ವಿದ್ಯಾರ್ಥಿಗಳು ಮಕ್ಕಳಿಂದ ವಯಸ್ಸಾದವರವರೆಗೆ ಕಾರ್ಯಕ್ರಮ ಕೊಟ್ಟಿದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ. ನೆಹರು ಅವರು ಪಂಚವಾರ್ಷಿಕ ಯೋಜನೆ ಮಾಡಿದರು. ಇಂದಿರಾ ಗಾಂಧಿ ಅವರು ಬ್ಯಾಂಕುಗಳ ರಾಷ್ಟ್ರೀಕರಣ ಮಾಡಿದರು. ಆ ಮೂಲಕ ಜನರ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ ಒದಗಿಸುವಂತಾಗಿದೆ. ಉಳುವವನೆ ಭೂಮಿಯ ಒಡೆಯ ಮಾಡಿ, ಲಕ್ಷಾಂತರ ಜನರಿಗೆ ಬದುಕು ಕೊಟ್ಟಿದ್ದೇವೆ. ಮನಮೋಹನ್ ಸಿಂಗ್ ಅವರ ಸರ್ಕಾರದಲ್ಲಿ ಅರಣ್ಯ ಹಕ್ಕು ಕಾಯ್ದೆ ತಂದ್ದಿದ್ದೇವೆ. ಕಾನೂನು ಚೌಕಟ್ಟಿನಲ್ಲಿ ಸಂವಿಧಾನಬದ್ಧವಾಗಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ನಮ್ಮ ಗ್ಯಾರಂಟಿ ದೇಶಕ್ಕೆ ಮಾದರಿಯಾಗಿದೆ:
ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ಸಣ್ಣ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ ಕೊಡಲಾಯಿತು. ಶಾಲೆಯಿಂದ ವಿಮುಖರಾಗುತ್ತಿರುವ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲಾಯಿತು. ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮ ಮಾಡಲಾಗುತ್ತಿದೆ. ಸಣ್ಣ ಮಕ್ಕಳಿಗೆ ಅಂಗನವಾಡಿ ಕಾರ್ಯಕ್ರಮ ಇಂದಿರಾ ಗಾಂಧಿ ಅವರು ರೂಪಿಸಿದ್ದು, ಇವರು ವೃದ್ಧಾಪ್ಯ ವೇತನ ತಂದರು, ಮನಮೋಹನ್ ಸಿಂಗ್ ಅವರು ಶಿಕ್ಷಣದ ಹಕ್ಕು ಕೊಟ್ಟರು. ಹೀಗೆ ಕಾಂಗ್ರೆಸ್ ಸರ್ಕಾರ ತಂದ ಯೋಜನೆಗಳನ್ನು ಬೇರೆ ಸರ್ಕಾರಗಳು ತೆಗೆದುಹಾಕಲು ಸಾಧ್ಯವಾಯಿತೇ? ಆ ಮೂಲಕ ದೇಶದ ಜನರ ಬದುಕನ್ನು ಬದಲಿಸಿದ್ದೇವೆ. ಆಹಾರ ಭದ್ರತಾ ಕಾಯ್ದೆ, ಶೈಕ್ಷಣಿಕ ಹಕ್ಕು, ಮಾಹಿತಿ ಹಕ್ಕನ್ನು ಯುಪಿಎ ಸರ್ಕಾರದಲ್ಲಿ ಜಾರಿಗೆ ತರಲಾಯಿತು. ಇದರ ಆಧಾರದ ಮೇಲೆ ಸಿದ್ದರಾಮಯ್ಯ ಅವರು ಅನ್ನಭಾಗ್ಯ ಯೋಜನೆ ಜಾರಿಗೆ ತಂದರು. ಈಗ ಈ ಸರ್ಕಾರದಲ್ಲಿ ಐದು ಗ್ಯಾರಂಟಿ ನೀಡಿದ್ದೇವೆ. ನಮ್ಮ ಈ ಗ್ಯಾರಂಟಿ ಯೋಜನೆಗಳನ್ನು ಯಾರು ಎಷ್ಟೇ ತಿಪ್ಪರಲಾಗ ಹಾಕಿದರೂ ಯಾವುದೇ ಸರ್ಕಾರ ತೆಗೆದುಹಾಕಲು ಸಾಧ್ಯವಿಲ್ಲ ಎಂದಿದ್ದಾರೆ.

ಪ್ರಧಾನಮಂತ್ರಿಗಳು ಈ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದರು. ನಂತರ ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಬಿಹಾರ ರಾಜ್ಯದ ಚುನಾವಣೆವರೆಗೂ ಇದೇ ಯೋಜನೆಗಳನ್ನು ನಕಲು ಮಾಡಿದರು. ಬಿಹಾರದಲ್ಲಿ ಚುನಾವಣೆಗೆ ಒಂದು ತಿಂಗಳು ಮುಂಚಿತವಾಗಿ ಮಹಿಳೆಯರ ಖಾತೆಗೆ 10 ಸಾವಿರ ರೂ. ಹಾಕಿದರು. ಬೆಲೆ ಏರಿಕೆ ಗಗನಕ್ಕೇರಿದು, ಆದಾಯ ಪಾತಾಳಕ್ಕೆ ಕುಸಿಯುತ್ತಿದೆ. ಇದನ್ನು ತಪ್ಪಿಸಲು ನಾವು ಈ ಯೋಜನೆ ಜಾರಿಗೆ ತಂದೆವು. ಅಡುಗೆ ಅನಿಲ 400 ರೂ. ನಿಂದ 1000 ರೂ.ಗೆ ಏರಿಕೆಯಾಯಿತು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲಾ ಪದಾರ್ಥ ಬೆಲೆ ಹೆಚ್ಚಾಯಿತು. ಹೀಗಾಗಿ ಐದು ಗ್ಯಾರಂಟಿ ಯೋಜನೆ ಮೂಲಕ ಬಡವರಿಗೆ ಪ್ರತಿ ತಿಂಗಳು ಸುಮಾರು 5 ಸಾವಿರ ರೂ. ಆರ್ಥಿಕ ನೆರವು ನೀಡಲು ಮುಂದಾದೆವು. ನಮ್ಮ ಈ ಐತಿಹಾಸಿಕ ತೀರ್ಮಾನ ದೇಶಕ್ಕೆ ಮಾದರಿಯಾಗಿದೆ ಎಂದು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ನಮ್ಮ ಸರ್ಕಾರ 1 ಲಕ್ಷ ಕೋಟಿ ರೂ. ವೆಚ್ಚ ಮಾಡಿದೆ. ಇದರ ಸಂಭ್ರಮಾಚರಣೆ ಮಾಡಬೇಕು. ಇದನ್ನು ಬೆಂಗಳೂರಿನಲ್ಲಿ ಮಾಡುವುದಲ್ಲ, ಪ್ರತಿ ಪಂಚಾಯಿತಿಯಲ್ಲಿ ನಮ್ಮ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಲು ಸಜ್ಜಾಗಬೇಕು. ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಹೆಗಲ ಮೇಲೆ ರಾಷ್ಟ್ರಧ್ವಜವಿದೆ. ಬಿಜೆಪಿಯವರಿಗೆ ಇದು ಸಾಧ್ಯವಿಲ್ಲ. ಒಬ್ಬ ಕಾರ್ಯಕರ್ತ ಸತ್ತರೆ ರಾಷ್ಟ್ರಧ್ವಜ ಪ್ರತಿನಿಧಿಸುವ ನೂಲನ್ನು ಹಾಕಿ ಗೌರವ ಸಲ್ಲಿಸುವ ಅವಕಾಶವಿದೆ. ತಳಮಟ್ಟದಲ್ಲಿ ನಾಯಕರನ್ನು ಸೃಷ್ಟಿ ಮಾಡಲು ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಅವಕಾಶ ನೀಡಿದೆ. ಇಲ್ಲಿ ಶೇ.50ರಷ್ಟು ಹೆಣ್ಣು ಮಕ್ಕಳಿಗೆ ಮೀಸಲಾತಿ ನೀಡಲಾಗಿದೆ. ದೇಶದಾದ್ಯಂತ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಬಿಲ್ ಅನ್ನು ರಾಜ್ಯಸಭೆಯಲ್ಲಿ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಮಂಡಿಸಲಾಯಿತು ಎಂದು ಹೇಳಿದ್ದಾರೆ.ಇದನ್ನೂ ಓದಿ: ಮೈಸೂರು | ಹುಣಸೂರಿನಲ್ಲಿ ಹಾಡಹಗಲೇ ಗನ್‌ ತೋರಿಸಿ ಚಿನ್ನದಂಗಡಿ ದರೋಡೆ

TAGGED:bengaluruCentral govtcongressDK Shivakumarkarnatakaಕರ್ನಾಟಕಕಾಂಗ್ರೆಸ್ಕೇಂದ್ರ ಸರ್ಕಾರಡಿಕೆ ಶಿವಕುಮಾರ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

BBK 12
ಬಿಗ್‌ಬಾಸ್ ವಿನ್ನರ್‌ಗೆ 370000000 ವೋಟ್ – ಗೆಲ್ಲೋದ್ಯಾರು?
Latest Top Stories TV Shows
Narayana Gowda
BBK 12 | ಅಶ್ವಿನಿ ಗೌಡ ಪರ ನಾರಾಯಣ ಗೌಡ, ಗಿಲ್ಲಿ ಪರ ಪ್ರವೀಣ್‌ ಶೆಟ್ಟಿ ಬ್ಯಾಟಿಂಗ್‌
Bengaluru City Cinema Districts Karnataka Latest Main Post TV Shows
Gilli Rakshita Raghu Kavya
ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Bengaluru City Cinema Districts Karnataka Latest Mandya Top Stories TV Shows Udupi
Bigg Boss
6 ಮಂದಿಯಲ್ಲಿ ಕಪ್ ಗೆಲ್ಲೋರು ಯಾರು? ಯಾರ ಪರ ಅಭಿಮಾನಿಗಳ ಬಹುಪರಾಕ್?
Cinema Latest Main Post TV Shows

You Might Also Like

Smriti Mandhana
Cricket

ಸೋಲೇ ಇಲ್ಲ ಗೆಲುವೇ ಎಲ್ಲಾ – ಆರ್‌ಸಿಬಿಗೆ ಸತತ 4ನೇ ಜಯ; ಮಂಧಾನಗೆ ಸೆಂಚುರಿ ಜಸ್ಟ್‌ ಮಿಸ್‌!

Public TV
By Public TV
1 hour ago
IndiGo
Latest

ವಿಮಾನ ಹಾರಾಟದಲ್ಲಿ ವ್ಯತ್ಯಯ ಪ್ರಕರಣ – ಇಂಡಿಗೋ ಸಂಸ್ಥೆಗೆ ಬರೋಬ್ಬರಿ 22 ಕೋಟಿ ದಂಡ

Public TV
By Public TV
2 hours ago
Siddaramaiah 9
Bengaluru City

ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಗುರಿ: ಸಿದ್ದರಾಮಯ್ಯ

Public TV
By Public TV
2 hours ago
DCC Bank 3
Chikkamagaluru

ಚಿಕ್ಕಮಗಳೂರು | ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸಿ.ಟಿ ರವಿ – ಭೋಜೇಗೌಡಗೆ ಗೆಲುವು

Public TV
By Public TV
2 hours ago
Bheemanna Khandre DK Shivakumar
Bengaluru City

ದೆಹಲಿಯಿಂದ ಆಗಮಿಸಿ ಭೀಮಣ್ಣ ಖಂಡ್ರೆ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ ಡಿಕೆಶಿ

Public TV
By Public TV
2 hours ago
Zameer Ahmed Khan 1
Dharwad

ಜ.24 ರಂದು ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 42,345 ಮನೆಗಳ ಹಂಚಿಕೆ: ಸಚಿವ ಜಮೀರ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?