ಮಂಗಳವಾರ ಬೆಂಗ್ಳೂರಲ್ಲಿ ಮಾಂಸ ಸಿಗಲ್ಲ

Public TV
1 Min Read
meat

ಬೆಂಗಳೂರು: ಮಹಾವೀರ ಜಯಂತಿ (Mahavir Jayanti) ಹಿನ್ನೆಲೆಯಲ್ಲಿ ಏಪ್ರಿಲ್ 4ರಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಪ್ರಾಣಿ ವಧೆ ಮತ್ತು ಮಾಂಸ (Meat) ಮಾರಾಟವನ್ನು ನಿಷೇಧ ಮಾಡಲಾಗಿದೆ ಎಂದು ಬಿಬಿಎಂಪಿ ಪಶುಪಾಲನಾ ಜಂಟಿ ನಿರ್ದೇಶಕರಿಂದ ಆದೇಶ ಹೊರಡಿಸಿದ್ದಾರೆ.

ಬಿಬಿಎಂಪಿ ಪಶುಪಾಲನಾ ಜಂಟಿ ನಿರ್ದೇಶಕರು ಈ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಈ ಸುತ್ತೋಲೆಯ ಪ್ರಕಾರ ಏ. 4 ಅಂದರೆ ಮಂಗಳವಾರ ಮಹಾವೀರ ಜಯಂತಿ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವ ಹಾಗಿಲ್ಲ ಎಂದು ತಿಳಿಸಿದೆ.

ಇತ್ತೀಚೆಗೆ ಅಂದರೆ ಮಾರ್ಚ್‌ 30ರಂದು ರಾಮನವಮಿಯಂದೂ ಬೆಂಗಳೂರಿನಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿತ್ತು. ರಾಮ ನವಮಿಯಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಕುರಿ, ಕೋಳಿ, ಮೀನು, ಮಾಂಸ ಮಾರಾಟ ನಿಷೇಧಿಸಿ ಆದೇಶಿಸಲಾಗಿತ್ತು. ರಾಮನವಮಿಯಂದು ಕಲಬುರಗಿ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆ ಸೇರಿದಂತೆ ವಿವಿಧ ನಗರಸಭಾ ವ್ಯಾಪ್ತಿಯಲ್ಲಿ ಸಹ ಇದೇ ರೀತಿ ಆದೇಶ ಹೊರಡಿಸಲಾಗಿತ್ತು.

Share This Article