ವಾಷಿಂಗ್ಟನ್: ನ್ಯೂಯಾರ್ಕ್‍ನ ದೇವಾಲಯದ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಈ ತಿಂಗಳು ಎರಡನೇ ಬಾರಿಗೆ ಧ್ವಂಸಗೊಳಿಸಲಾಗಿದೆ.
ಆಗಸ್ಟ್ 16ರ ಮುಂಜಾನೆ ಈ ಘಟನೆ ನಡೆದಿದ್ದು, ಯುನೈಟೆಡ್ ಸ್ಟೇಟ್ ನಲ್ಲಿ ಗಾಂಧಿ ಪ್ರತಿಮೆಗಳ ಮೇಲೆ ನಡೆಯುತ್ತಿರುವ ದಾಳಿಗಳಲ್ಲಿ ಇದು ಇತ್ತೀಚಿನದ್ದಾಗಿದೆ. 6 ಮಂದಿ ಸೇರಿಕೊಂಡು ಶ್ರೀ ತುಳಸಿ ಮಂದಿರದಲ್ಲಿರುವ ಗಾಂಧಿ ಪ್ರತಿಮೆಯನ್ನು ಸುತ್ತಿಗೆಯಿಂದ ಹೊಡೆದು ಧ್ವಂಸಗೊಳಿಸಿದ್ದಾರೆ. ಇದರ ಸುತ್ತಲೂ ಹಾಗೂ ರಸ್ತೆ ಮೇಲೆ ಪ್ರಚೋದನಕಾರಿ ಪದಗಳನ್ನು ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಈ ಹಿಂದೆ ಆಗಸ್ಟ್ 3 ರಂದು ಕೂಡ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಹೊಡೆದು ಹಾಕಿ, ಧ್ವಂಸಗೊಳಿಸಲಾಗಿತ್ತು. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಶಂಕಿತ 25 ರಿಂದ 30 ವರ್ಷ ವಯಸ್ಸಿನ ವ್ಯಕ್ತಿಗಳ ವೀಡಿಯೋವನ್ನು ಪೊಲೀಸರು ಇದೀಗ ಬಿಡುಗಡೆಗೊಳಿಸಿದ್ದಾರೆ. ವೀಡಿಯೋದಲ್ಲಿ ಆರೋಪಿಗಳು ಬಿಳಿ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಪರಾರಿಯಾಗಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಎಷ್ಟೇ ತುಷ್ಟೀಕರಣದ ರಾಜಕಾರಣ ಮಾಡಲಿ ಮೊಟ್ಟೆ ಎಸೆಯಬೇಡಿ – ಪ್ರಹ್ಲಾದ್ ಜೋಶಿ
Advertisement
Advertisement
ಈ ಘಟನೆಯನ್ನು ನ್ಯೂಯಾರ್ಕ್ ಸ್ಟೇಟ್ ಅಸೆಂಬ್ಲಿ ಸದಸ್ಯೆ ಜೆನ್ನಿಫರ್ ರಾಜ್‍ಕುಮಾರ್ ಖಂಡಿಸಿದ್ದು, ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸಿ, ಕಾನೂನುಬದ್ಧವಾಗಿ ಪೂರ್ಣ ಪ್ರಮಾಣದಲ್ಲಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ. ತುಳಸಿ ಮಂದಿರದಲ್ಲಿರುವ ಗಾಂಧಿ ಪ್ರತಿಮೆಯನ್ನು ಎರಡನೇ ಬಾರಿ ಧ್ವಂಸಗೊಳಿಸಲಾಗಿದ್ದು, ಈ ಬಾರಿ ಸಂಪೂರ್ಣವಾಗಿ ಪ್ರತಿಮೆ ಧ್ವಂಸಗೊಂಡಿದೆ. ಇದನ್ನೂ ಓದಿ: ಫಿನ್‌ಲ್ಯಾಂಡ್ ಪ್ರಧಾನಿಯ ಖಾಸಗಿ ವೀಡಿಯೋ ಲೀಕ್ – ಮುಚ್ಚಿಡಲು ಏನೂ ಇಲ್ಲವೆಂದ ಮರಿನ್