ಟಾಲಿವುಡ್(Tollywood) ನಟ ಮಹೇಶ್ ಬಾಬು(Mahesh Babu) ಇತ್ತೀಚೆಗಷ್ಟೇ ತಾಯಿಯನ್ನ ಕಳೆದುಕೊಂಡು ಆಘಾತದಲ್ಲಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ಮಹೇಶ್ ಬಾಬು ಅವರ ತಂದೆ ಕೃಷ್ಣ (Krishna) ತೀವ್ರ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದು ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೆಲುಗಿನ ಸಾಕಷ್ಟು ಸಿನಿಮಾಗಳ ಮೂಲಕ ಹೈಪ್ ಕ್ರಿಯೇಟ್ ಮಾಡಿರುವ 80 ವರ್ಷದ ಲೆಜೆಂಡ್ ಆಕ್ಟರ್ ಕೃಷ್ಣ ಇದೀಗ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆಯ ನಂತರ ಕೃಷ್ಣ ಅವರ ಆರೋಗ್ಯ ಸ್ಟೇಬಲ್ ಆಗಿದೆ. ಜನರಲ್ ಚೆಕಪ್‌ಗೆ ಆಸ್ಪತ್ರೆಗೆ ಹೋಗಿದ್ದರು. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೃಷ್ಣ ಅವರ ಪಿಆರ್ ಸುರೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
PR info : Superstar Krishna’s health is stable. Visited hospital for general checkup. No need to worry. #Krishna
— Suresh Kondi (@SureshKondi_) November 14, 2022
ನವೆಂಬರ್ 13ರಂದು ಹಿರಿಯ ನಟ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆ ಇರುವ ಕಾರಣ ದಾಖಲಿಸಲಾಗಿತ್ತು ಎನ್ನಲಾಗುತ್ತಿದೆ. ಕೃಷ್ಣ ಅವರ ಪತ್ನಿ ಇಂದಿರಾ ದೇವಿ ನಿಧನದ ಬಳಿಕ ಕೃಷ್ಣ ಅವರ ಆರೋಗ್ಯದಲ್ಲೂ ಸಮಸ್ಯೆ ಕಂಡು ಬಂದಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ:`ಬನಾರಸ್’ ಚಿತ್ರದ ಬೆನ್ನಲ್ಲೇ ಝೈದ್ ಖಾನ್‌ಗೆ ಬಂತು ಬಿಗ್ ಆಫರ್
ಇನ್ನೂ ಸೂಪರ್ ಸ್ಟಾರ್ ಕೃಷ್ಣ 350ಕ್ಕೂ ಹೆಚ್ಚು ತೆಲುಗಿನ ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟ, ನಿರ್ಮಾಪಕನಾಗಿಯೂ ಸೈ ಎನಿಸಿಕೊಂಡಿದ್ದಾರೆ.