ಲಂಡನ್: ಕ್ರಿಕೆಟ್ ಕಾಶಿ ಎಂದೇ ಹೆಸರು ಪಡೆದಿರುವ ಲಾರ್ಡ್ಸ್ ಅಂಗಳದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಭಾರತ ಪರ 300 ಕ್ಯಾಚ್ ಪಡೆದ ಮೊದಲ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದ ವೇಳೆ ಉಮೇಶ್ ಯಾದವ್ ಬೌಲಿಂಗ್ ನಲ್ಲಿ ಜೋಸ್ ಬಟ್ಲರ್ ಕ್ಯಾಚ್ ಪಡೆಯುವ ಮೂಲ ಧೋನಿ ಸಾಧನೆ ಮಾಡಿದರು. ವಿಶ್ವ ಕ್ರಿಕೆಟ್ ನಲ್ಲಿ ಈ ಸಾಧನೆ ಮಾಡಿದ 4 ನೇ ಆಟಗಾರ ಎನಿಸಿಕೊಂಡರು.
Advertisement
Advertisement
ಆಸ್ಟ್ರೇಲಿಯಾದ ಆ್ಯಡಂ ಗಿಲ್‍ಕ್ರಿಸ್ಟ್ (417), ದಕ್ಷಿಣ ಆಫ್ರಿಕಾದ ಮಾರ್ಕ್ ಬೌಷರ್ (402), ಶ್ರೀಲಂಕಾದ ಕುಮಾರ ಸಂಗಕ್ಕರ (383), ನ್ಯೂಜಿಲೆಂಡ್ ನ ಬ್ರೆಂಡನ್ ಮೆಕಲಮ್ (262) ಕ್ಯಾಚ್ ಪಡೆದಿದ್ದಾರೆ.
Advertisement
ಇಂಗ್ಲೆಂಡ್ ವಿರುದ್ಧ ಟಿ20 ಟೂರ್ನಿಯ ಪಂದ್ಯದ ವೇಳೆ 50 ಕ್ಯಾಚ್ ಪೂರ್ಣಗೊಳಿಸಿದ್ದರು. ಮೂಲಕ ಟಿ20 ನಾದರಿಯಲ್ಲಿ 50 ಕ್ಯಾಚ್ ಪಡೆದ ಮೊದಲ ವಿಕೆಟ್ ಕೀಪರ್ ಎನಿಸಿಕೊಂಡರು. ಅಲ್ಲದೇ ಟಿ20 ಮಾದರಿಯ ಇನ್ನಿಂಗ್ಸ್‍ವೊಂದರಲ್ಲಿ 5 ಕ್ಯಾಚ್ ಪಡೆದ ಆಟಗಾರ ಎಂಬ ಹೆಗ್ಗಳಿಕೆಯನ್ನು ಧೋನಿ ಪಡೆದಿದ್ದಾರೆ.
Advertisement
ಧೋನಿ ಇದುವರೆಗೂ ಆಡಿರುವ 320 ಏಕದಿನ ಪಂದ್ಯಗಳಲ್ಲಿ 107 ಸ್ಟಪ್ ಮಾಡಿದ್ದು, ಇದರಲ್ಲೂ ದಾಖಲೆ ಬರೆದಿದ್ದಾರೆ. ಅಲ್ಲದೇ ಏಕದಿನ ಮಾದರಿಯಲ್ಲಿ ಇದುವರೆಗೂ 407 ಬ್ಯಾಟ್ಸ್ ಮನ್ ಗಳನ್ನು ಔಟ್ ಮಾಡಿ ಭಾರತದ ಮೊದಲ, ವಿಶ್ವದ 4ನೇ ಕೀಪರ್ ಎಂಬ ದಾಖಲೆ ಹೊಂದಿದ್ದಾರೆ. ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 8 ವಿಕೆಟ್ ಗಳಿಂದ ಜಯಗಳಿಸಿತ್ತು.