ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ದೇಶಾದ್ಯಂತ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯ ವೇಳೆ ಕೆಲ ಮುಖಂಡು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಳೆದ ವಾರ ಕಾಂಗ್ರೆಸ್ ಮಹಿಳಾ ನಾಯಕಿ ರೇಣುಕಾ ಚೌಧರಿ ಅವರು ಪಿಎಸ್‌ಐ ಅಧಿಕಾರಿಯ ಕೊರಳಪಟ್ಟಿ ಹಿಡಿದು ಎಳೆದಾಡಿದ್ದರು, ಮಹಿಳಾ ಪೊಲೀಸರ ಮೇಲೂ ತಮ್ಮ ದರ್ಪ ಮೆರೆದಿದ್ದರು. ಇಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಭದ್ರತೆಗೆ ನಿಯೋಜಿಸಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೆ ಉಗುಳಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಸುಳ್ಳು ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖಗಳು: ಸಿ.ಟಿ.ರವಿ
Advertisement
#WATCH | Mahila Congress President Netta D'Souza spits at police personnel during a protest with party workers in Delhi against ED for questioning Congress leader Rahul Gandhi in the National Herald case. pic.twitter.com/cPBIntJq1p
— ANI (@ANI) June 21, 2022
Advertisement
ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ನೆಟ್ಟಾ ಡಿಸೋಜಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಡಿಸೋಜಾ ಪೊಲೀಸರ ಮೇಲೆ ಉಗುಳಿ ಎಲ್ಲರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.
Advertisement
ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಬ್ಯಾರಿಕೇಡ್ ತಳ್ಳಿ ಪೊಲೀಸರ ಮೇಲೆ ನೂಕಾಟ ತಳ್ಳಾಟ ನಡೆಸಿದ್ದಾರೆ. ಇದರಿಂದ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ನೆಟ್ಟಾ ಡಿಸೋಜಾ ಅವರನ್ನು ವಶಕ್ಕೆ ಪಡೆದ ಪೊಲೀಸರು ವಾಹನದೊಳಕ್ಕೆ ಕೂಡಿ ಹಾಕಲು ಯತ್ನಿಸಿದ್ದಾರೆ. ಈ ವೇಳೆ ನೆಟ್ಟಾ ಡಿಸೋಜಾ ಮಹಿಳಾ ಪೊಲೀಸರ ಮೇಲೆ ಉಗುಳಿದ್ದಾರೆ. ಇದನ್ನೂ ಓದಿ: ಜು.1ರಿಂದ ಸ್ವಚ್ಛತಾ ಕಾರ್ಯ ಬಂದ್ – ಸಾರ್ವಜನಿಕರಿಗೆ ತೊಂದ್ರೆಯಾದ್ರೆ ಸರ್ಕಾರವೇ ಹೊಣೆ ಎಂದ ಪೌರಕಾರ್ಮಿಕರು
Advertisement
ಹಿನ್ನೆಲೆ ಏನು?: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸಿಲುಕಿರುವ ಎಐಸಿಸಿ ಮಾಜಿ ಅಧ್ಯಕ್ಷ ಸಂಸದ ರಾಹುಲ್ ಗಾಂಧಿ ಕಳೆದ ಸೋಮವಾರದಿಂದ ನಿರಂತರ ಇಡಿ ವಿಚಾರಣೆ ಎದುರಿಸುತ್ತಿದ್ದರು. 30 ಗಂಟೆಗಳ ವಿಚಾರಣೆಯಲ್ಲಿ ಸುಮಾರು 16 ಪ್ರಶ್ನೆಗಳಿಗೆ 70 ಪುಟಗಳ ಹೇಳಿಕೆ ದಾಖಲು ಮಾಡಿದ್ದರು. ಇಂದೂ ಸಹ ಇಡಿ ವಿಚಾರಣೆಗೆ ಹಾಜರಾಗಿದ್ದರು.
ಈ ನಡುವೆ ರಾಹುಲ್ ಗಾಂಧಿ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಸಲು ಸನ್ನದ್ಧವಾಗಿದೆ. ಕಳೆದ ವಾರವೂ ಉಗ್ರ ಹೋರಾಟ ಮಾಡಿದ್ದ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಲು ಸಿದ್ಧವಾಗಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ಎಐಸಿಸಿ ಮತ್ತು ಇಡಿ ಕಚೇರಿಯ ಸುತ್ತ 144 ಸೆಕ್ಷನ್ ಜಾರಿ ಮಾಡಿದ್ದು ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ.
ರಾಹುಲ್ ಗಾಂಧಿ ಅವರ ವಿಚಾರಣೆಗೆ ಸಂಬಂಧಿಸಿದ ಮಾಹಿತಿಯನ್ನು ಕೆಲವು ಮಾಧ್ಯಮಗಳಿಗೆ ಸೋರಿಕೆ ಮಾಡಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.